ರಾಜ್ಯ ಬಜೆಟ್‌ | ಗ್ರಾಮೀಣ ಭಾಗಕ್ಕೆ ಭರಪೂರ ಕೊಡುಗೆ ಕೊಟ್ಟ ಸಿದ್ದರಾಮಯ್ಯ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಮಂಡಿಸಿದ 15ನೇ ರಾಜ್ಯ ಆಯವ್ಯಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಗ್ರಾಮೀಣ ಭಾಗಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ.

ಪ್ರಸಕ್ತ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ಹಿರಿಯ ನಾಗರಿಕರ ಆರೈಕೆ ಮತ್ತು ಚಿಕಿತ್ಸೆಯನ್ನು ನಿರ್ವಹಿಸಲು ಆರೈಕೆ–ಉಪಶಮನ (Palliative Care) ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುವುದು. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದು ಲಕ್ಷ ರೂ. ನೆರವಿನೊಂದಿಗೆ ಎಸ್.ಹೆಚ್.ಜಿ.ಗಳ ಸಹಯೋಗದೊಂದಿಗೆ ಎಣ್ಣೆ ಗಾಣವನ್ನು ಸ್ಥಾಪಿಸಲಾಗುವುದು” ಎಂದು ಸಿಎಂ ಹೇಳಿದ್ದಾರೆ.

Advertisements

“ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸರ್ಕಾರದ ಮಾನ್ಯತೆಯುಳ್ಳ ದಾಖಲೆಗಳನ್ನು ಡಿಜಿಲಾಕರ್‌ ಆಪ್‌ನಲ್ಲಿ ಸುರಕ್ಷಿತವಾಗಿರಿಸುವ ಸಲುವಾಗಿ ನನ್ನ ಗುರುತು ಅಭಿಯಾನವನ್ನು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 1,000 ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶ ಕುರಿತ ಬಜೆಟ್‌ ಹೈಲೈಟ್ಸ್‌

  • ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸಲು ‘ಪ್ರಗತಿ ಪಥ ಯೋಜನೆ’ಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭ. ಈ ಈ ಯೋಜನೆ ಅಡಿಯಲ್ಲಿ 189 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ 50 ಕಿ.ಮೀ. ಉದ್ದದ ರಸ್ತೆಗಳಂತೆ, ಒಟ್ಟಾರೆಯಾಗಿ 9,450 ಕಿ.ಮೀ. ಉದ್ದದ ರಸ್ತೆ ಸಂಪರ್ಕ ಜಾಲವನ್ನು 5,200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯ ಭರವಸೆ.
  • ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಮಾದರಿಯಲ್ಲಿ ಒಟ್ಟು 1,150 ಕಿ.ಮೀ. ರಸ್ತೆಗಳನ್ನು 1,000 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಯ ಗುರಿ.
  • ಜೀತ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಂಡ ಕಾರ್ಮಿಕರ ಪುನರ್ವಸತಿಗಾಗಿ ನೀಡುವ ಮಾಸಿಕ ಪ್ರೋತ್ಸಾಹಧನವನ್ನು 2,000 ರೂ.ಗಳಿಗೆ ಹೆಚ್ಚಳ.
  • ಕರ್ನಾಟಕದಲ್ಲಿ ಗ್ರಾಮ ಪಂಚಾಯತಿಗಳು ಆರೋಗ್ಯ ರಕ್ಷಣೆ, ಘನತ್ಯಾಜ್ಯ ನಿರ್ವಹಣೆ, ಗ್ರಂಥಾಲಯ ನವೀಕರಣ ಮುಂತಾದ ಕ್ಷೇತ್ರಗಳಲ್ಲಿ ನಾಯಕತ್ವದ ಸಾಮರ್ಥ್ಯವನ್ನು ಪ್ರದರ್ಶಿಸಿವೆ. ಈ ದಿಸೆಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಸಾಮಾಜಿಕ ಕಳಕಳಿಯುಳ್ಳ ಸ್ಪಂದನಾಶೀಲ ಹಾಗೂ ಸಮರ್ಥ ಗ್ರಾಮ ಸರ್ಕಾರಗಳನ್ನಾಗಿ ರೂಪಿಸಲು ಕ್ರಮ.
  • 2024-25ನೇ ಸಾಲಿನಲ್ಲಿ 16 ಕೋಟಿ ಮಾನವ-ದಿನಗಳನ್ನು ಸೃಜಿಸಿ, ಸುಮಾರು 30 ಲಕ್ಷ ಕುಟುಂಬಗಳಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ. ಪ್ರಮುಖವಾಗಿ ಜಲಾನಯನ ಇಲಾಖೆಯ ಒಗ್ಗೂಡಿಸುವಿಕೆಯೊಂದಿಗೆ 5,000 ಎಕರೆ ಸವಳು-ಜವಳು ಭೂಮಿಯನ್ನು ಸುಧಾರಿಸುವ ಮತ್ತು ಪ್ರತಿ ತಾಲ್ಲೂಕಿಗೆ ಕನಿಷ್ಠ 2ರಂತೆ ಬೂದು ನೀರು ಸಂಸ್ಕರಣಾ ಘಟಕಗಳನ್ನು ನಿರ್ಮಾಣ ಮಾಡುವ ಗುರಿ.
  • ಅರಿವು ಕೇಂದ್ರಗಳನ್ನು ಬಲಪಡಿಸುವ ದೃಷ್ಠಿಯಿಂದ 132 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ. ಪುಸ್ತಕಗಳು, ಡಿಜಿಟಲ್‌ ಉಪಕರಣಗಳು ಹಾಗೂ ವಿಕಲಚೇತನ ಸ್ನೇಹಿ ಉಪಕರಣಗಳನ್ನು ಖರೀದಿಗೆ ಕ್ರಮ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X