ರಾಜ್ಯ ಬಜೆಟ್‌ | ಕೃಷಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ಕೊಟ್ಟಿದ್ದೇನು? ಇಲ್ಲಿದೆ ಮಾಹಿತಿ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ ಭಾಷಣದಲ್ಲಿ ಕವಿ ಪದ್ಮಶ್ರೀ ಸಿದ್ದಲಿಂಗಯ್ಯನವರ, “ಹೊಲವನುತ್ತು ಬಿತ್ತೋರು, ಬೆಳೆಯ ಕುಯ್ದು ಬೆವರೋರು, ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು” ಎಂಬ ಸಾಲು ನೆನೆದು ಕೃಷಿ ಇಲಾಖೆಗೆ ಸಂಬಂಧಿಸಿದ ಯೋಜನೆಗಳನ್ನು ಘೋಷಿಸಿದರು.

ಕಣ್ಮರೆಯಾಗುತ್ತಿರುವ ಮತ್ತು ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಹಾಗೂ ಸಂರಕ್ಷಿಸುವ ಉದ್ದೇಶದಿಂದ ‘ಸಮುದಾಯ ಬೀಜ ಬ್ಯಾಂಕ್’ ಸ್ಥಾಪನೆ

‘ನಮ್ಮ ಮಿಲ್ಲೆಟ್’ ಎಂಬ ಹೊಸ ಕಾರ್ಯಕ್ರಮ ಪ್ರಾರಂಭ. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್‌ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು.

Advertisements

ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ 1,000 ದಂತೆ ಒಟ್ಟು 5,೦೦೦ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಾಣದ ಗುರಿ. ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚನೆ

ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ

ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು.

ಕಾಂಗ್ರೆಸ್‌ ಸರ್ಕಾರದ ಹಿಂದಿನ ಅವಧಿಯಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿದೆ. 2023-24ನೇ ಸಾಲಿನಲ್ಲಿ ಈ ಯೋಜನೆಗೆ 200 ಕೋಟಿ ರೂ.ಗಳ ಅನುದಾನ.

ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ

ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ ಸಲಹೆ ನೀಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ e-SAP ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲು ಕ್ರಮ.

ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು 80 ಕೋಟಿ ರೂ. ಅನುದಾನ

ಆಹಾರ ಪಾರ್ಕ್‌ ಸ್ಥಾಪನೆ

ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‌ ಸ್ಥಾಪನೆ. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪನೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X