ಸರ್ಕಾರಿ ಜಾಗದಲ್ಲಿ RSS ಸೇರಿ ಎಲ್ಲ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ: ಸರ್ಕಾರದಿಂದ ಅಧಿಕೃತ ಆದೇಶ

Date:

ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಇತ್ತೀಚೆಗೆ ನಿರ್ಬಂಧ ವಿಧಿಸಿದ್ದ ರಾಜ್ಯ ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಆದೇಶವು ಇಂದಿನಿಂದಲೇ ಜಾರಿಯಾಗಲಿದೆ.

- Advertisement -

ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್ ಸೇರಿ ಯಾವುದೇ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದಾದ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರುಗಳು ನಡುವೆ ತೀವ್ರ ವಾಗ್ವಾದವೂ ನಡೆದಿತ್ತು. ಈ ನಡುವೆ ಖರ್ಗೆ ಅವರಿಗೆ ಬೆದರಿಕೆ ಕರೆಗಳೂ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಎಫೆಕ್ಟ್: ಸರ್ಕಾರಿ ಜಾಗದಲ್ಲಿ RSS ಸೇರಿ ಎಲ್ಲ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ

ಈ ಎಲ್ಲಾ ಬೆಳವಣಿಗೆ ನಡುವೆ ಸರ್ಕಾರಿ ಜಾಗವನ್ನು ದುರುಪಯೋಗ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರವು ಆರ್​ಎಸ್​ಎಸ್​ ಸೇರಿ ಖಾಸಗಿ ಸಂಘಟನೆಗಳ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿದೆ. ಕಾರ್ಯಕ್ರಮ ನಡೆಸುವುದಾದರೆ ಪೂರ್ವಾನುಮತಿ ಕಡ್ಡಾಯಗೊಳಿಸಿದೆ.

ಸರ್ಕಾರದ ಅಧಿಕೃತ ಆದೇಶ ಏನು ಹೇಳುತ್ತದೆ?

ಸರ್ಕಾರದ / ಸರ್ಕಾರಿ ಸಾಮ್ಯದ / ನಿಗಮ/ಮಂಡಳಿಗಳ ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು, ತೆರೆದ ಸ್ಥಳಗಳು ಮತ್ತು ಇತರ ಆಸ್ತಿ / ಜಾಗಗಳು ನಾಗರೀಕರ ಸದ್ಬಳಕೆಗೆ ನಿರ್ದಿಷ್ಟಪಡಿಸಲಾಗಿರುತ್ತದೆ. ಇವುಗಳನ್ನು ಸಾರ್ವಜನಿಕರು ಬಳಸಲು ಯಾವುದೇ ಅಡಚಣೆಗಳು, ಬೆದರಿಕೆಗಳು ಉದ್ಭವಿಸದಂತೆ ಕ್ರಮವಹಿಸುವುದು ಅತ್ಯಗತ್ಯವಾಗಿರುತ್ತದೆ. ಹಾಗೆಯೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು, ಸಾರ್ವಜನಿಕರ ಸಾರ್ವತ್ರಿಕ ಅಸಮಾಧಾನಗಳನ್ನು ನಿವಾರಿಸುವುದು ಸಹ ಅವಶ್ಯವಾಗಿರುತ್ತದೆ.

ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪ್ರಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್ಯರ ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು / ಸರ್ಕಾರದ ಆಸ್ತಿಗಳು, ಜಮೀನುಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಇತ್ಯಾದಿಗಳನ್ನು ಸರ್ಕಾರ ಅಥವಾ ಸಂಬಂಧಿತ ಇಲಾಖೆಗೆ ಮುಂಚಿತವಾಗಿ ಅನುಮತಿ ಪಡೆಯದೆ, ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದ ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ. ಇಂತಹ ಕ್ರಿಯೆಗಳು ಅಕ್ರಮ ಪ್ರವೇಶ (Tresspass) ಎಂದು ಪರಿಗಣಿಸಲ್ಪಡುತ್ತವೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಉಂಟುಮಾಡುತ್ತವೆ. ಈ ಕಾರಣದಿಂದ ಸರ್ಕಾರದ ಯಾವುದೇ ಆಸ್ತಿ / ಸ್ಥಳದ ಬಳಕೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ನಿಯಂತ್ರಿಸುವ ಸಲುವಾಗಿ ಯಾವುದೇ ಸಂಘಟನೆ, ಸಂಸ್ಥೆ, ಸಂಘವು ಆಯಾ ಸಾರ್ವಜನಿಕ ಆಸ್ತಿ/ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಬಳಸಿಕೊಳ್ಳಲು ಅನುಮತಿ ನೀಡುವುದು ಅಗತ್ಯವಾಗಿರುತ್ತದೆ.

ಇದನ್ನು ಓದಿದ್ದೀರಾ? ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ; ಆರ್‌ಎಸ್‌ಎಸ್‌ ಬೆಂಬಲಿಗ ದಿನೇಶ್‌ ಬಂಧನ

ಯಾವುದೇ ಚಟುವಟಿಕೆಗಳು ಸಾರ್ವಜನಿಕರಿಗೆ ಅನಾನುಕೂಲವಾಗುವುದಾದಲ್ಲಿ ಹಾಗೂ ಸಂಬಂಧಿಸಿದ ಸಂಸ್ಥೆಗಳ ಆವರಣ/ಜಾಗದಲ್ಲಿ ನಡೆಯುವ ಚಟುವಟಿಕೆಗಳಿಂದ ಆ ಸಂಸ್ಥೆಗಳ ಮೂಲ ಧ್ಯೇಯಕ್ಕೆ ಧಕ್ಕೆ ಉಂಟಾಗುವುದಾದಲ್ಲಿ ಅಂತಹ ಚಟುವಟಿಕೆಗಳ ಆಯೋಜನೆಗೆ ಸಕ್ಷಮ ಪ್ರಾಧಿಕಾರಗಳು ಅನುಮತಿಯನ್ನು ನಿರಾಕರಿಸತಕ್ಕದ್ದು.

ಯಾವೆಲ್ಲ ಸ್ಥಳಗಳಲ್ಲಿ ಅನುಮತಿ ಕಡ್ಡಾಯ?

ಈ ಕೆಳಕಂಡ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲಾಗುವ ಖಾಸಗಿ ಸಂಘ, ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅವುಗಳ ಎದುರಿಗೆ ನಮೂದಿಸಲಾದ ಮಾಲಿಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳು ಅನುಮತಿ ನೀಡುವುದನ್ನು ಪರಿಶೀಲಸತಕ್ಕದ್ದು:-

ಸರ್ಕಾರದ/ಸರ್ಕಾರಿ ಸಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣ – ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ

ಉದ್ಯಾನವನಗಳು, ಆಟದ ಮೈದಾನಗಳು, ಇತರೆ ತೆರೆದ ಸ್ಥಳಗಳು ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ

ಸಾರ್ವಜನಿಕ ರಸ್ತೆಗಳು, ಸರ್ಕಾರದ ಇತರೆ ಆಸ್ತಿ/ ಸ್ಥಳಗಳು – ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು/ ಪೊಲೀಸ್ ಅಧೀಕ್ಷಕರು.

ಇನ್ನು ಸೂಕ್ತ ಮಾರ್ಗಸೂಚಿಯನ್ನು ಆಯಾ ಇಲಾಖೆ ಹೊರಡಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶದಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...