ವೀರಶೈವ- ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿ ಸೇರ್ಪಡೆಗೆ ರಾಜ್ಯ ಸರ್ಕಾರ ಶಿಫಾರಸು ಮಾಡಲಿ: ಶಾಮನೂರು

Date:

Advertisements

ಸಕಲ ವೀರಶೈವ- ಲಿಂಗಾಯತರನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ (ಒಬಿಸಿ) ಸೇರ್ಪಡೆಗೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ಆಗ್ರಹಿಸಿದರು.

ಸೋಮವಾರ ಹರಿಹರ ಸಮೀಪದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ನಡೆದ ಹರ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಅವರು, “ವೀರಶೈವ-ಲಿಂಗಾಯತ ಬೇರೆ ಬೇರೆ ಅಲ್ಲ. ಎಲ್ಲರೂ ಒಂದೇ. ವೀರಶೈವ ಲಿಂಗಾಯತರು ಒಳಪಂಗಡಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬಾರದು. ಎಲ್ಲ ವೀರಶೈವ ಲಿಂಗಾಯತರು ಒಂದೇ ಎಂಬುದನ್ನು ತಿಳಿಯಬೇಕು” ಎಂದು ಹೇಳಿದರು.

ಇಡೀ ವೀರಶೈವ ಲಿಂಗಾಯತ ಸಮಾಜಕ್ಕೆ ಒಂದೇ ಮೀಸಲಾತಿ ಇರಬೇಕು. ವೀರಶೈವ ಲಿಂಗಾಯತರು ಕೆಲವರು 2ಎ, 2ಎ, 2ಬಿ ಹಾಗೂ ಎಸ್ಸಿ ಮೀಸಲಾತಿ ಪಡೆಯುತ್ತಿದ್ದಾರೆ. ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎನ್ನವಂತಾಗಿದೆ. ನಾವು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೇಳುತ್ತಿದ್ದೇವೆ. ನಾವು ಸಮಾಜವನ್ನು ಒಡೆಯುವುದಿಲ್ಲ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

“ನಮ್ಮ ಸಮಾಜದ 2ಎ ಮೀಸಲಾತಿಗಾಗಿ ನಾವು ಕಾನೂನು ಹೋರಾಟವೂ ಮಾಡುತ್ತಿದ್ದೇವೆ ಈಗಾಗಲೇ ನಾವು ಸಕಲ ಲಿಂಗಾಯತರನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರ್ಪಡೆ ಆಗಬೇಕು. ನಮ್ಮ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕು. ಈ ಹಿಂದೆ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಮೀಸಲಾತಿ ಪ್ರಕಟಿಸಿದನ್ನು ನಾವು ವಿರೋಧಿಸಿಯೂ ಇಲ್ಲ. ಸ್ವಾಗತಿಸಿಯೂ ಇಲ್ಲ” ಎಂದು ಹೇಳಿದರು.

“ಸಮಾಜದ ಬಡ ಮಕ್ಕಳಿಗೆ ಶಿಕ್ಷಣ, ಉದ್ಯೋಗಕ್ಕೆ ಅನುಕೂಲ ಆಗುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಂಡು ಕೇಂದ್ರ ಸರ್ಕಾರ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಬೇಕು. ಧರ್ಮ ಎಂಬ ವಿಚಾರಕ್ಕೆ ಬಂದರೆ ಸಕಲ ವೀರಶೈವ ಲಿಂಗಾಯತರು ಹಿಂದೂಗಳು. ಜ. 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಆಗಲಿದೆ. ನಮಗೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ. ಎಲ್ಲ ವೀರಶೈವ ಲಿಂಗಾಯತರು ಆ ದಿನ ಎಲ್ಲರೂ ಅಂದೇ ರಾಮ ನವಮಿ ಎಂದು ತಿಳಿದು ಪೂಜೆ ಮಾಡಿ” ಎಂದು ವಚನಾನಂದ ಸ್ವಾಮೀಜಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X