ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಡಾ. ಎಂ. ಚಂದ್ರ ಪೂಜಾರಿ ನೇಮಕ

Date:

Advertisements

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ, ಲೇಖಕ, ಚಿಂತಕ ಡಾ. ಎಂ. ಚಂದ್ರ ಪೂಜಾರಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಧಾರವಾಡದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಉನ್ನತ ಶಿಕ್ಷಣ ಅಕಾಡೆಮಿಯು, ರಾಜ್ಯದ ಉನ್ನತ ಶಿಕ್ಷಣದ ನೀತಿ ನಿರೂಪಣೆಯನ್ನು ಸಿದ್ಧಗೊಳಿಸುವಲ್ಲಿ ಸರಕಾರಕ್ಕೆ ಸಲಹೆ, ಮಾರ್ಗಸೂಚಿಗಳನ್ನು ನೀಡುವ ಅತ್ಯುನ್ನತ ಸಂಸ್ಥೆಯಾಗಿದೆ.

ಡಾ.ಚಂದ್ರ ಪೂಜಾರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಹಾವೇರಿ ಜಾನಪದ ವಿಶ್ವವಿದ್ಯಾಲಯದ ಅನ್ವಯಿಕ ಜಾನಪದ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದಾರೆ.

Advertisements

ಸಮಾಜ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಚಂದ್ರ ಪೂಜಾರಿ ಅವರು ಪ್ರಥಮ ಬಾರಿಗೆ ರಾಜ್ಯದಲ್ಲಿ ದಲಿತ್ ಡೆವೆಲಪ್ಮೆಂಟ್ ಇಂಡೆಕ್ಸ್ ಸಿದ್ಧಗೊಳಿಸಿದ ತಜ್ಞರಾಗಿದ್ದಾರೆ.‌

order

ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕೋರ್ ಕಮಿಟಿ ಸದಸ್ಯರಾಗಿ, ಸ್ಟೇಟ್ ಹ್ಯೂಮನ್ ಡೆವಲಪ್ಮೆಂಟ್ ಇಂಡೆಕ್ಸ್ ಕೋರ್ ಕಮಿಟಿ ಸದಸ್ಯರರಾಗಿ, ರಾಜ್ಯ ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ, ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ಒಟ್ಟು 22 ಕೃತಿಗಳನ್ನು ಬರೆದಿರುವ ಡಾ.ಚಂದ್ರ ಪೂಜಾರಿ ಅವರು, ವಿಜಯ ಕರ್ನಾಟಕ, ಕನ್ನಡಪ್ರಭ ಪತ್ರಿಕೆಯ ಅಂಕಣಗಾರರಾಗಿ, ಪ್ರಜಾವಾಣಿ ಪತ್ರಿಕೆಯ ಲೇಖಕರಾಗಿ ನಿರಂತರವಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡವರು.‌ ರಾಜ್ಯದ ವಿವಿಧ ಟಿ.ವಿ.ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ನಿರಂತರವಾಗಿ ವಿಚಾರ ಮಂಡನೆ ಮಾಡುತ್ತಿರುವರಾಗಿದ್ದಾರೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನವರಾದ ಚಂದ್ರ ಪೂಜಾರಿ, ಸೈಂಟ್ ಫಿಲೋಮಿನಾ ಹೈಸ್ಕೂಲ್ , ಹಾಗೂ ಸೈಂಟ್ ಪಿಲೋಮಿನಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎಂ.ಕಾಮ್ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಿದ್ದರು. ಇದೇ ವಿಶ್ವವಿದ್ಯಾಲಯದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯದಲ್ಲಿ ಪಿ.ಎಚ್.ಡಿ ಪದವಿ ಕೂಡ ಪಡೆದಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X