ಹೆಣ್ಣು ಭ್ರೂಣ ಹತ್ಯೆ ತಡೆಗೆ ರಾಜ್ಯಮಟ್ಟದ ಟಾಸ್ಕ್ ಫೋರ್ಸ್: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ರಚಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

- Advertisement -

ಅವರು ಇಂದು(ಡಿ.14) ಬೆಳಗ್ಗೆ ವಿಧಾನಸಭೆಯ ಕಲಾಪದ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಪ್ರಸ್ತಾಪಿಸಿದ ರಾಜ್ಯದಲ್ಲಿ ಭ್ರೂಣಹತ್ಯೆ ತಡೆಗಟ್ಟುವ ಕುರಿತ ವಿಷಯಕ್ಕೆ ಉತ್ತರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಕಾನೂನಾತ್ಮಕ ರಕ್ಷಣೆ, ಸಮಾನ ಹಕ್ಕು, ಸಾಮಾಜಿಕ ನ್ಯಾಯ ದೊರಕುವಂತೆ ಸರ್ಕಾರಗಳು ಕ್ರಮ ವಹಿಸಿವೆ. ಭ್ರೂಣಹತ್ಯೆ ಒಂದು ಸಾಮಾಜಿಕ ಪಿಡುಗು ಆಗಿ ಮಹಿಳೆಯರನ್ನು ಶೋಷಣೆ ಮಾಡುತ್ತಿದೆ. ಈ ಕುರಿತು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮತ್ತು ಇದರಲ್ಲಿನ ಅಪರಾಧಿಗಳನ್ನು ಕಠಿಣವಾಗಿ ಶಿಕ್ಷಿಸಲು ಅನುವಾಗುವಂತೆ ಈಗಿರುವ ಕಾನೂನುಗಳಿಗೆ ಮತ್ತು ಐಪಿಸಿ ತಿದ್ದುಪಡಿ ಮಾಡಿ, ಈ ಭ್ರೂಣಹತ್ಯೆಯನ್ನು ತಡೆಗಟ್ಟಲು ವಿಶೇಷವಾದ ಮತ್ತು ಸಮಗ್ರವಾದ ಹೊಸ ನೀತಿಯನ್ನು ರೂಪಿಸಲಾಗುವುದು” ಎಂದು ತಿಳಿಸಿದರು.

“ಆರೋಗ್ಯ ಇಲಾಖೆಯು 1994ರಲ್ಲಿ ರಚನೆಗೊಂಡಿರುವ ಪಿ.ಸಿ.ಪಿ.ಎನ್.ಡಿ.ಟಿ. ಕಾಯ್ದೆಯನ್ವಯ ಲಿಂಗ ಪತ್ತೆಯನ್ನು ನಿಷೇಧಿಸಿದೆ. ಆದರೂ ಭ್ರೂಣಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. 2002ರಿಂದ 2023ರ ಆರೋಗ್ಯ ಇಲಾಖೆಯ ಈ ಕುರಿತ ವರದಿಯನ್ನು ನೋಡಿದಾಗ ಕೇವಲ 100 ಪ್ರಕರಣಗಳು ದಾಖಲಾಗಿವೆ. ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ಕಂಡು ಬಂದಿದೆ. ಕಳೆದ ವರ್ಷ 1000ಕ್ಕೆ 947 ಇದ್ದ ಲಿಂಗಾನುಪಾತ ಪ್ರಸಕ್ತ ವರ್ಷ 929ಕ್ಕೆ ಇಳಿದಿದೆ. ಈ ಕುರಿತು ಎಲ್ಲರೂ ಗಂಭೀರವಾಗಿ ಚಿಂತಿಸಬೇಕಿದೆ” ಎಂದರು.

“ಭ್ರೂಣ ಹತ್ಯೆ ಅಪರಾಧ ಪ್ರಕರಣಗಳಲ್ಲಿ ಭಾಗವಹಿಸುವವರನ್ನು ಕಠಿಣವಾಗಿ ಶಿಕ್ಷಿಸುವ ಕ್ರಮವಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಭ್ರೂಣಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಈ ಕುರಿತು ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಆದಷ್ಟು ಶೀಘ್ರದಲ್ಲಿ ತನಿಖಾ ವರದಿಯನ್ನು ಪಡೆಯಲು ಸರ್ಕಾರ ಕ್ರಮವಹಿಸಲಿದೆ. ಪಿ.ಸಿ.ಪಿ.ಎನ್.ಡಿ.ಟಿ. ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ದೇಶಿಸಲಾಗಿದೆ. ರಾಜ್ಯಾದ್ಯಂತ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮತ್ತು ಗ್ರಾಮಮಟ್ಟದಿಂದ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವ ಕುರಿತು ದೀರ್ಘಕಾಲಿನ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ” ಎಂದು ಸಚಿವ ಗುಂಡೂರಾವ್ ತಿಳಿಸಿದರು.

“ಲಿಂಗ ಪತ್ತೆ ಮತ್ತು ಭ್ರೂಣಹತ್ಯೆಯಂತಹ ಅಪರಾಧ ಮಾಡುವವರ ಮೇಲೆ ಮತ್ತು ಮಾಡಿಸುವವರ ಮೇಲೆ ಇಬ್ಬರ ಮೇಲೂ ಸೂಕ್ತ ಕ್ರಮವಾಗಬೇಕು. ಈ ಕುರಿತು ವಿಶೇಷ ಟಾಸ್ಕ್‌ಫೋರ್ಸ್ ರಚಿಸಲು ನಿರ್ಧರಿಸಿದ್ದು, ಇದು ನಿರಂತರ ನಿಗಾ ವಹಿಸಲಿದೆ. ರಾಜ್ಯಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಿದೆ ಮತ್ತು ಉಪ ವಿಭಾಗಮಟ್ಟದಲ್ಲಿ ತಪಾಸಣಾ ಸಮಿತಿಗಳನ್ನು ರಚಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳ ಪರಿಶೀಲನೆ ಹಾಗೂ ಪಿ.ಸಿ.ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಜಾರಿಗೆ ನಿರಂತರ ನಿಗಾ ವಹಿಸಲಿದೆ” ಎಂದು ಆರೋಗ್ಯ ಸಚಿವರು ತಿಳಿಸಿದರು.

“ಮಂಡ್ಯ, ಮೈಸೂರು, ಬೆಂಗಳೂರಿನಲ್ಲಿ ಭ್ರೂಣಪತ್ತೆ ಮತ್ತು ಹತ್ಯೆ ಪ್ರಕರಣಗಳಲ್ಲಿ ಭಾಗಿಯಾದವರನ್ನು ಬಂಧಿಸಿ ಕ್ರಮ ವಹಿಸಲಾಗಿದೆ ಮತ್ತು ನಿನ್ನೆ ದಿನ ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ವರದಿಯಾಗಿರುವ ಭ್ರೂಣಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಆಸ್ಪತ್ರೆಯನ್ನು ಜಪ್ತಿ ಮಾಡಲಾಗಿದೆ. ಆರೋಗ್ಯ ಇಲಾಖೆ ತಕ್ಷಣ ಕ್ರಮವಹಿಸಿದೆ” ಎಂದು ಆರೋಗ್ಯ ಸಚಿವರು ಸದನಕ್ಕೆ ತಿಳಿಸಿದರು.

ಮುಂದಿನ ಅಧಿವೇಶನದಲ್ಲಿ ಕಾನೂನು ರಚನೆ

ಭ್ರೂಣಹತ್ಯೆ ವಿಷಯ ಚರ್ಚೆಯಲ್ಲಿ ಭಾಗವಹಿಸಿದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸಕ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಮಾತನಾಡಿ, “ಭ್ರೂಣಹತ್ಯೆ ಮಹಾಪಾಪ. ಈ ಕೃತ್ಯವನ್ನು ತಡೆಗಟ್ಟಲು ಸರ್ಕಾರವು ಮುಂದಿನ ಅಧಿವೇಶನದಲ್ಲಿ ವಿಶೇಷ ಕಾನೂನು ರೂಪಿಸಿ ಜಾರಿಗೊಳಿಸಲಿದೆ” ಎಂದರು.

ಚರ್ಚೆಯಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ಶರತ್ ಬಚ್ಚೇಗೌಡ, ಶಶಿಕಲಾ ಜೊಲ್ಲೆ, ನರೇಂದ್ರಸ್ವಾಮಿ, ಡಾ. ಮಂಥನಗೌಡ, ಡಾ. ಶ್ರೀನಿವಾಸ ಸೇರಿದಂತೆ ಸದನದ ಸದಸ್ಯರು ಭಾಗವಹಿಸಿ ತಮ್ಮ ಸಲಹೆ, ಅಭಿಪ್ರಾಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...