ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

Date:

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆ ಏ.20ರಂದು ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ತಿಳಿಸಿದರು.

- Advertisement -

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಏ.20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಮಧ್ಯ, ಬೆಂಗಳೂರು ಉತ್ತರ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಸಭೆ ಇದಾಗಿರುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರವಾಸ ಕೂಡ ನಿಗದಿಯಾಗಿದೆ. ಏ.23, 24ರಂದು ಕರ್ನಾಟಕದಲ್ಲಿ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಭಾಗವಹಿಸುತ್ತಾರೆ. 23ರಂದು ಬೆಳಿಗ್ಗೆ ಯಶವಂತಪುರದಲ್ಲಿ ರೋಡ್ ಷೋ, ಬಳಿಕ ಯಲಹಂಕದಲ್ಲಿ ಸಾರ್ವಜನಿಕ ಸಭೆ ಇರುತ್ತದೆ. ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಷೋ ಇರುತ್ತದೆ. ನಂತರ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಷೋ ಇರಲಿದೆ” ಎಂದು ವಿವರಿಸಿದರು.

ಏ.24ರಂದು ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಅಮಿತ್‌ ಶಾ ಭಾಗವಹಿಸಲಿದ್ದಾರೆ. ಸಂಜೆ ಹುಬ್ಬಳ್ಳಿ ರೋಡ್ ಷೋದಲ್ಲಿ ಪಾಲ್ಗೊಳ್ಳುತ್ತಾರೆ” ಎಂದು ಹೇಳಿದರು.

ಏ.24ರಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ ಪ್ರಚಾರ ಸಭೆಗಳಲ್ಲಿ ಭಾಗವಹಿಸುತ್ತಾರೆ. ಬೆಳಿಗ್ಗೆ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಷೋ, ಮಧ್ಯಾಹ್ನ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ, ಸಂಜೆ ಉಡುಪಿಯ ಮಲ್ಪೆಯಲ್ಲಿ ಸಾರ್ವಜನಿಕ ಸಭೆ ಇರುತ್ತದೆ” ಎಂದು ವಿವರಿಸಿದರು.

“ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 21ರಂದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 24ರಂದು ರಾಜ್ಯ ಪ್ರವಾಸ ಮಾಡಲಿದ್ದಾರೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...