ಮುಖ್ಯಮಂತ್ರಿ ಬದಲಾವಣೆಯಾದ್ರೆ ರಾಜ್ಯಾದ್ಯಂತ ಹೋರಾಟ; ಅಹಿಂದ ಎಚ್ಚರಿಕೆ

Date:

ಡಿ.ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕೆಂಬ ಬಗ್ಗೆ ಒಕ್ಕಲಿಗ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಉಪಮುಖ್ಯಮಂತ್ರಿ ಸ್ಥಾನಗಳ ಬಗ್ಗೆ ಸಚಿವ, ಶಾಸಕರ ಮಾತುಗಳು, ಮುಖ್ಯಮಂತ್ರಿ ಹುದ್ದೆಯ ಕುರಿತ ಸ್ವಾಮೀಜಿಗಳ ಹೇಳಿಕೆಗಳು ರಾಜಕೀಯದಲ್ಲಿ ತಲ್ಲಣ ಸೃಷ್ಠಿಸಿವೆ. ಇದೀಗ, ಮುಖ್ಯಮಂತ್ರಿ ಬದಲಾವಣೆ ಮಾಡಿದರೆ, ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ರಾಜ್ಯಾದ್ಯಂತ ಬೃಹತ್ ಹೋರಾಟಗಳನ್ನು ನಡೆಸುತ್ತೇವೆಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಎಚ್ಚರಿಕೆ ನೀಡಿದ್ದಾರೆ.

- Advertisement -

ಸಿದ್ದರಾಮಯ್ಯ ಜನ್ಮ ದಿನಾಚರಣೆ ಆಚರಿಸುವ ಸಂಬಂಧ ಹುಬ್ಬಳ್ಳಿಯಲ್ಲಿ ಅಹಿಂದ ಮುಖಂಡರು ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೊಡ್ಡಣಿ, “5 ವರ್ಷ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರಬೇಕು. ಸಿದ್ದರಾಮಯ್ಯ ಅವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ, ಬೃಹತ್ ಹೋರಾಟಗಳನ್ನು ನಡೆಸುತ್ತೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಕೆಲವು ಸ್ವಾಮೀಜಿಗಳು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಸ್ವಾಮೀಜಿಗಳು ರಾಜಕೀಯ ಹೇಳಿಕೆ ನೀಡುವುದು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತರುತ್ತವೆ. ಚಂದ್ರಶೇಖರ ಸ್ವಾಮೀಜಿ ಅವರದ್ದು ವೈಯಕ್ತಿಕ ಅಭಿಪ್ರಾಯ. ಅವರ ಅಭಿಪ್ರಾಯಕ್ಕೆ ಕಾಂಗ್ರೆಸ್‌ ಮಣೆಹಾಕಬಾರದು” ಎಂದಿದ್ದಾರೆ.

“ಮುಖ್ಯಮಂತ್ರಿ ಬದಲಾವಣೆ ಆದ್ರೆ, ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತದೆ. ಅಹಿಂದ ನಾಯಕರನ್ನು ತುಳಿಯುವ ಕೆಲಸ ನಡೆಯುತ್ತಿದೆ. ಪ್ರತಿ ಜಿಲ್ಲೆಯಲ್ಲೂ ಅಹಿಂದ ಸಂಘಟನೆ ಮಾಡಿದ್ದೇವೆ. ರಾಜ್ಯದ ಜನರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದಾರೆ. ಅವರ ಕಾರಣಕ್ಕಾಗಿಯೇ ಕಾಂಗ್ರೆಸ್​​ಗೆ ಮತ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...