ಬಿಜೆಪಿ ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಅಂಗಾರ

Date:

“ಪಕ್ಷ ಟಿಕೆಟ್‌ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ…”

ಸುಳ್ಯ ಕ್ಷೇತ್ರದ ಶಾಸಕ ಮತ್ತು ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರ ಪ್ರತಿಕ್ರಿಯೆ ಇದು. ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನಿರಾಕರಿಸಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

“ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಯಾವುದೇ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ಈಗ ರಾಜ್ಯ ರಾಜಕಾರಣದಲ್ಲಿ ನನಗೆ ಮುಳುವಾಗಿದೆ” ಎಂದು ಬಿಜೆಪಿ ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹೊಸ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವುದು ಪಕ್ಷಕ್ಕೆ ಬಿಟ್ಟ ವಿಚಾರ. ರಾಜ್ಯ ರಾಜಕಾರಣದಲ್ಲಿ ಬಿಜೆಪಿಯಿಂದ ಟಿಕೆಟ್‌ ಪಡೆಯುವುದಕ್ಕೆ ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಆದರೆ, ಟಿಕೆಟ್‌ಗೆ ಲಾಬಿ ಮಾಡದಿರುವುದೇ ನನಗೆ ತೀವ್ರ ಹಿನ್ನಡೆಯಾಯಿತು” ಎಂದಿದ್ದಾರೆ.

“ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಭಾಗಿಯಾಗುವುದಿಲ್ಲ. ಈಗ ಬಿಜೆಪಿ ಪಟ್ಟಿಯಲ್ಲಿ ಘೋಷಣೆ ಮಾಡಿರುವ ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು” ಎಂದು ಖಾರವಾಗಿಯೇ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...