ಬೆಂಗಳೂರು | ಪೋಷಕರ ಮೇಲೆ ದ್ವೇಷ; ಬಾಲಕಿ ಮೇಲೆ ನಾಯಿ ಛೂ ಬಿಟ್ಟ ದುರುಳ

Date:

ಪೋಷಕರ ವಿರುದ್ಧ ಸೇಡು ತೀರಿಸಿಕ್ಕೊಳ್ಳಲು ಅಪ್ರಾಪ್ತ ಬಾಲಕಿಯ ಮೇಲೆ ತನ್ನ ನಾಯಿಯನ್ನು ಛೂ ಬಿಟ್ಟ ಕೋಳಿ ಫಾರಂ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಏನಿದು ಘಟನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಾಗರಾಜ್ ಎಂಬುವವರು ಮಾಗಡಿ ಬಳಿ ಕೋಳಿ ಫಾರಂ ಹೊಂದಿದ್ದಾರೆ. ಬಾಲಕಿಯ ತಂದೆ-ತಾಯಿ ದಿನಗೂಲಿ ನೌಕರರಾಗಿದ್ದಾರೆ.

“ಕೋಳಿ ಫಾರಂನಲ್ಲಿ ದಿನಗೂಲಿ ಕೆಲಸ ಮಾಡಲು ನಾಗರಾಜ್ ಬಾಲಕಿಯ ಪೋಷಕರನ್ನು ಕರೆದಿದ್ದಾನೆ. ಆದರೆ, ಅವರು ಈ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಕೋಳಿ ಫಾರಂ ಮಾಲೀಕ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾನೆ. ಕೋಪಗೊಂಡ ನಾಗರಾಜ್ ದಂಪತಿಯ 15 ವರ್ಷದ ಮಗಳ ಮೇಲೆ ಸೇಡು ತೀರಿಸಿಕೊಳ್ಳಲು ಯೋಜಿಸಿದ್ದನು” ಎಂದು ಪೊಲೀಸರು ಹೇಳಿದ್ದಾರೆ.

“ಅಕ್ಟೋಬರ್ 9 ರಂದು ಬಾಲಕಿ ಶಾಲೆಯಿಂದ ಬರುತ್ತಿದ್ದಾಗ ನಾಗರಾಜ್‌ನ ಮನೆ ಸಮೀಪಿಸುತ್ತಿದ್ದಂತೆ ಆತ ತನ್ನ ಸಾಕುನಾಯಿಯನ್ನು ಛೂ ಬಿಟ್ಟಿದ್ದಾನೆ. ಬಾಲಕಿ ನಾಯಿಯಿಂದ ಭಯಗೊಂಡು ಸಹಾಯಕ್ಕಾಗಿ ಕೂಗಿದ್ದಾಳೆ. ಈ ವೇಳೆ, ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಬಾಲಕಿಯನ್ನು ನಾಯಿ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ” ಎಂದು ತಿಳಿಸಿದ್ದಾರೆ.

“ಗಾಯಗೊಂಡ ಬಾಲಕಿಯನ್ನು ಸ್ಥಳೀಯರು ಮಾಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 5 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ!

ಸಂತ್ರಸ್ತೆಯ ಪೋಷಕರು ಕೋಳಿ ಫಾರಂ ಮಾಲೀಕರ ವಿರುದ್ಧ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...

ಮುಂಡಗೋಡ | ರಸ್ತೆಯಲ್ಲಿ ಬರ್ತ್‌ಡೇ ಪಾರ್ಟಿ: ಮನೆಗೆ ಹೋಗಲು ದಾರಿ ಕೇಳಿದ ವ್ಯಕ್ತಿಯ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು

ಮುಂಡಗೋಡ: ರಸ್ತೆಯಲ್ಲಿ ಹುಟ್ಟುಹಬ್ಬದ ಆಚರಣೆ ಮಾಡುತ್ತಿದ್ದಾಗ ಮನೆಗೆ ಹೋಗಲು ಜಾಗ ಕೇಳಿದ್ದಕ್ಕೆ...