ಬಿಜೆಪಿ-ಆರ್‌ಎಸ್‌ಎಸ್‌ ಹುಟ್ಟಿನಿಂದಲೇ ಮೀಸಲಾತಿ, ಸಾಮಾಜಿಕ ನ್ಯಾಯದ ವಿರೋಧಿಗಳು: ಸಿದ್ದರಾಮಯ್ಯ

Date:

ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಂಗಳವಾರ, ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯಗಳ ಮಠಾಧೀಶರ ಒಕ್ಕೂಟದ ನಿಯೋಗದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಿಎಂ, ʻಹಿಂದಿನ ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿದೆ. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನ ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ. ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇದರ ಕುರಿತು ನಾವು ಎಚ್ಚರದಿಂದಿರಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಕರ್ನಾಟಕದಲ್ಲಿ ಜನ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಜನರು ಬದಲಾವಣೆ ಬಯಸಿದ್ದಾರೆ. ಹಿಂದಿನ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಜಾತಿವಾರು ಸಮೀಕ್ಷೆ ವರದಿ ಸ್ವೀಕಾರ
ಐತಿಹಾಸಿಕ ಕಾರಣಗಳಿಂದಾಗಿ ಶತ ಶತಮಾನಗಳಿಂದ ಅವಕಾಶ ವಂಚಿತರಿಗೆ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ತಿಳಿಸಿದರು.

ಸರ್ಕಾರ ಎಲ್ಲ ವರ್ಗಗಳ ಬಡವರ ಪರ
ನಮ್ಮ ಸರ್ಕಾರ ಎಲ್ಲ ವರ್ಗದವರ ಪರವಾಗಿದೆ. ಹಿಂದೆ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಸ್‌ಐಟಿ ರಚನೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...