ಅಮುಲ್‌ ವಿವಾದ | ರಾಜ್ಯದ ಒಂದೊಂದೇ ಉದ್ಯಮ ಮುಗಿಸುವ ಬಿಜೆಪಿಯ ಸುಪಾರಿ ಆಟ ಶುರು: ಎಚ್‌ಡಿಕೆ

Date:

  • ಅಮುಲ್‌ ಮುಂದೆ ತರಲು 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ
  • ಬಿಜೆಪಿ ಡಬಲ್ ಎಂಜಿನ್ ಸರ್ಕಾರ, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ

“ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ ಇಂದು ನಿನ್ನೆಯದಲ್ಲ. ವೈಬ್ರೆಂಟ್ ಗುಜರಾತಿನ ಮಹತ್ವಾಕಾಂಕ್ಷೆಯ ಹಿಂದೆಯೇ ಕರ್ನಾಟಕವನ್ನು ಕೆಳಕ್ಕೆ ಕೆಡಹುವ ಬಿಜೆಪಿಯ ಧೂರ್ತ ಅಜೆಂಡಾ ಈ ಚುನಾವಣೆ ಹೊತ್ತಿನಲ್ಲಿ ಬಟಾ ಬಯಲಾಗಿದೆ. ಅಮುಲ್‌ ಮುಂದೆ ತರುವ 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಅಮುಲ್‌ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಸರಣಿ ಟ್ವೀಟ್‌ ಮಾಡಿರುವ ಅವರು, “ಇಂದು ಕರ್ನಾಟಕ; ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ!! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಪ್ರತಿಯೊಂದನ್ನೂ ಪ್ರಶ್ನಿಸುವ, ನ್ಯಾಯ ಕೇಳುವ ಕನ್ನಡಿಗರನ್ನು ದುರ್ಬಲಗೊಳಿಸುವುದೂ ಎಂದರೆ, ಆರ್ಥಿಕವಾಗಿ ಕರ್ನಾಟಕದ ಬೆನ್ನುಮೂಳೆ ಮುರಿಯುವುದು. ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ ಎಂಬ ನೀತಿ ಅನುಸರಿಸುವ ಬಿಜೆಪಿ ಡಬಲ್ ಎಂಜಿನ್ ಸರ್ಕಾರವು, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ” ಎಂದು ಟೀಕಿಸಿದ್ದಾರೆ.

ಮೋದಿ ಮೆಚ್ಚಿಸಲು ಅಮುಲ್ ಪರ ವಕಾಲತ್ತು

“ಅಂದು ಬಿಜೆಪಿಗರು ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ, ನಂದಿನಿಯನ್ನು ಮುಗಿಸಲು ಹೊರಟಿದ್ದರು. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು. ಈಗ ಪಾತ್ರಗಳು ಬದಲಾಗಿವೆ. ಸಿ ಟಿ ರವಿ, ಶಾಸಕ ಸುಧಾಕರ್‌, ಅಶ್ವತ್ಥನಾರಾಯಣ ಇತರರು ರಂಗದ ಮೇಲಿದ್ದಾರಷ್ಟೇ” ಎಂದಿದ್ದಾರೆ.

“ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಮುಲ್ ಮಾರಾಟ ಘಟಕ ಸ್ಥಾಪಿಸಲು ಹೊರಟಿತ್ತು ಅಂದಿನ ರಾಜ್ಯ ಬಿಜೆಪಿ ಸರ್ಕಾರ. ಅಂದರೆ, 15 ವರ್ಷಗಳ ಹಿಂದೆಯೇ ಅಮುಲ್ ಅನ್ನು ಉದ್ಧರಿಸಲು, ನಂದಿನಿಯ ಕತ್ತು ಕತ್ತರಿಸಲು ಬಿಜೆಪಿ ಹೊರಟಿತ್ತು. ಆಗ ಅಮುಲ್‌ ಘಟಕದ ಬಗ್ಗೆ ಜೆಡಿಎಸ್‌ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಕೆಎಂಎಫ್‌ನ ಅಂದಿನ ಅಧ್ಯಕ್ಷರಾಗಿದ್ದ ಎಚ್‌ ಡಿ ರೇವಣ್ಣ ಅವರು, “ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ ಎಂದು ಕಡ್ಡಿತುಂಡು ಮಾಡಿದಂತೆ ಹೇಳಿದ್ದರು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಂದಿನಿ ಉತ್ಪನ್ನಗಳನ್ನಷ್ಟೇ ಬಳಸುವಂತೆ ಕರೆ ಕೊಟ್ಟ ಹೋಟೆಲ್ ಮಾಲೀಕರ ಸಂಘ

ಆರ್ಥಿಕವಾಗಿ ದಿವಾಳಿ

“ಕೈಗಾರಿಕೆ, ಐಟಿಬಿಟಿ, ವಿಜ್ಞಾನ, ಆವಿಷ್ಕಾರ, ಉದ್ಯೋಗ ಸೃಷ್ಟಿ ಸೇರಿ ಜಿಎಸ್‌ ಟಿ ಕಟ್ಟುವುದರಲ್ಲಿಯೂ ಮುಂಚೂಣಿಯಲ್ಲಿರುವ ಕರ್ನಾಟಕವು, ಭಾರತವೇ ಹೆಮ್ಮೆಪಡುವ ರಾಜ್ಯ. ಇಂಥ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯೆಬ್ಬಿಸಿ ಶಾಶ್ವತವಾಗಿ ದಿಲ್ಲಿಯ ಮುಂದೆ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡುವುದೇ ಬಿಜೆಪಿ ಕುಟಿಲನೀತಿ” ಎಂದು ಕುಟುಕಿದ್ದಾರೆ.

“ಕರ್ನಾಟಕದ ಬ್ಯಾಂಕುಗಳು ಹೋದವು, ಭದ್ರಾವತಿಯ ವಿಎಸ್ಎನ್ಎಲ್ ಇನ್ನೇನು ಯಾರೋ ಗುಜರಾತಿ ಉದ್ದಿಮೆದಾರನ ಪಾಲಾಗುವ ಹಂತದಲ್ಲಿದೆ. ಈಗ ನಂದಿನಿ… ಲಾಭದಾಯಕವಾಗಿರುವ ರಾಜ್ಯದ ಒಂದೊಂದೇ ಉದ್ಯಮವನ್ನು ಮುಗಿಸಲು ಬಿಜೆಪಿ ಹೊಂಚು ಹಾಕಿರುವುದು ಸ್ಪಷ್ಟ” ಎಂದು ಹರಿಹಾಯ್ದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆಗೆ ಚಾಲನೆ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳ ಉದ್ಘಾಟನೆಗೆ ಸ್ಥಳ ನಿಗದಿ ನಾಳೆ ಬೆಂಗಳೂರಿನಲ್ಲಿ ಮೊದಲ ಯೋಜನೆಗೆ ಚಾಲನೆ ಕಾಂಗ್ರೆಸ್...

ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ: ಕಾರ್ಯಕರ್ತರ ನೆರವಿಗಾಗಿ ಸಹಾಯವಾಣಿ ಆರಂಭಿಸಿದ ಬಿಜೆಪಿ

24 ಗಂಟೆ ಕಾರ್ಯಾಚರಣೆ ನಡೆಸಲಿರುವ ಬಿಜೆಪಿ ಸಹಾಯವಾಣಿ ಸಹಾಯವಾಣಿ ಕಾರ್ಯಾಚರಣೆಗೆ 100 ಜನ...

3 ತಿಂಗಳೊಳಗೆ ಎಲ್ಲ ಮಹಿಳೆಯರಿಗೂ ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಣೆ : ರಾಮಲಿಂಗಾರೆಡ್ಡಿ

ಭಾನುವಾರ ಅಧಿಕೃತ ಚಾಲನೆ ಪಡೆದುಕೊಳ್ಳಲಿರುವ ಶಕ್ತಿ ಯೋಜನೆ ನಾಳೆ ಸಾಂಕೇತಿಕವಾಗಿ ಕೆಲವರಿಗೆ ಸ್ಮಾರ್ಟ್...

ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲಗಳಿಲ್ಲ: ಸಿಎಂ ಸಿದ್ದರಾಮಯ್ಯ

ಸರ್ಕಾರದ ಘೋಷಿತ ಗ್ಯಾರಂಟಿಗಳು ಹಂತಹಂತವಾಗಿ ಜಾರಿಯಾಗಲಿವೆ ಪ್ರಣಾಳಿಕೆಯ ಘೋಷಣೆಯಂತೆ ನಾವು ಗ್ಯಾರಂಟಿ ಅನುಷ್ಠಾನ...