ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ರೈತ ಮತ್ತು ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಎರಡು ಬಾರಿ ಬಂದ್ ನಡೆದು ಪ್ರತಿಭಟಿಸಿವೆ. ಕೆಆರ್‌ಎಸ್‌ನಲ್ಲಿ ನೀರಿಲ್ಲ. ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿವೆ.
ಕನ್ನಡ ಚಿತ್ರರಂಗದ ನಟ-ನಟಿಯರೂ ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇದೆಲ್ಲದರ ನಡುವೆ, ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, “ದಯವಿಟ್ಟು ನಮ್ಮ ಕಾವೇರಿ ಮತ್ತು ಕರ್ನಾಟಕಕ್ಕೆ ನ್ಯಾಯ ಒದಗಿಸಿ” ಎಂದು ಇಂಗ್ಲಿಷ್‌ನಲ್ಲಿ ನಡೆದಿದ್ದು, “ಕಾವೇರಿ ನಮ್ಮದು” ಎಂದು ಕನ್ನಡದಲ್ಲಿ ಬರೆದಿದ್ದಾರೆ.