ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪ, ಪಿಎಸ್ಐ ಪ್ರಕರಣ ತನಿಖೆ ಮಾಡಲಿ: ಬೊಮ್ಮಾಯಿ‌ ಆಗ್ರಹ

Date:

  • ನಾವು ಅವರ ಕಾಲದ ಹಗರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದೀವಿ’
  • ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ದೊಡ್ಡ ಜವಾಬ್ದಾರಿ ಇದೆ

ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪವನ್ನು ಕಾಂಗ್ರೆಸ್ ಸರ್ಕಾರ ದಾಖಲೆ ಸಹಿತ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸವಾಲ್ ಹಾಕಿದರು.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, “ಬಿಜೆಪಿ ಅವಧಿಯ ಹಗರಣಗಳ ತನಿಖೆ ಮಾಡುತ್ತೇವೆ ಎಂದಿರುವ ಕಾಂಗ್ರೆಸ್ ಗೆ, ನಾನು ಸ್ಪಷ್ಟವಾಗಿ ಹೇಳುತ್ತಿದ್ದೇ‌ನೆ. ದಯವಿಟ್ಟು ಎಲ್ಲ ತನಿಖೆ ಮಾಡಲಿ. 40% ಕಮೀಷನ್ ಆರೋಪವನ್ನು ನಮ್ಮ ಮೇಲೆ ಅವರು ಹೊರೆಸಿದ್ದಾರೆ. 40% ಆಗಿದೆ ಅಂತ ಅವರು ಪುರಾವೆ ಸಮೇತ ತೋರಿಸಬೇಕು” ಎಂದು ಒತ್ತಾಯಿಸಿದರು.

“ಗುತ್ತಿಗೆದಾರರ ಸಂಘದವರೂ 40% ಕಮೀಷನ್ ಆರೋಪ ಮಾಡಿದ್ದರು. ಈಗ ಅವರ ಸರ್ಕಾರ ಬಂದಿದೆ. 40% ಇಲ್ಲ ಅಂತ ಹೇಳಬಹುದು. ಗುತ್ತಿಗೆದಾರ ಸಂಘದವರು ಇನ್ನು ಮುಂದಿನ ಎಲ್ಲ ಟೆಂಡರ್‌ಗಳಲ್ಲೂ 40% ಕಡಿಮೆ ಹಾಕಲಿ. ಅಂದರೆ ಮಾತ್ರ ನಮ್ಮ ಕಾಲದಲ್ಲಿ 40% ಇತ್ತು ಅಂತ ಆಗುತ್ತದೆ. ಇವತ್ತು ಅಷ್ಟೇ ಮೊತ್ತಕ್ಕೆ ಟೆಂಡರ್ ಹಾಕಿದರೆ, 40% ಈಗಲೂ ಇದೆ ಅಂತ ಆಗುತ್ತದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಇನ್ಮೇಲೆ ಕೆಂಪಣ್ಣ ತಮ್ಮೆಲ್ಲ ಸಂಘದವರಿಗೂ 40% ಕಮ್ಮಿಗೆ ಟೆಂಡರ್ ಹಾಕುವಂತೆ ಹೇಳಬೇಕು. ಕೆಂಪಣ್ಣ ಇದುವರೆಗೆ 40% ದಾಖಲೆ ಕೊಡಲಿಲ್ಲ. ಕೋರ್ಟ್‌ಗೂ ಕೊಡಲಿಲ್ಲ. ನಮ್ಮ ವಿರುದ್ಧ ಅಪಪ್ರಚಾರ ಮಾಡಿದರು. ಕಾಂಗ್ರೆಸ್‌ನವರು ಅದರ ಲಾಭ ತೆಗೆದುಕೊಂಡಿದ್ದಾರೆ” ಎಂದು ದೂರಿದರು.

“ನಮ್ಮ ಕಾಲದ, ಅವರ ಕಾಲದ ಎಲ್ಲವನ್ನೂ ತನಿಖೆ ಮಾಡಲಿ. ಅದರ ಜೊತೆಗೆ ಪಿಎಸ್ಐ ಪ್ರಕರಣವನ್ನೂ ತನಿಖೆ ಮಾಡಲಿ. ಎಲ್ಲ ಪ್ರಕರಣಗಳ ಸತ್ಯ ಹೊರಗೆ ಬರಲಿ. ನಾವು ಅವರ ಕಾಲದ ಹಗರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದೀವಿ” ಎಂದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ₹2000 ನೋಟು ರದ್ದತಿಯು ಮತ್ತೊಂದು ದುರಂತ ಪ್ರಹಸನಕ್ಕೆ ನಾಂದಿ ಆಗದಿರಲಿ

ಗ್ಯಾರಂಟಿ ಬಗ್ಗೆ ಜನರಿಗೆ ಕಾಂಗ್ರೆಸ್ ಮೋಸ

“ಗ್ಯಾರಂಟಿ ಸ್ಕೀಂ ಬಗ್ಗೆಯೂ ಬಹಳ ಜನ ಹೇಳಿದ್ದಾರೆ. ಗ್ಯಾರಂಟಿ ಬಗ್ಗೆ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ. ಕಾರ್ಯಕರ್ತರು ಜನರ ಬಳಿ ಹೋಗಿ ಹೇಳಿಲ್ಲ. ಅದರ ಬಗ್ಗೆ ಯಾವುದೋ ಬ್ಯಾಂಕ್ ನಿಂದ, ಕಂಪೆನಿಯಿಂದ ಬಂದವರ ರೀತಿ ಹೋಗಿ ಗ್ಯಾರಂಟಿ ಸ್ಕೀಂ ಬಗ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಡಿಸಿ ಆಫೀಸ್ ನಿಂದ ಅಂತ ಕರೆ ಮಾಡಿ ಸುಳ್ಳು ಹೇಳಿದ್ದಾರೆ. ಯಾವ ಡಿಸಿ ಆಫೀಸ್ ಅಂದರೆ, ಡಿಸ್ಟ್ರಿಕ್ಟ್ ಕಾಂಗ್ರೆಸ್ ಆಫೀಸ್ ಅಂತ ಹೇಳಿದ್ದಾರೆ. ಈ ತರಹ ಮೋಸ ಮಾಡಿ ಗ್ಯಾರಂಟಿ ಸ್ಕೀಂ ಬಗ್ಗೆ ಹೇಳಿದ್ದಾರೆ. ಎಲ್ಲವೂ ಮುಂದೆ ಬೆಳಕಿಗೆ ಬರಲಿದೆ” ಎಂದರು.

ಲೋಕಸಭಾ ಚುನಾವಣೆ ತಯಾರಿ

“ನಿನ್ನೆ ಬಿಜೆಪಿ ಆತ್ಮಾವಲೋಕ ಸಭೆ ನಡೆಸಿದ್ದೇವೆ. ಎಲ್ಲ ಜಿಲ್ಲೆಗಳಿಂದ ವರದಿ ತರಿಸಿದ್ದೇವೆ. ಒಂದೊಂದು ಜಿಲ್ಲೆಗಳಲ್ಲಿ ಒಂದೊಂದು ರೀತಿ ಚುನಾವಣೆ ನಡೆದಿದೆ. ಕೆಲವು ಕಡೆ ಲೋಪದೋಷಗಳಾಗಿದ್ದು, ಸರಿಪಡಿಸಲು ತೀರ್ಮಾನ ಮಾಡಿದ್ದೇವೆ. ಮುಂದೆ ಪಕ್ಷ ಪುನರ್ ಸಂಘಟನೆ, ಲೋಕಸಭೆ ಚುನಾವಣೆ ತಯಾರಿ ಬಗ್ಗೆ ತೀರ್ಮಾನ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ನಾಯಕರು, ಪದಾಧಿಕಾರಿಗಳು ರಾಜ್ಯ ಪ್ರವಾಸ ಮಾಡಲು ತೀರ್ಮಾನಿಸಲಾಗಿದೆ. ಚುನಾವಣೆ ಸೋಲಿಗೆ ಹಲವು ಕಾರಣಗಳನ್ನು ಕಂಡುಕೊಂಡಿದ್ದೇವೆ. ಕೆಲವು ಕಡೆ ಅಭ್ಯರ್ಥಿಗಳು ಕಾರಣ, ಕೆಲವು ಕಡೆ ಸಂಘಟನೆ ಕಾರಣ ಎನ್ನುವುದು ತಿಳಿದು ಬಂದಿದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾರ್ಚ್ 30ರಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ...

ಉಡುಪಿ | ನೀತಿ ಸಂಹಿತೆ ಉಲ್ಲಂಘನೆ ಆರೋಪ; ಜಯಪ್ರಕಾಶ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶಿರ್ವ...

ಮಂಡ್ಯ | ಕಾರ್ಖಾನೆಯ ಹಾರುವ ಬೂದಿ ನಿಯಂತ್ರಣಕ್ಕೆ ರೈತರ ಆಗ್ರಹ

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ...