- ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕುಟುಕಿದ ಕಾಂಗ್ರೆಸ್
- ಅಡ್ಜಸ್ಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ
ಅಡ್ಜಸ್ಮೆಂಟ್ ರಾಜಕಾರಣ ವಿಚಾರದಲ್ಲಿಆಡಳಿತ ಹಾಗೂ ವಿಪಕ್ಷಗಳ ನಡುವಿನ ವಾದ ವಿವಾದ ಮುಂದುವರೆದಿದೆ. ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದಾರೆ ಎನ್ನಲಾದ ನಾಯಕರ ಹೆಸರುಗಳನ್ನು ಬಹಿರಂಗಗೊಳಿಸುವಂತೆ ಮಾಜಿ ಶಾಸಕ ಸಿ.ಟಿ ರವಿಗೆ ಕಾಂಗ್ರೆಸ್ ಸವಾಲು ಹಾಕಿದೆ.
ಟ್ವೀಟ್ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕುಟುಕಿರುವ ಕಾಂಗ್ರೆಸ್, ಧಮ್ಮು ತಾಕತ್ತಿನ ಪ್ರಶ್ನೆ ಮಾಡಿದೆ. ಕಾಂಗ್ರೆಸ್ ಟ್ವೀಟ್ ಈ ಕೆಳಗಿನಂತಿದೆ.
ರಿಟೈರ್ಡ್ ಹರ್ಟ್ ಆಗಿರುವ ಸಿಟಿ ರವಿ ಈಗ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ, ಅವರ ಅರಣ್ಯರೋದನಕ್ಕೆ ಸಂಸದ ಪ್ರತಾಪ್ ಸಿಂಹ ದನಿಗೂಡಿಸಿದ್ದಾರೆ. ಇಬ್ಬರಿಗೂ ಧಮ್ಮು ತಾಕತ್ತು ಇದ್ದರೆ ಅಡ್ಜಸ್ಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ ಆರೋಪಿಸಲಿ ಎಂದಿದೆ.
ಈ ಸುದ್ದಿ ಓದಿದ್ದೀರಾ?:ಮೈಸೂರು | ಎಕ್ಸ್‌ಪ್ರೆಸ್-ವೇ ಟೋಲ್ ದರ ಏರಿಕೆ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ
ಅಂದ ಹಾಗೆ ಬಿಜೆಪಿಯೊಂದಿಗೆ ಅಡ್ಜಸ್ಟ್ ಮಾಡಿಕೊಂಡಿದ್ದ ಕುಮಾರಸ್ವಾಮಿ ತಲೆ ಸವರಿಕೊಂಡು ನಗುತ್ತಿದ್ದಾರಂತೆ ಅಲ್ಲವೇ ಬಿಜೆಪಿ ನಾಯಕರೇ ಎಂದು ಕಾಂಗ್ರೆಸ್ ಕುಟುಕಿದೆ.