16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭ; ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Date:

16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ನೂತನವಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.

ಹಾಂಗಾಮಿ ಸಭಾಧ್ಯಕ್ಷ ಆರ್‌ ವಿ ದೇಶಪಾಂಡೆ ಅವರು ಕಾಂಗ್ರೆಸ್‌ ಸರ್ಕಾರ ಮೊದಲ ಅಧಿವೇಶನಕ್ಕೆ ಚಾಲನೆ ನೀಡಿದರು. ಚುನಾಯಿತರಾಗಿ ಆಯ್ಕೆಯಾದ ಎಲ್ಲ ಶಾಸಕರಿಗೆ ಸ್ವಾಗತಕೋರಿ, ಪ್ರಮಾಣ ವಚನ ಸ್ವೀಕಾರಕ್ಕೆ ಅನುವು ಮಾಡಿಕೊಟ್ಟರು.

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಗವಂತನ ಹೆಸರಿನಲ್ಲಿ ಶಾಸಕ ಸ್ಥಾನದ ಪ್ರಮಾಣ ವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಕೂಡ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಡಾ. ಜಿ ಪರಮೇಶ್ವರ ಮತ್ತು ಸತೀಶ್‌ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಖರ್ಗೆ ಅವರು ಭಾರತದ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಯು ಟಿ ಖಾದರ್‌ ಅವರು ಭಗವಂತ ಮತ್ತು ಕ್ಷೇತ್ರದ ಮತದಾರರ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಕೆ ಎಚ್‌ ಮುನಿಯಪ್ಪ, ಕೆ ಜೆ ಜಾರ್ಜ್‌, ರಾಮಲಿಂಗಾರೆಡ್ಡಿ, ಎಂ ಬಿ ಪಾಟೀಲ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ವಿರೋಧ ಪಕ್ಷ ಬಿಜೆಪಿಯಿಂದ ಅರವಿಂದ್‌ ಬೆಲ್ಲದ, ಆರ್‌ ಅಶೋಕ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ವಿಜಯಪುರದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಹಿಂದುತ್ವ ಮತ್ತು ಗೋಮಾತೆ ಹೆಸರಿನಲ್ಲಿ ಪ್ರಮಾಣ ಮಾಡಿದರು. ಹಾಗೆಯೇ ಜೆಡಿಎಸ್‌ನಿಂದ ಸಿ ಎನ್‌ ಬಾಲಕೃಷ್ಣ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ನೂತನವಾಗಿ ಆಯ್ಕೆಯಾದ ಪ್ರತಿ ಶಾಸಕರನ್ನು ಕರೆದು ಪ್ರಮಾಣ ವಚನ ಸ್ವೀಕಾರ ಕಾರ್ಯ ನಡೆಸಿಕೊಟ್ಟರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...