ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಜೂ. 18 ರಿಂದ ಈವರೆಗೆ ಒಂದು ಕೋಟಿಗೂ ಅಧಿಕ ಕುಟುಂಬಗಳು ಅರ್ಜಿ ಸಲ್ಲಿಸಿ ನೋಂದಾವಣೆ ಮಾಡಿಕೊಂಡಿವೆ.
ಅತ್ಯಂತ ವೇಗದಲ್ಲಿ ಗೃಹಜ್ಯೋತಿ ಯೋಜನೆ ರಾಜ್ಯದ ಜನರಿಗೆ ತಲುಪುತ್ತಿದ್ದು, ದಿನದಿಂದ ದಿನಕ್ಕೆ ಅರ್ಜಿದಾರರ ಸಂಖ್ಯೆ ಏರಿಕೆಯಾಗುತ್ತಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಆರಂಭವಾಗಿ 17 ದಿನಗಳಲ್ಲಿ ಒಂದು ಕೋಟಿ ಜನ ನೋಂದಣಿ ಮಾಡಿದ್ದಾರೆ. ಒಟ್ಟು 1,00,20,163 ಮಂದಿ ಅರ್ಜಿ ಸಲ್ಲಿಸಿದ್ದಾರೆ.
ಯಾವ ಯಾವ ಎಸ್ಕಾಂಗಳಲ್ಲಿ ಎಷ್ಟು ಅರ್ಜಿ ಸಲ್ಲಿಕೆ
ಬೆಸ್ಕಾಂ ವ್ಯಾಪ್ತಿಯಲ್ಲಿ 41,14,567 ಅರ್ಜಿ
ಚೆಸ್ಕಾಂ ವ್ಯಾಪ್ತಿಯಲ್ಲಿ 15,35,045 ಅರ್ಜಿ
ಜೆಸ್ಕಾಂ ವ್ಯಾಪ್ತಿಯಲ್ಲಿ 10,54,359 ಅರ್ಜಿ
ಹೆಸ್ಕಾಂ ವ್ಯಾಪ್ತಿಯಲ್ಲಿ 21,09,473 ಅರ್ಜಿ
ಮೆಸ್ಕಾಂ ವ್ಯಾಪ್ತಿಯಲ್ಲಿ 11,56,294 ಅರ್ಜಿ
ಎಚ್‌ಆರ್‌ಇಸಿಎಸ್ 50,425 ಸಾವಿರ ಅರ್ಜಿ
ಒಟ್ಟು ರಾಜ್ಯಾದ್ಯಂತ 1,00,20,163 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ.
ತಿಂಗಳ ಅಂತ್ಯದ ವೇಳೆಗೆ 1.50 ಕೋಟಿ ಅರ್ಜಿ ನೋಂದಣಿ ಆಗುವ ಸಾಧ್ಯತೆ ಇದೆ. ಇಂಧನ ಇಲಾಖೆ ಈಗಾಗಲೇ ಅರ್ಜಿ ಸಲ್ಲಿಕೆಗೆ ವೈಬ್ಸೈಟ್ ಸರಳೀಕರಣ ಮಾಡಿದೆ. ಗೃಹಜ್ಯೋತಿ ಯೋಜನೆ ಜುಲೈ 1 ರಿಂದ ಅನ್ವಯವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಜು. 25 ಆಗಿದೆ. ಜು. 25 ರ ನಂತರ ಅರ್ಜಿ ಸಲ್ಲಿಸಿದರೆ ಆಗಸ್ಟ್ ತಿಂಗಳ ಉಚಿತ ವಿದ್ಯುತ್ ಸೆಪ್ಟೆಂಬರ್ ತಿಂಗಳಿಗೆ ಸಿಗಲಿದೆ.
ಈ ಸುದ್ದಿ ಓದಿದ್ದೀರಾ? ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸೂಚನೆ
ಬೆಲೆಯೇರಿಕೆ ಸಂಕಷ್ಟದಲ್ಲಿರುವ ಜನರ ಬದುಕಲ್ಲಿ ನೆಮ್ಮದಿಯ ಬೆಳಕು ಮೂಡಲಿ
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, “ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ ರಾಜ್ಯದ 1 ಕೋಟಿಗೂ ಅಧಿಕ ಕುಟುಂಬಗಳು ಯಶಸ್ವಿಯಾಗಿ ಅರ್ಜಿ ಸಲ್ಲಿಸಿವೆ. ಕನಿಷ್ಠ ನಿಬಂಧನೆಗಳು ಮತ್ತು ಸರಳ ಅರ್ಜಿ ಪ್ರಕ್ರಿಯೆಯ ಮೂಲಕ ಎಲ್ಲಾ ಅರ್ಹ ಕುಟುಂಬಗಳಿಗೆ ಯೋಜನೆಯನ್ನು ತಲುಪಿಸಬೇಕೆಂಬುದು ನಮ್ಮ ಉದ್ದೇಶ. ಯೋಜನೆಯ ವ್ಯಾಪ್ತಿಗೆ ಒಳಪಡುವವರು ತಪ್ಪದೇ ಅರ್ಜಿ ಸಲ್ಲಿಸಿ, ಇತರರಿಗೂ ಅರ್ಜಿ ಸಲ್ಲಿಸಲು ನೆರವಾಗಿ. ಬೆಲೆಯೇರಿಕೆಯಿಂದ ಸಂಕಷ್ಟದಲ್ಲಿರುವ ಜನರ ಬದುಕಲ್ಲಿ ನೆಮ್ಮದಿಯ ಬೆಳಕು ಮೂಡಲಿ”