ಸಿದ್ದರಾಮಯ್ಯ ಸರ್ಕಾರ ಬಂದರೆ ಕಿಸಾನ್ ಸಮ್ಮಾನ್‌ ಯೋಜನೆ ಸೇರಿ ಹಲವು ಯೋಜನೆ ಬಂದ್‌: ಜೆ ಪಿ ನಡ್ಡಾ

Date:

Advertisements

ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ಬರುವ ಎಲ್ಲ ಯೋಜನೆಗಳು ರಾಜ್ಯಕ್ಕೆ ಬಂದ್‌ ಆಗಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅಭಿಪ್ರಾಯ ಪಟ್ಟಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಅವರು ಈ ಮಾತು ಹೇಳಿದರು.

“ಸಿದ್ದರಾಮಯ್ಯ ಸರ್ಕಾರ ಬಂದಿದ್ದೇ ಆದಲ್ಲಿ ಕಿಸಾನ್ ಸಮ್ಮಾನ್‌ ಯೋಜನೆ ಸೇರಿ ಹತ್ತು ಹಲವು ಯೋಜನೆಗಳು ರಾಜ್ಯದ ಜನರಿಗೆ ತಲುಪುವುದಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ತರಲು ಬಿಜೆಪಿ ಬೆಂಬಲಿಸಿ” ಎಂದರು.

Advertisements

“ಪರಿಶಿಷ್ಟರಿಗೆ ಒಳಮೀಸಲಾತಿಯನ್ನು ಬಿಜೆಪಿ ಸರ್ಕಾರ ಕೊಟ್ಟಿದೆ. ಪರಿಶಿಷ್ಟ ಪಂಗಡ, ಲಿಂಗಾಯತರು, ಒಕ್ಕಲಿಗರ ಮೀಸಲಾತಿಯನ್ನೂ ಹೆಚ್ಚಿಸಿದೆ. ಆದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈಗ ಹೆಚ್ಚಿಸಿರುವ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳಿದೆ. ಇಂತಹವರಿಗೆ ಬುದ್ದಿ ಕಲಿಸಬೇಕು” ಎಂದು ಕರೆ ಕೊಟ್ಟರು.

“ಕಾಂಗ್ರೆಸ್‌ನವರು ತಾವು ಭ್ರಷ್ಟಾಚಾರ ಮಾಡಿ, ಮತ್ತೊಬ್ಬರ ಮೇಲೆ ಆರೋಪ ಮಾಡುವುದನ್ನು ಕೈಬಿಡಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಡಿ ಕೆ ಶಿವಕುಮಾರ ಅವರೆಲ್ಲ ಭ್ರಷ್ಟಾಚಾರ ಮಾಡಿ ಬೇಲ್ ಮೇಲೆ ಹೊರಗಿದ್ದಾರೆ. ಅವರ ಮೇಲಿನ ಆರೋಪಗಳು ಸಾಬೀತಾದರೆ ಜೈಲಿಗೆ ಹೋಗುವುದು ತಪ್ಪುವುದಿಲ್ಲ” ಎಂದು ನಡ್ಡಾ ತಿಳಿಸಿದರು.

ಭಾಷಣದ ಕೊನೆಗೆ ಭಜರಂಗ ದಳ ನಿಷೇಧ ಕುರಿತು ವಿಷಯ ಪ್ರಸ್ತಾಪಿಸಿ, ʼಭಜರಂಗ ಬಲಿ ಕೀ ಜೈʼ ಎಂದು ಕೂಗಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X