ಚುನಾವಣೆ 2023 | ಬೊಮ್ಮಾಯಿ ಸೋಲಿಸಲು ಅಖಾಡ ಸಿದ್ಧಮಾಡಿಕೊಂಡಿತೇ ಪಂಚಮಸಾಲಿ ಸಮುದಾಯ?

Date:

ಬೊಮ್ಮಾಯಿ ಅವರ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ 60 ಸಾವಿರಕ್ಕೂ ಹೆಚ್ಚು ಪಂಚಮಸಾಲಿ ಮತದಾರರಿದ್ದು, ಗೆಲುವಿನ ಲೆಕ್ಕಾಚಾರದಲ್ಲಿ ಅವರೇ ನಿರ್ಣಾಯಕವಾಗಿರುವುದರಿಂದ, ಮೀಸಲಾತಿ ಹೋರಾಟವನ್ನು ಮುಖ್ಯಮಂತ್ರಿಗಳು ದುರ್ಬಳಕೆ ಮಾಡಿಕೊಂಡು, ಸಮುದಾಯಕ್ಕೆ ಮೋಸ ಮಾಡಿರುವುದರಿಂದ, ಈ ಬಾರಿಯ ಚುನಾವಣೆಯಲ್ಲಿ ಬೊಮ್ಮಾಯಿ ಅವರಿಗೆ ತಕ್ಕ ಪಾಠ ಕಲಿಸಲು ಸಮುದಾಯ ನಿರ್ಧರಿಸಿದೆ.

ಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪಂಚಮಸಾಲಿ ಲಿಂಗಾಯತ ಸಮುದಾಯ ಸಮರ ಸಾರಿದೆ.

ಯಾವುದೇ ಕಾರಣಕ್ಕೂ ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಾರಿ ಗೆಲ್ಲದಂತೆ ನೋಡಿಕೊಳ್ಳಲು ತಂತ್ರ ರೂಪಿಸಿದೆ. ಈ ಸಂಬಂಧ ಪಂಚಮಸಾಲಿ ಸಮುದಾಯಕ್ಕೆ ಬೊಮ್ಮಾಯಿ ಬೆಂಬಲಿಸದಂತೆ ಅಲಿಖಿತ ಫರ್ಮಾನು ಹೊರಡಿಸಿದೆ ಎಂಬ ಮಾಹಿತಿ ಈ ದಿನ.ಕಾಮ್‌ಗೆ ಲಭ್ಯವಾಗಿದೆ.

ಮೀಸಲಾತಿ ಪ್ರಮಾಣ ಹೆಚ್ಚಳ ಬಗ್ಗೆ ಪಂಚಮಸಾಲಿ ಸಮುದಾಯದೊಳಗೆ ನಡೆಯುತ್ತಿರುವ ಕಾನೂನಾತ್ಮಕ ಅವಲೋಕನ ಸಭೆಗಳಲ್ಲಿ ಸಿಎಂ ಬೊಮ್ಮಾಯಿ ಅವರು ಸಮುದಾಯ ಪರವಾಗಿ ಕೆಲಸ ಮಾಡಿಲ್ಲ. ಮೀಸಲಾತಿ ಹೆಚ್ಚಿಸುವ ಭರವಸೆಯನ್ನು ಈಡೇರಿಸಿಲ್ಲ. ಪಂಚಮಸಾಲಿ ಸಮುದಾಯದ ಬೇಡಿಕೆಯನ್ನು ಬದಿಗಿಟ್ಟು, ಒಟ್ಟಾರೆ ವೀರಶೈವ ಲಿಂಗಾಯತರಿಗೆ ಶೇ.2 ಮೀಸಲಾತಿ ಹೆಚ್ಚಿಸಲಾಗಿದೆ. ಆ ಮೂಲಕ ಸಮುದಾಯದ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿ ಕೈತೊಳೆದುಕೊಂಡಿದ್ದಾರೆ ಎಂಬ ಮಾತುಗಳು ವ್ಯಕ್ತವಾಗಿವೆ. ಹಾಗಾಗಿ ಬಸವರಾಜ ಬೊಮ್ಮಾಯಿ ವಿರುದ್ಧ ಸಮುದಾಯದ ಸಿಟ್ಟು ಮತ್ತೆ ಹರಳುಗಟ್ಟಲು ಆರಂಭಿಸಿದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬೊಮ್ಮಾಯಿ ವಿರುದ್ಧ ಮೀಸಲಾತಿ ವಿರೋಧಿ ಅಲೆ ಏಳಲು ಆರಂಭಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೊಮ್ಮಾಯಿ ಅವರ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ 60 ಸಾವಿರಕ್ಕೂ ಹೆಚ್ಚು ಪಂಚಮಸಾಲಿ ಮತದಾರರಿದ್ದು, ಗೆಲುವಿನ ಲೆಕ್ಕಾಚಾರದಲ್ಲಿ ಅವರೇ ನಿರ್ಣಾಯಕವಾಗಿರುವುದರಿಂದ, ಮೀಸಲಾತಿ ಹೋರಾಟವನ್ನು ಮುಖ್ಯಮಂತ್ರಿಗಳು ದುರ್ಬಳಕೆ ಮಾಡಿಕೊಂಡು, ಸಮುದಾಯಕ್ಕೆ ಮೋಸ ಮಾಡಿರುವುದರಿಂದ ಈ ಬಾರಿಯ ಚುನಾವಣೆಯಲ್ಲಿ ಬೊಮ್ಮಾಯಿ ಅವರಿಗೆ ತಕ್ಕ ಪಾಠ ಕಲಿಸಲು ಸಮುದಾಯ ನಿರ್ಧರಿಸಿದೆ.

ಇದಕ್ಕಾಗಿ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಧಾರವಾಡ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ವಿನಯ್ ಕುಲಕರ್ಣಿ ಅವರನ್ನು ಬೊಮ್ಮಾಯಿ ವಿರುದ್ಧ ಕಣಕ್ಕಿಳಿಸುವ ಬಗ್ಗೆ ಸಮುದಾಯ ಒಮ್ಮತದ ನಿರ್ಧಾರ ಕೈಗೊಂಡಿದೆ ಎಂದು ಮೀಸಲಾತಿ ಹೋರಾಟದಲ್ಲಿ ಸಕ್ರಿಯವಾಗಿದ್ದ ನಾಯಕರೊಬ್ಬರು ಈ ದಿನ.ಕಾಮ್ ಖಚಿತ ಪಡಿಸಿದ್ದಾರೆ.

ಈ ಅವಕಾಶವನ್ನೇ ಸದುಪಯೋಗಪಡಿಸಿಕೊಳ್ಳಲು ಕಾಂಗ್ರೆಸ್ ಕೂಡ ಮುಂದಾಗಿದ್ದು, ವಿನಯ್ ಕುಲಕರ್ಣಿ ಅವರನ್ನು ಶಿಗ್ಗಾಂವಿಯಲ್ಲಿ ಬೊಮ್ಮಾಯಿ ವಿರುದ್ಧ ಕಣಕ್ಕಿಳಿಸಲು ತೀರ್ಮಾನಿಸಿದೆ. ಹಾಗೆಯೇ, ಇತ್ತೀಚೆಗೆ 2ಬಿ ರದ್ದು ಮಾಡಿ, ಮುಸ್ಲಿಮರ ವಿರೋಧ ಕಟ್ಟಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಶಿಗ್ಗಾಂವಿ ಕ್ಷೇತ್ರದಲ್ಲಿರುವ 50 ಸಾವಿರ ಸಂಖ್ಯೆಯ ಮುಸ್ಲಿಮರು ಒಂದಾಗಿ, ಕಾಂಗ್ರೆಸ್ ಬೆಂಬಲಿಸುವ ಸುದ್ದಿಯೂ ಇದೆ. ಪಂಚಮಸಾಲಿ, ಮುಸ್ಲಿಮರು, ದಲಿತರು, ಕುರುಬರು ಒಂದಾದರೆ, ಬಿಜೆಪಿಯ ಬೊಮ್ಮಾಯಿಗೆ ಈ ಬಾರಿಯ ಚುನಾವಣೆ ದುಬಾರಿಯಾಗಲಿದೆ ಎಂಬ ಮಾತು ಕೇಳಿಬರುತ್ತಿದೆ.

ಇವೆಲ್ಲ ರಾಜಕೀಯ ಲೆಕ್ಕಾಚಾರಗಳ ನಡುವೆ, ಟಿಕೆಟ್ ವಿಚಾರದಲ್ಲಿ ವಿನಯ್ ಕುಲಕರ್ಣಿ ಮತ್ತು ಪಕ್ಷದ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಪಕ್ಷದ ಮುಖಂಡರ ಮುಂದೆ ವಿನಯ್ ಕುಲಕರ್ಣಿ ಶರತ್ತನ್ನು ಮುಂದಿಟ್ಟಿದ್ದು, ಅದನ್ನು ಒಪ್ಪಿದರೆ ಮಾತ್ರ ಶಿಗ್ಗಾಂವಿಯಿಂದ ಸ್ಪರ್ಧಿಸುವ ಬಗ್ಗೆ ಕೈ ನಾಯಕರಿಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಬೆವರಿಳಿಸುತ್ತಿರುವ ಬೆಲೆ ಏರಿಕೆ ಚುನಾವಣಾ ವಿಷಯವಲ್ಲವೇ?

ಏನದು ಕುಲಕರ್ಣಿ ಶರತ್ತು?:

ಧಾರವಾಡ ಗ್ರಾಮೀಣ ಕ್ಷೇತ್ರದ ಮೇಲೆ ತಮ್ಮದೇ ಹಿಡಿತ ಸಾಧಿಸಿರುವ ವಿನಯ್ ಕುಲಕರ್ಣಿ ಎರಡು ಬಾರಿ ಕ್ಷೇತ್ರದ ಶಾಸಕರಾಗಿ ಆಯ್ಕೆ ಆಗಿದ್ದಾರೆ. 2004ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದ ವಿನಯ್ ಕುಲಕರ್ಣಿ, 2013ರಲ್ಲಿ ಕಾಂಗ್ರೆಸ್ ನಿಂದ ಗೆದ್ದು ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದರು. ಹೀಗಾಗಿ ತವರು ಕ್ಷೇತ್ರ ಧಾರವಾಡ ಗ್ರಾಮೀಣ ಕ್ಷೇತ್ರದ ಮೇಲೆ ವಿಶೇಷ ಪ್ರೀತಿ ಹೊಂದಿರುವ ಕುಲಕರ್ಣಿ, ತಮ್ಮ ತವರು ಕ್ಷೇತ್ರ ಉಳಿಸಿಕೊಳ್ಳಲು ಮೊದಲ ಆದ್ಯತೆ ತೋರಿದ್ದಾರೆ ಎನ್ನಲಾಗಿದೆ.

ಹಾಗಾಗಿ ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಟಿಕೆಟ್ ನೀಡಿದರೆ ಮಾತ್ರ ಶಿಗ್ಗಾಂವಿಯಿಂದ ಸ್ಪರ್ಧಿಸುವ ಬಗ್ಗೆ ಒಂದು ನಿರ್ಧಾರಕ್ಕೆ ಬರುತ್ತೇನೆ ಎಂದು ವಿನಯ್ ಕುಲಕರ್ಣಿ ಕಾಂಗ್ರೆಸ್ ಮುಖಂಡರಿಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ಬಿಜೆಪಿ ಮುಖಂಡ ಮತ್ತು ಧಾರವಾಡ ಜಿಲ್ಲೆಯ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ಅನುಮತಿಯನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ ನಿರಾಕರಿಸಿದೆ. ಈ ಕಾರಣದಿಂದ ಶಿಗ್ಗಾಂವಿಗೆ ಹೋದರೆ ಕುಲಕರ್ಣಿಯ ರಾಜಕೀಯ ಅಸ್ತಿತ್ವ ಉಳಿಯಲಿದೆ. ಜೊತೆಗೆ ಮುಖ್ಯಮಂತ್ರಿ ಎದುರಿನ ಸ್ಪರ್ಧಿ ಎಂಬ ವಿಶೇಷ ಗೌರವಕ್ಕೂ ಪಾತ್ರವಾಗಲಿದೆ.

ಮತ್ತೊಂದು ಕಡೆ ತವರು ಕ್ಷೇತ್ರದ ಮೇಲೆ ಹಿಡಿತ ಹೊಂದಲು ಹೊಸ ಲೆಕ್ಕಾಚಾರ ಮಾಡಿರುವ ಕುಲಕರ್ಣಿ, ತಮ್ಮ ಪತ್ನಿ ಇಲ್ಲವೇ ತಾವು ಸೂಚಿಸುವ ಅಭ್ಯರ್ಥಿಗೆ ಧಾರವಾಡ ಗ್ರಾಮೀಣ ಟಿಕೆಟ್ ನೀಡಬೇಕು ಎಂದು ಪಕ್ಷವನ್ನು ಕೇಳಿಕೊಂಡಿದ್ದಾರೆ. ಜೊತೆಗೆ ಕೇಂದ್ರ ನಾಯಕರಿಗೂ ತಮ್ಮ ಇಂಗಿತ ಮನವರಿಕೆ ಮಾಡಿಕೊಡಲು ದೆಹಲಿಗೆ ತೆರಳಿದ್ದಾರೆ.

ಕುಲಕರ್ಣಿಗೆ ಸ್ಪರ್ಧಿಸದಂತೆ ಬೊಮ್ಮಾಯಿ ಮನವಿ?:

ಶಿಗ್ಗಾಂವಿಯಲ್ಲಿ ತಮ್ಮೆದುರು ವಿನಯ್ ಕುಲಕರ್ಣಿ ಸ್ಪರ್ಧೆಗೆ ಇಳಿಯುತ್ತಿದ್ದಾರೆ ಎಂಬುದು ತಿಳಿದ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಾಸಗಿಯಾಗಿ ವಿನಯ್ ಕುಲಕರ್ಣಿ ಅವರನ್ನು ಭೇಟಿ ಮಾಡಿ, “ನಿಮಗೇನು ಬೇಕು ಅದನ್ನು ನಮ್ಮ ಪಕ್ಷದಿಂದ ಮಾಡುತ್ತೇವೆ. ನನ್ನ ವಿರುದ್ಧ ಸ್ಪರ್ಧಿಸಬೇಡ” ಎಂದು ಮುಖ್ಯಮಂತ್ರಿಗಳು ಸ್ನೇಹಪೂರ್ವಕವಾಗಿ ಕುಲಕರ್ಣಿ ಅವರನ್ನು ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು, ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ಸಿನ ಎರಡನೇ ಪಟ್ಟಿ ಅಂತಿಮವಾಗಲಿದ್ದು, ಬೊಮ್ಮಾಯಿ ಸೋಲಿಸುವ ಕಾರಣಕ್ಕಾಗಿ ಕುಲಕರ್ಣಿ ಅವರಿಗೆ ಎರಡು ಕಡೆ ಟಿಕೆಟ್ ನೀಡುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

ಶಿಗ್ಗಾಂವಿ ಕ್ಷೇತ್ರದ ಜಾತಿವಾರು ಲೆಕ್ಕಾಚಾರ

ಪಂಚಮಸಾಲಿ- 60,000

ಮುಸ್ಲಿಂ- 50,000

ಎಸ್ಸಿ- 20,000

ಎಸ್ಟಿ- 20,000

ಕುರುಬ- 20,000

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...