ನಾನು – ಸವದಿ ಸಚಿವರಾಗಬೇಕಿತ್ತು ಎನ್ನುವುದು ಜನರ ಅಭಿಲಾಷೆಯಾಗಿತ್ತು : ಜಗದೀಶ ಶೆಟ್ಟರ್

Date:

  • ಸಚಿವ ಸ್ಥಾನಕ್ಕೆ ನಾನೆಂದೂ ಬೇಡಿಕೆ ಇಟ್ಟಿಲ್ಲ, ಇಡುವುದೂ ಇಲ್ಲ
  • ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಾನು ಮತ್ತು ಲಕ್ಷ್ಮಣ ಸವದಿ ಸಚಿವರಾಗಬೇಕು ಎಂಬುದು ಜನರ ಅಭಿಲಾಷೆಯಾಗಿತ್ತು. ಆದರೆ, ಹಲವು ಕಾರಣಗಳಿಂದ ನಮ್ಮಿಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಮುಖಂಡ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಭಾಗದ ಜನ ಸವದಿ ಹಾಗೂ ನನ್ನನ್ನು ಮಂತ್ರಿಯನ್ನಾಗಿ ನೋಡಲು ಬಯಸಿದ್ದರು. ಆದರೆ ಅದಾಗಲಿಲ್ಲ. ಹೀಗಂದ ಮಾತ್ರಕ್ಕೆ ನಾನು ಸಚಿವಾಕಾಂಕ್ಷಿಯೇನಲ್ಲ. ಎಂದಿಗೂ ನಾನು ಸಚಿವ ಸ್ಥಾನ ಬೇಕು ಎಂದು ಬೇಡಿಕೆ ಇಟ್ಟಿಲ್ಲ, ಇಡುವುದೂ ಇಲ್ಲ ಎಂದು ಶೆಟ್ಟರ್ ಹೇಳಿದರು.

ಮುಂದುವರೆದು ಮಾತನಾಡಿದ ಅವರು, ʼಸಚಿವ ಸ್ಥಾನವೊಂದೇ ಪಕ್ಷದಲ್ಲಿ ಮುಖ್ಯವಲ್ಲ, ಅದಲ್ಲದೆ ಇನ್ನೂ ಹಲವಾರು ಸ್ಥಾನಮಾನಗಳಿವೆ. ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ ಎನ್ನುವ ನಂಬಿಕೆಯಿದೆʼ ಎಂದ ಜಗದೀಶ ಶೆಟ್ಟರ್, ನಾನು ಕಾಂಗ್ರೆಸ್‌ಗೆ ಯಾವುದೇ ಷರತ್ತಿಲ್ಲದೆ ಬಂದಿದ್ದೇನೆ. ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? : ವಿಶೇಷಚೇತನ ವ್ಯಕ್ತಿಗೆ ಚಿಲ್ಲರೆ ಅಂಗಡಿ ತೆರೆಯಲು ಸಹಾಯಕ್ಕೆ ಬಂದ ಸಚಿವ ಪ್ರಿಯಾಂಕ್‌ ಖರ್ಗೆ

ಇನ್ನು ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೀರಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಸಮಯವಿದೆ. ಮುಂದಿನ ದಿನಗಳಲ್ಲಿ ಪಕ್ಷ ನನಗೆ ನೀಡುವ ಜವಾಬ್ಧಾರಿ ಅನುಸಾರ ಅದಕ್ಕೆ ಬದ್ಧನಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ...

ದಾವಣಗೆರೆ | ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...