ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದರು.
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಶಿರಸಿಯಲ್ಲಿ ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಕಾಗೇರಿ ಅವರಿಗೆ ಸಲ್ಲಿಸಿದರು.
ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುವ ಮುನ್ನ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, “ಕೆಲವರು ತಮ್ಮ ಹಿತಕ್ಕಾಗಿ ಬಿಜೆಪಿಯನ್ನು ಬಲಿ ಕೊಡುತ್ತಿದ್ದಾರೆ. ಹಿರಿಯರಿಗೆ ಗೌರವ ಕೊಡದೆ ಇರುವುದು ಬಿಜೆಪಿಗೆ ಮುಂದೆ ಮುಳುವಾಗುತ್ತೆ” ಎಂದು ಶಾಸಕ ಜಗದೀಶ ಶೆಟ್ಟರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಅವರಿಗೆ ಇಲ್ಲಿನ ಬಿಜೆಪಿಯ ತಳಮಟ್ಟದ ಪರಿಸ್ಥಿತಿ ಬಗ್ಗೆ ಏನೂ ಗೊತ್ತಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿಗಳು ಹಾಗೂ ಇಲ್ಲಿನ ನಾಯಕರು ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಬೇಡ ಅಂತಾ ತೀರ್ಮಾನ ಮಾಡಿದಂತಿದೆ ಕಾಣುತ್ತಿದೆ. ಪಕ್ಷದ ನಡೆ ಬೇಸರ ತರಿಸಿದೆ. ಪಕ್ಷದ ಪ್ರಾಥಮಿಕ ಸ್ಥಾನಕ್ಕೂ ಇಂದೇ ರಾಜೀನಾಮೆ ನೀಡುವೆ. ಬಳಿಕ ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ. ನಾನು ಈ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ” ಎಂದು ತಿಳಿಸಿದ್ದಾರೆ.