ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್‌ ಶೆಟ್ಟರ್

Date:

ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಜಗದೀಶ್‌ ಶೆಟ್ಟರ್‌ ಅವರು ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದರು.

- Advertisement -

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಶಿರಸಿಯಲ್ಲಿ ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಕಾಗೇರಿ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುವ ಮುನ್ನ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, “ಕೆಲವರು ತಮ್ಮ ಹಿತಕ್ಕಾಗಿ ಬಿಜೆಪಿಯನ್ನು ಬಲಿ‌ ಕೊಡುತ್ತಿದ್ದಾರೆ. ಹಿರಿಯರಿಗೆ ಗೌರವ ಕೊಡದೆ ಇರುವುದು ಬಿಜೆಪಿಗೆ ಮುಂದೆ ಮುಳುವಾಗುತ್ತೆ” ಎಂದು ಶಾಸಕ ಜಗದೀಶ ಶೆಟ್ಟರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಅವರಿಗೆ ಇಲ್ಲಿನ ಬಿಜೆಪಿಯ ತಳಮಟ್ಟದ ಪರಿಸ್ಥಿತಿ ಬಗ್ಗೆ ಏನೂ ಗೊತ್ತಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿಗಳು ಹಾಗೂ ಇಲ್ಲಿನ ನಾಯಕರು ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಬೇಡ ಅಂತಾ ತೀರ್ಮಾನ ಮಾಡಿದಂತಿದೆ ಕಾಣುತ್ತಿದೆ. ಪಕ್ಷದ ನಡೆ ಬೇಸರ ತರಿಸಿದೆ. ಪಕ್ಷದ ಪ್ರಾಥಮಿಕ ಸ್ಥಾನಕ್ಕೂ ಇಂದೇ ರಾಜೀನಾಮೆ ನೀಡುವೆ. ಬಳಿಕ ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ. ನಾನು ಈ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...