ಪೂರ್ಣಪ್ರಮಾಣದಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆ; ನಾಳೆ ಪ್ರಮಾಣ ವಚನ

Date:

ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯ ಕಸರತ್ತು ಕೊನೆಗೂ ಅಂತ್ಯಗೊಂಡಿದ್ದು, 24 ಶಾಸಕರಿಗೆ ಸಚಿವ ಸ್ಥಾನ ಲಭಿಸುವ ಮೂಲಕ ಪೂರ್ಣಪ್ರಮಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಿದ್ಧವಾಗಿದೆ.

ಮುಖ್ಯಮಂತ್ರಿಗಳ ಕಚೇರಿಯಿಂದ ನೂತನ ಸಚಿವರ ಪಟ್ಟಿ ರಾಜಭವನ ತಲುಪಿದೆ. ಶನಿವಾರ (ನಾಳೆ) ಬೆಳಿಗ್ಗೆ 11.45 ಕ್ಕೆ 24 ಸಚಿವರು ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕೃಸಲಿದ್ದಾರೆ.

ಶನಿವಾರ ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಈಶ್ವರ್ ಖಂಡ್ರೆ, ರಹೀಂ ಖಾನ್, ಸಂತೋಷ್ ಲಾಡ್, ಕೆ ಎನ್ ರಾಜಣ್ಣ, ಪಿರಿಯಾಪಟ್ಟಣ ವೆಂಕಟೇಶ್, ಎಚ್. ಸಿ. ಮಹದೇವಪ್ಪ, ಬೈರತಿ ಸುರೇಶ್, ಸಿ. ಪುಟ್ಟರಂಗಶೆಟ್ಟಿ, ಶಿವರಾಜ್ ತಂಗಡಗಿ, ಆರ್.ಬಿ. ತಿಮ್ಮಾಪುರ, ಬಿ ನಾಗೇಂದ್ರ, ಲಕ್ಷ್ಮೀ ಹೆಬ್ಬಾಳ್ಕರ್, ಮಧು ಬಂಗಾರಪ್ಪ, ಡಿ ಸುಧಾಕರ್, ಚೆಲುವರಾಯ ಸ್ವಾಮಿ, ಮಂಕಾಳ ವೈದ್ಯ,ಶಿವಾನಂದ ಪಾಟೀಲ್ ,ಎಂಸಿ ಸುಧಾಕರ್, ಹೆಚ್.ಕೆ. ಪಾಟೀಲ್, ಶರಣಪ್ರಕಾಶ ಪಾಟೀಲ್, ಎಸ್ ಎಸ್ ಮಲ್ಲಿಕಾರ್ಜುನ, ಶರಣಬಸಪ್ಪ ದರ್ಶನಾಪುರ ಸೇರಿದ್ದಾರೆ.

ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲಿರುವ ನೂತನ ಸಚಿವರ ಪಟ್ಟಿಯಲ್ಲಿ ಏಕೈಕ ಎಂಎಲ್‌ಸಿ ಎನ್‌ಎಸ್‌ ಬೋಸರಾಜು ಅವರ ಹೆಸರಿಗೂ ಅನುಮೋದನೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಅಂತಿಮ ಪಟ್ಟಿಗೆ ಅನುಮೋದನೆ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕೊನೆಗೂ ನಕಲಿ ದೇಶಭಕ್ತರಿಗೆ ಮಂದಿನ ಐದು ವರ್ಷಗಳು ತಿಂದಿದ್ದನ್ನು ಅರಗಿಸಿಕೊಳ್ಳಲು ಮಾಡಿದ ಘನಂದಾರಿ ಕೆಲಸಗಳಿಗೆ ವಿಶ್ರಾಂತಿಯ ಅಗತ್ಯವಿತ್ತು ಅದನ್ನು ಕರ್ನಾಟಕದ ಪ್ರಜ್ಞಾವಂತ ಮತದಾರರು ಮತದಾರರು ಮಾಡಿದ್ದಾರೆ, ಮುಂದಿನ ಐದು ವರ್ಷಗಳಲ್ಲಿ ಕಾಂಗ್ರೆಸ್ ನವರು ಜನರಿಗೆ ನೀಡಿದ ಭರವಸೆಗಳನ್ನು ನಿಯತ್ತಾಗಿ ಈಡೇರಿಸುವ ಕೆಲಸ ಮಾಡಿದರೆ ಭಯಂಕರ ದೇಶಭಕ್ತರ ಮುಕ್ತ ಕರ್ನಾಟಕ ಮಾಡಿ ರಾಜ್ಯ ನೆಮ್ಮದಿಯಿಂದ ಇರಬಹುದು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ...

ಕಲಬುರಗಿ | ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ’ ಅಭಿಯಾನ

ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ...

ದಕ್ಷಿಣ ಕನ್ನಡ | ಮೀನಿನ ಆಹಾರ ತಯಾರಿಕಾ ಘಟಕದಲ್ಲಿ ಬೆಂಕಿ; ಕೋಟ್ಯಂತರ ರೂ. ನಷ್ಟ

ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ...

ವಿಜಯಪುರ | ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ರೈತ ಸಂಘ ಆಗ್ರಹ

ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ರಾಜ್ಯ ರೈತ...