ಮೊದಲು ‘ಎಸ್‌ಡಿಪಿಐ’ ಬ್ಯಾನ್ ಮಾಡಲಿ, ಉಳಿದಿದ್ದು ಆಮೇಲೆ ಮಾತನಾಡುವೆ: ಮಾಜಿ ಸಿಎಂ ಬೊಮ್ಮಾಯಿ

Date:

ಮೊದಲು ಎಸ್‌ಡಿಪಿಐ ಬ್ಯಾನ್ ಮಾಡಲಿ. ಆಮೇಲೆ ಉಳಿದಿದ್ದನ್ನು ಮಾತನಾಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗೆಸ್‌ ನಾಯಕರಿಗೆ ಸವಾಲು ಹಾಕಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, “ಮುಂದಿನ ಐದು ತಿಂಗಳಲ್ಲಿ ರಾಜ್ಯ ರಾಜ್ಯಕಾರಣದ ಚಿತ್ರಣ ಬದಲಾಗಲಿದೆ. ಸರ್ಕಾರ ಹೋಗುತ್ತಿರುವ ರೀತಿ ನೋಡಿದರೆ ದ್ವೇಷ ರಾಜಕಾರಣಕ್ಕೆ ಮುನ್ನುಡಿ ಬರೆದಂತಿದೆ. ನಮ್ಮ ಕಾರ್ಯಕರ್ತರ ಮೇಲೆ ಕೇಸ್ ಹಾಕಲು ಈಗಲೇ ಶುರು ಮಾಡಿದ್ದಾರೆ” ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಸಂಘಟನೆಗಳಿಗೆ ಬ್ಯಾನ್ ಮಾಡುವ ವಿಚಾರದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, “ಕಾಂಗ್ರೆಸ್‌ನವರು ಮೊದಲು ಎಸ್‌ಡಿಪಿಐ ಬ್ಯಾನ್ ಮಾಡಲಿ. ಆಮೇಲೆ ಉಳಿದಿದ್ದನ್ನು ಮಾತನಾಡುತ್ತೇನೆ” ಎಂದು ಉತ್ತರಿಸಿದರು.

25ಕ್ಕೂ ಹೆಚ್ಚು ಸೀಟು ಗೆಲ್ಲುವ ವಿಶ್ವಾಸ

“ವಿಧಾನಸಭಾ ಫಲಿತಾಂಶದ ನಂತರ ಸುಮ್ಮನೆ ಕುಳಿತಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸೀಟುಗಳನ್ನು ಕರ್ನಾಟಕದಲ್ಲಿ ಗೆಲ್ಲುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕಿದೆ” ಎಂದರು.

“ನನ್ನ ಉಸಿರು ಇರುವವರೆಗೂ ಶಿಗ್ಗಾಂವಿ ಕೇತ್ರದ ಜನರೊಂದಿಗೆ ಇರುತ್ತೇನೆ. ನನ್ನ ಜೀವನದ ಕೊನೆ ಉಸಿರಿನವರೆಗೂ ಕ್ಷೇತ್ರದ ಸೇವೆ ಮಾಡುತ್ತೇನೆ. ಸದಾ ಶಿಗ್ಗಾಂವಿ ಕ್ಷೇತ್ರದ ಜನರ ಸೇವೆಯಲ್ಲಿ ನನ್ನ ಜೀವನವನ್ನು ಸವೆಸುತ್ತೇನೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ...

ಕರ್ನಾಟಕದ ಜಯವನ್ನು ಮಧ್ಯಪ್ರದೇಶದಲ್ಲಿ ಪುನರಾವರ್ತಿಸಲಿದ್ದೇವೆ: ರಾಹುಲ್ ಗಾಂಧಿ

ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಹಿರಿಯ ನಾಯಕರು...

ನೀತಿ ಆಯೋಗದ ಸಭೆಗೆ ಹಾಜರಾಗದೆ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ : ಬಿಜೆಪಿ

ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ...

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ...