ಜನತೆಗೆ ಇನ್ನೂ ಬುದ್ಧಿ ಬಂದಿಲ್ಲ, ಹಣ ಪಡೆದು ಮತ ಹಾಕುವ ಚಾಳಿ ಬಿಟ್ಟಿಲ್ಲ: ಹೈಕೋರ್ಟ್‌

Date:

  • ಮುಂದಿನ ವಿಚಾರಣೆ ಏಪ್ರಿಲ್ 20ಕ್ಕೆ ಮುಂದೂಡಿಕೆ
  • ಜನರಿಗೆ ಇನ್ನೂ ಬುದ್ಧಿ ಬಂದಿಲ್ಲ ಎಂದು ಹೈಕೋರ್ಟ್‌

ಸ್ಮಶಾನ ಭೂಮಿ ಇಲ್ಲದ ಗ್ರಾಮದವರು ಮನವಿ ಸಲ್ಲಿಸುವಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿತ್ತು. ಆದರೂ ಮನವಿ ಸಲ್ಲಿಸದ ಜನತೆಯ ವಿರುದ್ಧ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ‌. “ಎಲ್ಲರೂ ಸ್ವಾರ್ಥಿಗಳಾಗಿ ಬದಲಾಗುತ್ತಿದ್ದಾರೆ” ಎಂದು ಹೇಳಿದೆ.

ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಿ ಹೈಕೋರ್ಟ್ ಹೊರಡಿಸಿದ ಆದೇಶ ಜಾರಿಯಾಗಿಲ್ಲವೆಂದು ಆರೋಪಿಸಿ, ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬುವರು ಪಿಐಎಲ್ ಸಲ್ಲಿಸಿದ್ದರು.

ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಮೂರ್ತಿ ಟಿ ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

“ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿವೆ. ಆದರೆ, ಜನತೆಗೆ ಇನ್ನೂ ಬುದ್ಧಿ ಬಂದಿಲ್ಲ. ಹಣ ಪಡೆದು ಮತ ಹಾಕುವ ಚಾಳಿ ಮುಂದುವರಿದಿದೆ. ಜನ ಎಚ್ಚೆತ್ತುಕೊಳ್ಳದಿದ್ದರೆ ನಾವೇನೂ ಮಾಡುವುದಕ್ಕೆ ಸಾಧ್ಯವಿಲ್ಲ. ಜನರು ಸರಿಯಾದರೆ ಎಲ್ಲವೂ ಸರಿಯಾಗಲಿದೆ” ಎಂದು ಪೀಠ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಎಷ್ಟು ಗ್ರಾಮಗಳಿವೆ ಎಂಬುವರ ಕುರಿತು ಮಾಹಿತಿ ಇದೆಯೇ ಎನ್ನುವ ಪೀಠದ ಪ್ರಶ್ನೆಗೆ ಅರ್ಜಿದಾರರು ‘ಇಲ್ಲ’ ಎಂದು ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ಆಕ್ಸ್‌ಫಾಮ್‌ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸಿಬಿಐಗೆ ಸೂಚನೆ ನೀಡಿದ ಗೃಹ ಸಚಿವಾಲಯ

ಅರ್ಜಿದಾರರ ಉತ್ತರಕ್ಕೆ ಕೆರಳಿದ ನ್ಯಾಯಪೀಠ, “2018ರಿಂದ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದನ್ನು ನ್ಯಾಯಾಲಯ ಮೇಲ್ವಿಚಾರಣೆ ಮಾಡುತ್ತಿದೆ. ಅಲ್ಲದೆ, ನ್ಯಾಯಾಲಯ ಪ್ರತಿ 15 ದಿನಕ್ಕೊಮ್ಮೆ ಎಷ್ಟು ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಲಾಗಿದೆ ಎಂಬ ಅಂಶನ್ನು ಪಡೆದು ವಿಚಾರಣೆ ನಡೆಸುತ್ತಿದೆ. ಆದರೂ ರಾಜ್ಯದಲ್ಲಿ ಎಷ್ಟು ಗ್ರಾಮಗಳಿವೆ ಎಂಬುದು ಅರ್ಜಿದಾರರಿಗೆ ಗೊತ್ತಿಲ್ಲ ಎಂದರೆ ಹೇಗೆ” ಎಂದು ಪ್ರಶ್ನಿಸಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಸರ್ಕಾರದ ವಕೀಲರು, ಯಾವೆಲ್ಲಾ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಇಲ್ಲ ಎಂಬುದರ ಮಾಹಿತಿ ಸಂಗ್ರಹಿಸುವ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸುವಂತೆ ಪೀಠವು ಈ ಹಿಂದೆ ನೀಡಿದ್ದ ನಿರ್ದೇಶನದ ಅನುಪಾಲನೆ ಮಾಡಿರುವ ವರದಿಯನ್ನು ಪೀಠಕ್ಕೆ ಸಲ್ಲಿಸಿದರು.

ರಾಜ್ಯದ 31 ಜಿಲ್ಲೆಗಳಲ್ಲಿ ರಾಜ್ಯ ಮಟ್ಟದ ಮತ್ತು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆದರೆ, ಈವರೆಗೂ ಸ್ಮಶಾನ ಭೂಮಿ ಇಲ್ಲ ಎಂದು ಯಾವುದೇ ಗ್ರಾಮದಿಂದ ಮನವಿ ಬಂದಿಲ್ಲ. ಮನವಿ ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಪೀಠಕ್ಕೆ ತಿಳಿಸಿದರು. ಮಾಹಿತಿ ದಾಖಲಿಸಿಕೊಂಡ ಪೀಠವು ವಿಚಾರಣೆಯನ್ನು ಏಪ್ರಿಲ್ 20ಕ್ಕೆ ಮುಂದೂಡಿತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಠ್ಯ ಪರಿಷ್ಕರಣೆ | ಕಾಂಗ್ರೆಸ್‌ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ, ಸಿ ಟಿ ರವಿ ವಾಗ್ದಾಳಿ

ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ: ಕೋಟಾ ಶ್ರೀನಿವಾಸ ಪೂಜಾರಿ ಕಾರ್ಲ್ ಮಾರ್ಕ್ಸ್...

ವಾಟ್ಸ್ಆ್ಯಪ್ ಯೂನಿವರ್ಸಿಟಿಯಲ್ಲಿ ಪಿಎಚ್‌ಡಿ ಮಾಡಿದವರ ಪಾಠ ನಮ್ಮ ಮಕ್ಕಳಿಗೆ ಬೇಡ: ಪ್ರಿಯಾಂಕ್ ಖರ್ಗೆ

ಶಾಲಾ ಪಠ್ಯದಲ್ಲಿನ ಚಕ್ರವರ್ತಿ ಸೂಲಿಬೆಲೆ ಪಠ್ಯ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ಅಸಮಾಧಾನ ನಮ್ಮ...

ಜಿಲ್ಲಾ ಉಸ್ತುವಾರಿಗಳ‌ನ್ನು ನೇಮಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಉಪ ಮುಖ್ಯಮಂತ್ರಿ ಮತ್ತು ಸಚಿವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ...

ವಿವಿಧ ರೀತಿಯ ಪಿಂಚಣಿ ಪಡೆಯುವವರಿಗೂ ಗೃಹಲಕ್ಷ್ಮಿ ಸಿಗಲಿದೆ: ಸಚಿವ ಕೃಷ್ಣ ಭೈರೇಗೌಡ

ಗೃಹಲಕ್ಷ್ಮಿ ಯೋಜನೆ ಅನುಮಾನಗಳಿಗೆ ಸ್ಪಷ್ಟನೆ ನೀಡಿದ ಕಂದಾಯ ಸಚಿವ ಗೃಹ ಲಕ್ಷ್ಮಿ ಯೋಜನೆ...