ಐವರಿಗೆ ಸಚಿವ ಸ್ಥಾನ ನೀಡಲು ಪಂಚಮಸಾಲಿ ಸ್ವಾಮೀಜಿ ನೇತೃತ್ವದಲ್ಲಿ ನಿರ್ಣಯ ಮಂಡನೆ

Date:

  • ಒಟ್ಟು ಐದು ಶಾಸಕರಿಗೆ ಕಾಂಗ್ರೆಸ್ ಸಚಿವ ಸ್ಥಾನ ಕಲ್ಪಿಸಬೇಕು
    • ಬಿಜೆಪಿ ರಾಜ್ಯಾಧ್ಯಕ್ಷ/ವಿರೋಧ ಪಕ್ಷದ ಸ್ಥಾನವನ್ನು ನೀಡಬೇಕು

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯ ಮೂರು ನಿರ್ಣಯ ಕೈಗೊಂಡಿದೆ.

ಲಿಂಗಾಯತ ಪಂಚಮಸಾಲಿ ಸಮುದಾಯದ ನೂತನ ಶಾಸಕರುಗಳ ಅಭಿನಂದನಾ ಸಮಾರಂಭ ಕುರಿತು ಚರ್ಚಿಸುವ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಪೂರ್ವಭಾವಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು.

ಈ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವರಿಷ್ಠರಿಗೆ ಪಂಚಮಸಾಲಿ ಸಮುದಾಯದ ರಾಜಕೀಯ ಪ್ರಾತಿನಿಧ್ಯ ಕುರಿತ ಬೇಡಿಕೆಗಳನ್ನು ಜಯಮೃತ್ಯುಂಜಯ ಸ್ವಾಮೀಜಿ ಮೂಲಕ ಸಮುದಾಯ ಮಂಡಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಮುಖ ಬೇಡಿಕೆಗಳು

1) ಲಿಂಗಾಯತ ಪಂಚಮಸಾಲಿ ಸಮಾಜದ ಬಂಧುಗಳ ಒತ್ತಾಯದಂತೆ, ಮೀಸಲಾತಿಗಾಗಿ ಮುಂಚೂಣಿಯಲ್ಲಿ ಹೋರಾಡಿದಂತಹ ಶಾಸಕರಾದ ವಿಜಯಾನಂದ ಕಾಶಪ್ಪನವರ್ (ಹುನಗುಂದ), ವಿನಯ ಕುಲಕರ್ಣಿ (ಧಾರವಾಡ ಗ್ರಾಮೀಣ) ಹಾಗೂ ಲಕ್ಷ್ಮಿ ಹೆಬ್ಬಾಳಕರ್ (ಬೆಳಗಾವಿ ಗ್ರಾಮೀಣ) ಒಳಗೊಂಡಂತೆ ಒಟ್ಟು ಐದು ಶಾಸಕರಿಗೆ ಕಾಂಗ್ರೆಸ್ ಸಚಿವ ಸ್ಥಾನ ಕಲ್ಪಿಸಬೇಕು.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಹಾಗೂ ಕಾಂಗ್ರೆಸ್ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಭೆಯಲ್ಲಿ ಒತ್ತಾಯಿಸಲಾಯಿತು.

2) ಬಿಜೆಪಿಯ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ಸ್ಥಾನಕ್ಕೆ ಸಮರ್ಥ ಲಿಂಗಾಯತ ಪಂಚಮಸಾಲಿ ಶಾಸಕರಿಗೆ ಅವಕಾಶ ಮಾಡಿಕೊಡಬೇಕು ಎಂದು ರಾಷ್ಟ್ರೀಯ ಬಿಜೆಪಿ ವರಿಷ್ಠರಿಗೆ ಆಗ್ರಹಿಸಲಾಯಿತು.

3) ನೂತನ ಶಾಸಕರ ಅಭಿನಂದನಾ ಸಮಾರಂಭವನ್ನು ಹಾಗೂ ಮೀಸಲಾತಿ ಹಕ್ಕೊತ್ತಾಯ ಸಮಾರಂಭವನ್ನು ಕೂಡಲ ಸಂಗಮದಲ್ಲಿ ಜೂನ್ ತಿಂಗಳಲ್ಲಿ ನೆರವೇರಿಸಲು ತೀರ್ಮಾನಿಸಲಾಯಿತು.

ಶಾಸಕ ವಿಜಯಾನಂದ ಕಾಶಪ್ಪನವರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ನೂತನ ಶಾಸಕರಾದ ವಿನಯ ಕುಲಕರ್ಣಿ, ಲಕ್ಷ್ಮೀ ಹೆಬ್ಬಾಳ್ಕರ್, ರಾಜುಗೌಡ ಕಾಗೆ, ರಾಜುಗೌಡ ಪಾಟೀಲ್, ಅಶೋಕ ಮನಗೂಳಿ, ಬಾಬಾ ಸಾಹೇಬ್ ಪಾಟೀಲ, ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ನಿಗಮದ ಮಾಜಿ ಅಧ್ಯಕ್ಷ ಎಂಎಸ್ ರುದ್ರಗೌಡ ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಕಲಬುರಗಿಯಲ್ಲಿ ಅಳಿಯನ ಸ್ಪರ್ಧೆ – ಮಾವನಿಗೆ ಪ್ರತಿಷ್ಠೆ

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ತವರು ರಾಜ್ಯ ಕರ್ನಾಟಕದಲ್ಲಿ...

ಕಾಂಗ್ರೆಸ್‌ ಪ್ರತಿಭಟನೆ | ಬರ ಪರಿಹಾರ ನೀಡಿ, ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವಿರೋಧಿಸಿ...

ದಕ್ಷಿಣ ಕನ್ನಡ | ಕಾಂಗ್ರೆಸ್‌ ಸೇರಿದ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡ

ಮಂಗಳೂರಿನಲ್ಲಿ ಮಂಗಳಮುಖಿಯರ ಸಮುದಾಯದ ಸದಸ್ಯರು ಸೋಮವಾರ (ಏ.22) ಕಾಂಗ್ರೆಸ್ ಸೇರ್ಪಡೆಯಾದರು. ಮಂಗಳೂರಿನ...