ಚುನಾವಣೆ 2023 | ಕಾಂಗ್ರೆಸ್‌ನ ಹಿರಿಯ ಮುಖಂಡ ನಾಗರಾಜ ಛಬ್ಬಿ ಬಿಜೆಪಿ ಸೇರ್ಪಡೆ

Date:

  • ಕಲಘಟಗಿಯಲ್ಲಿ ಸಿದ್ದು ಆಪ್ತ ಸಂತೋಷ್‌ ಲಾಡ್‌ಗೆ ಮಣೆ ಹಾಕಿದ ಕಾಂಗ್ರೆಸ್‌
  • ಟಿಕೆಟ್‌ ಸಿಗದಿದ್ದಕ್ಕೆ ಕಾಂಗ್ರೆಸ್‌ ವಿರುದ್ಧ ಮುನಿಸಿಕೊಂಡಿದ್ದ ನಾಗರಾಜ ಛಬ್ಬಿ

ಕಾಂಗ್ರೆಸ್‌ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಕಾಂಗ್ರೆಸ್‌ ತೊರೆದು ಭಾನುವಾರ ನವದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾದರು.

ಸಿದ್ದರಾಮಯ್ಯ ಆಪ್ತ ಸಂತೋಷ್‌ ಲಾಡ್‌ಗೆ ಕಲಘಟಗಿ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಬಂಡಾಯ ಎದ್ದ ಛಬ್ಬಿ, ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ನಾಗರಾಜ ಛಬ್ಬಿ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಕೊನೆಗೆ ಸಿದ್ದರಾಮಯ್ಯ ಆಪ್ತ ಸಂತೋಷ್‌ ಲಾಡ್‌ಗೆ ಕಾಂಗ್ರೆಸ್‌ ಮಣೆ ಹಾಕಿದೆ. ಇದರಿಂದ ಮುನಿಸಿಕೊಂಡು ಕಾಂಗ್ರೆಸ್‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಟಿಕೆಟ್‌ ಘೊಷಣೆಗೂ ಮುನ್ನವೇ ಬಂಡಾಯ; ಶಾಸಕ ರಾಮಪ್ಪ ಲಮಾಣಿ ವಿರುದ್ಧ ಭುಗಿಲೆದ್ದ ಆಕ್ರೋಶ

ನಾಗರಾಜ ಛಬ್ಬಿ ಅವರನ್ನು ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಲ ಸಂಪನ್ಮೂಲ ಸಚಿವ ಗೋವಿಂದ‌ ಕಾರಜೋಳ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಬಿಜೆಪಿ ಬಾವುಟ ನೀಡಿ ಬರಮಾಡಿಕೊಂಡಿದ್ದಾರೆ.

ಬಿಜೆಪಿಯಿಂದ ನಾಗರಾಜ ಛಬ್ಬಿ ಅವರಿಗೆ ಕಲಘಟಗಿ ಟಿಕೆಟ್‌ ಸಿಗುತ್ತದೆಯೇ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಬಿಜೆಪಿಯಿಂದ ಟಿಕೆಟ್‌ ಬಯಸಿಯೇ ಅವರು ಪಕ್ಷ ಸೇರಿದ್ದಾರೆ ಎನ್ನಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್ಐ ನೇಮಕಾತಿ ಅಕ್ರಮ: ತನಿಖೆಗೆ ಸಜ್ಜಾದ ಸರ್ಕಾರ

ಬಿಜೆಪಿ ಅಕ್ರಮದ ಬೇಟೆ ಆರಂಭಿಸಿದ ಕಾಂಗ್ರೆಸ್ ಪಿಎಸ್ಐ ನೇಮಕ ಅಕ್ರಮ ತನಿಖೆಗೆ ಸಿದ್ಧತೆ ಪೊಲೀಸ್...

ಗ್ಯಾರಂಟಿ ಜಾರಿಗೆ ಅಭಿವೃದ್ಧಿ ಅನುದಾನಗಳಿಗೆ ಕತ್ತರಿ ಹಾಕಬೇಡಿ : ಮಾಜಿ ಸಿಎಂ ಬೊಮ್ಮಾಯಿ

ಹಿಂದಿನ ಸರ್ಕಾರದ ಜನಪರ ಯೋಜನೆ ಮುಂದುವರೆಸಲು ಸಿಎಂಗೆ ಮನವಿ ಸಿದ್ದರಾಮಯ್ಯಗೆ ಪತ್ರ ಮೂಲಕ...

ಮಳೆಹಾನಿ | ಪರಿಹಾರ ಕ್ರಮ ತ್ವರಿತವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಸೂಚನೆ

67 ಮಂದಿ ಪ್ರಾಣಹಾನಿ ಆಗಿದ್ದು, 60 ಮಂದಿಯ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ 487...

ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದರೆ ನಾವೇ ಖರೀದಿಸುತ್ತೇವೆ: ಸಚಿವ ಮುನಿಯಪ್ಪ

ಘೋಷಿತ ಐದೂ ಗ್ಯಾರಂಟಿಗಳನ್ನು ಹಂತಹಂತವಾಗಿ ನೀಡುತ್ತೇವೆ ನಮ್ಮ ಮಾತಿಗೆ ನಾವು ಎಂದಿಗೂ ಬದ್ಧರಾಗಿರುತ್ತೇವೆ...