ಹಾಸನ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಹೊಂದಾಣಿಕೆ ರಾಜಕಾರಣದಿಂದ ನಾವು ಸೋತೆವು: ಡಿ ವಿ ಸದಾನಂದಗೌಡ

Date:

  • ವಿಧಾನಸಭಾ ಚುನಾವಣೆ; ಜೆಡಿಎಸ್‌-ಕಾಂಗ್ರೆಸ್‌ ಹೊಂದಾಣಿಕೆ
  • ನಮ್ಮ ಪಕ್ಷದಲ್ಲಿ ಒಳಒಪ್ಪಂದ ಆಗಿಯೇ ಇಲ್ಲ ಎಂದು ಹೇಳಲ್ಲ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರಿಂದ ನಮ್ಮ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು. ಉದಾಹರಣಗೆ ಹಾಸನ ಮತ್ತು ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಹೊಂದಾಣಿಕೆ ರಾಜಕಾರಣ ಕಾಣಬಹುದು ಎಂದು ಬಿಜೆಪಿ ಸಂಸದ ಡಿ ವಿ ಸದಾನಂದಗೌಡ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಹೊಂದಾಣಿಕೆ ರಾಜಕಾರಣಕ್ಕೆ ಹಾಸನದಲ್ಲಿ ನಮ್ಮ ಅಭ್ಯರ್ಥಿ ಸೋಲಬೇಕಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮತಗಳನ್ನು ನೋಡಿದರೆ ಹೊಂದಾಣಿಕೆ ರಾಜಕಾರಣ ಅರ್ಥವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಹಾಗೆಯೇ ಸಿಟಿ ರವಿ ಕ್ಷೇತ್ರದಲ್ಲೂ ಈ ಹೊಂದಾಣಿಕೆ ರಾಜಕಾರಣ ನೋಡಬಹುದು. ಇಲ್ಲಿ ಜೆಡಿಎಸ್‌ ಅಧಿಕೃತವಾಗಿ ಘೋಷಣೆ ಮಾಡಿದೆ. ಇದಲ್ಲದೇ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ನಾಯಕರು ಅಧಿಕೃತವಾಗಿ ಕಾಂಗ್ರೆಸ್‌ ಬೆಂಬಲಿಸಿದ್ದಾರೆ. ಇದು ಒಳ ಒಪ್ಪಂದದ ರಾಜಕಾರಣಕ್ಕೆ ಉಂಟಾದ ಸೋಲು ನಮ್ಮದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೋದಿಯವರನ್ನು ಪ್ರಶ್ನಿಸಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ಕಿರುಕುಳ : ವೈಟ್‌ಹೌಸ್ ಖಂಡನೆ

ನಮ್ಮ ಪಕ್ಷದಲ್ಲಿ ಒಳಒಪ್ಪಂದ ಆಗಿಯೇ ಇಲ್ಲ ಎಂದು ಹೇಳುವುದಿಲ್ಲ. ಕೆಲವರು ವೈಯಕ್ತಿಕ ದ್ವೇಷಕ್ಕಾಗಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಅಂತವರ ಬಗ್ಗೆ ಈಗಾಗಲೇ ಪಕ್ಷ ಒಂದು ನಿರ್ಧಾರಕ್ಕೆ ಬಂದಿದೆ. ಈಗ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಸಭೆಗಳು ನಡೆಯುತ್ತಿವೆ. ಈ ಸಭೆಯಲ್ಲಿ ಸೋಲಿನ ಪರಾಮರ್ಶೆ ನಡೆಯುತ್ತಿದೆ. ಒಳ ಒಪ್ಪಂದ ಮಾಡಿಕೊಂಡವರ ಬಗ್ಗೆ ಪಕ್ಷ ಖಂಡಿತ ನಿರ್ಧಾರ ತೆಗೆದುಕೊಳ್ಳುತ್ತದೆ. ಸಂಘಟನೆಯಲ್ಲಿ ತಪ್ಪು ಮಾಡಿದವರನ್ನು ತಿದ್ದುವ ಕೆಲಸವನ್ನು ಮಾಡುತ್ತೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...