- ನೋಡಲ್ ಅಧಿಕಾರಿಗಳ ನಿಯೋಜನೆ; ಎಸ್.ಒ.ಪಿ ಜಾರಿ; ಪ್ರತ್ಯೇಕ ಕೌಂಟರ್ ವ್ಯವಸ್ಥೆ
- ನವೆಂಬರ್ ಜನತಾ ದರ್ಶನ: 4030 ಅರ್ಜಿಗಳ ಪೈಕಿ ಈವರೆಗೆ 3738 ಅರ್ಜಿ ವಿಲೇವಾರಿ
ನಾಳೆ(ಫೆ.8) ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿಗೆ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್, ಅಧಿಕಾರಿಗಳ ನಿಯೋಜನೆ ಹಾಗೂ ಎಸ್.ಒ.ಪಿ ಜಾರಿ ಮಾಡಿ ಸರ್ಕಾರ ಆದೇಶಿಸಿದೆ.
ಜನರ ಬಳಿಗೆ ಸರ್ಕಾರ
ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಏನೇ ಕುಂದುಕೊರತೆಗಳಿದ್ದರೂ ಬನ್ನಿ
ವೈದ್ಯಕೀಯ, ಕಂದಾಯ, ಪೊಲೀಸ್, ಪಹಣಿ, ಖಾತೆ, ಸರ್ವೆ, ಪೋಡಿ, ಅನ್ಯಾಯ ಹೀಗೆ ಯಾವುದೇ ವಿಚಾರಗಳಿರಲಿ, ಸೂಕ್ತ ಪರಿಹಾರ ಒದಗಿಸುವುದು ನಮ್ಮ ಕರ್ತವ್ಯ #JanaSpandana #problemsolving @CMofKarnataka @siddaramaiah @DKShivakumar pic.twitter.com/s9poO7iPLK— DIPR Karnataka (@KarnatakaVarthe) February 6, 2024
ಇಲಾಖಾವಾರು ಕೌಂಟರ್:
ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್ ಗಳನ್ನು ಅಳವಡಿಸಲಾಗಿದ್ದು, ಪ್ರತಿ ಸ್ಟಾಲ್ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ.
ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿಗಳ ವಿಚಾರಣಾ ಕೌಂಟರ್ ತೆರೆಯಲಾಗಿದೆ.
ನಾಳೆ ಮುಖ್ಯಮಂತ್ರಿ @siddaramaiah ಅವರ ನೇತೃತ್ವದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ವಿಧಾನಸೌಧದ ಮುಂಭಾಗದಲ್ಲಿ ವೇದಿಕೆ ಸಿದ್ದವಾಗುತ್ತಿದೆ.@CMofKarnataka #JanaSpandana pic.twitter.com/b775iXV1FK
— V PavanKumar (@VPavanKumar28) February 7, 2024
ಅಲ್ಲಿ ನಾಗರಿಕರ ಮೊಬೈಲ್ ನಂಬರ್ ಮತ್ತು ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರು, ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.
ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್ನಲ್ಲಿ ಇರಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ.
ಫೆಬ್ರವರಿ 08ರ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವು ವಿಧಾನಸೌಧದ ಮುಂಭಾಗ ನಡೆಯಲಿದೆ.
ಜನಸ್ಪಂದನಕ್ಕೆ ಆಗಮಿಸಿದವರಿಗೆ ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದ ವರೆಗೆ ಹೋಗಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ… pic.twitter.com/Ebj8pHHEHt
— DIPR Karnataka (@KarnatakaVarthe) February 7, 2024
ಹಿರಿಯ ನಾಗರಿಕರು, ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ
ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ BUGGY, ವ್ಹೀಲ್ ಚೇರ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.
ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ. ಜನತಾದರ್ಶನಕ್ಕೆ ಬರುವ ಎಲ್ಲಾ ಸಾರ್ವಜನಿಕರು ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಜನಸ್ಪಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿದೆ.
.
3738 ಅರ್ಜಿ ವಿಲೇವಾರಿ
ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಿಎಂ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.