ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಸರಿಯಲ್ಲ, ಭಾರತ ಹಿಂದಿನಿಂದಲೂ ಹಿಂದೂ ರಾಷ್ಟ್ರ: ಪೇಜಾವರ

Date:

“ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನ ಥರ ಆಗುತ್ತದೆ” ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನಿನ್ನೆ ದಾವಣಗೆರೆಯಲ್ಲಿ ನೀಡಿದ್ದ ಹೇಳಿಕೆಯು ಈಗ ವಿವಾದದ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ಸೇರಿದಂತೆ ಸಂಘಪರಿವಾರದ ಮಂದಿ ಹೇಳಿಕೆಯನ್ನು ವಿರೋಧಿಸುತ್ತಿದ್ದಾರೆ.

- Advertisement -

ಸಿಎಂ ಪುತ್ರ ಯತೀಂದ್ರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಉಡುಪಿ ಪೇಜಾವರ ಮಠದ ಸ್ವಾಮೀಜಿ, “ಭಾರತವನ್ನು ಹಿಂದೂರಾಷ್ಟ್ರ ಮಾಡಿದರೆ ಪಾಕಿಸ್ತಾನ ಮಾಡಲು ಯಾರೋ ಸಿದ್ಧತೆ ನಡೆಸುತ್ತಿದ್ದಾರೋ ಏನೋ. ಅಂತಹ ಸಿದ್ಧತೆ ಇಲ್ಲಿ ನಡೆಯುತ್ತಿದೆ ಎಂಬುದರ ಮುನ್ಸೂಚನೆ ಯತೀಂದ್ರ ಕೊಡುತ್ತಿದ್ದಾರೆ” ಎಂದು ಉತ್ತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ಭಾರತವನ್ನು ಹಿಂದೂರಾಷ್ಟ್ರ ಮಾಡಿದರೆ ಪಾಕಿಸ್ತಾನ ಮಾಡಲು ಯಾರೋ ಸಿದ್ಧತೆ ನಡೆಸುತ್ತಿದ್ದಾರೋ ಏನೋ. ಅಂತಹ ಸಿದ್ಧತೆ ಇಲ್ಲಿ ನಡೆಯುತ್ತಿದೆ ಎಂಬುದರ ಮುನ್ಸೂಚನೆ ಯತೀಂದ್ರ ಕೊಡುತ್ತಿದ್ದಾರೆ. ಅವರ ಹೇಳಿಕೆ ಸರಿಯಲ್ಲ. ಭಾರತ ಹಿಂದಿನಿಂದಲೂ ಹಿಂದೂ ರಾಷ್ಟ್ರವಾಗಿಯೇ ಇದ್ದದ್ದು. ಅದೇ ಹೊತ್ತಿಗೇನೇ ಜಾತಿ ಧರ್ಮ ಪಂಗಡಗಳಿಗೆ ಎಂದು ಮೀಸಲಿರಿಸದೆ ಎಲ್ಲರನ್ನೂ ಅಪ್ಪಿ, ಒಪ್ಪಿಕೊಂಡ ದೇಶ” ಎಂದು ಹೇಳಿಕೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ಮತ್ತೆ ಗೋಧ್ರಾದಂತಹ ಘಟನೆ ನಡೆಯಬಹುದು ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಅಂತಹ ಘಟನೆ ನಡೆಯುವ ಬಗ್ಗೆ ಸುಳಿವು ಇದ್ದರೆ ಪೊಲೀಸ್ ಇಲಾಖೆಗೆ ಹೋಗಿ ಯಾಕೆ ಹೇಳುತ್ತಿಲ್ಲ? ಇವರು ಯಾರನ್ನು ರಕ್ಷಣೆ ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದರು.

ರಾಮಮಂದಿರ ಉದ್ಘಾಟನೆಗೆ ನಮಗೆ ಆಹ್ವಾನ ಬಂದಿಲ್ಲ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಪೇಜಾವರ ಸ್ವಾಮೀಜಿ, “ಇಂಥ ನಡವಳಿಕೆ ಸರಿಯಲ್ಲ. ರಾಮ ರಾಜಕೀಯ ವಸ್ತುವಾಗಿಲ್ಲ. ಶ್ರೀರಾಮ ಮಂದಿರ ವ್ಯಾಜ್ಯ ಹುಟ್ಟಿಕೊಂಡಿದ್ದು 500 ವರ್ಷಗಳ ಹಿಂದೆ. ಸ್ವಾತಂತ್ರ್ಯ ಬಂದು 75 ವರ್ಷಗಳಾಯಿತು. ದೇಶದಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಸರ್ಕಾರ ಮಾಡಿದ್ದು ಯಾರು” ಎಂದು ಇದೇ ವೇಳೆ ಪರೋಕ್ಷವಾಗಿ ಕಾಂಗ್ರೆಸ್ ಅನ್ನು ಪ್ರಶ್ನಿಸಿದರು.

ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

ದಾವಣಗೆರೆಯ ರುದ್ರನಕಟ್ಟೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, “ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನ ಥರನೇ ಆಗುತ್ತದೆ. ಅಲ್ಲಿ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ. ದೇಶ ಜಾತ್ಯತೀತ ತತ್ವ ಬಿಟ್ಟು ಧರ್ಮದ ಹಿಂದೆ ಹೋದರೆ ಅಭಿವೃದ್ಧಿ ಕಾಣಲ್ಲ. ನಮ್ಮ ದೇಶ ಹಿಂದೂ ರಾಷ್ಟ್ರ ಆಗಬಾರದು. ಹಿಂದೂ ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ಇದನ್ನು ಅಂಬೇಡ್ಕರ್ ಅವರೇ ಹೇಳಿದ್ದಾರೆ” ಎಂದಿದ್ದರು.

“ಇವತ್ತು ಜಾತ್ಯತೀತ ತತ್ವಕ್ಕೆ ಅಪಾಯ ಬಂದಿದೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನಿಂದ ಅಪಾಯ ಶುರುವಾಗಿದೆ. ಬಿಜೆಪಿಯ ಅಂಗ ಸಂಘಟನೆಗಳು ಹಿಂದೂ ದೇಶ ಮಾಡೋಕೆ ಹೊರಟಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಟ್ಟರೆ ನಮ್ಮ ದೇಶ ಕೂಡ ಪಾಕಿಸ್ತಾನ ಅಪ್ಘಾನಿಸ್ತಾನ ಆಗುತ್ತದೆ. ಧರ್ಮದ ಮೇಲೆ ರಾಜಕೀಯ ಮಾಡುವ ಪಕ್ಷಗಳ ಬಗ್ಗೆ ನಾವು ಹುಷಾರಾಗಿರಬೇಕು. ಧರ್ಮದಿಂದ ಹಿಂದುಳಿದವರು ಮೇಲೇಳೋಕೆ ಸಾಧ್ಯವಾಗುತ್ತಿಲ್ಲ. ಇತಿಹಾಸವನ್ನು ನೋಡಿ ನಾವು ಪಾಠ ಕಲಿಯಬೇಕು. ಇತಿಹಾಸ ನೋಡಿ ನಾವು ದೇಶವನ್ನು ಕಟ್ಟಬೇಕು. ದೇಶಕ್ಕೆ ಉಜ್ವಲ ಭವಿಷ್ಯವಿದೆ” ಎಂದು ಸಿಎಂ ಪುತ್ರ ಯತೀಂದ್ರ ಹೇಳಿಕೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...