ರಾಜ್ಯದ ಖ್ಯಾತಿಯನ್ನು ಪೊಲೀಸರು ಹೆಚ್ಚಿಸಬೇಕು: ಸಿಎಂ ಸಿದ್ದರಾಮಯ್ಯ

Date:

Advertisements

ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೊಲೀಸರ ಬಗ್ಗೆ ದೇಶದಲ್ಲಿ ಒಳ್ಳೆ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸ ಯಾರೂ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮೇಳನ ಹಾಗೂ ಇಲಾಖೆ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ. ಬಂಡವಾಳ ಹೂಡಿಕೆಯಾದರೆ ಉದ್ಯೋಗ ಸೃಜನೆಯಾಗಿ ತಲಾ ಆದಾಯ ಹೆಚ್ಚಾಗುತ್ತದೆ” ಎಂದರು.

Advertisements

ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ

“ಸಾರ್ವಜನಿಕರ ಅಭಿಪ್ರಾಯ ರೂಪಿತವಾಗುವ ಬಗ್ಗೆ ಪೊಲೀಸರು ಗಮನ ಹರಿಸಬೇಕು.ಪೊಲೀಸ್ ವ್ಯವಸ್ಥೆಯಲ್ಲಿ ಜನರ ಆಸ್ತಿಪಾಸ್ತಿ ಪ್ರಾಣ, ಮಾನ ರಕ್ಷಣೆ, ಸುರಕ್ಷಿತ ವ್ಯವಸ್ಥೆ, ನಿರ್ಭಯವಾಗಿ ಬದುಕುವ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಒಳ್ಳೆ ಕೆಲಸ ಮಾಡಿದರೆ ಸರ್ಕಾರ ಶ್ಲಾಘನೆ, ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ” ಎಂದು ಹೇಳಿದರು.

ಹೊಸರೂಪ ಅಪರಾಧ ತಡೆಗೆ ಹೆಚ್ಚಿನ ತರಬೇತಿ

“ಸಮಾಜದಲ್ಲಿ ಬೆಳವಣಿಗೆಯಾದಂತೆ ಹೊಸ ರೂಪದ ಅಪರಾಧಗಳು ಸೃಷ್ಟಿಯಾಗುತ್ತವೆ. ಅವುಗಳನ್ನು ತಡೆಯಲು ತಂತ್ರಜ್ಞಾನ ಸೇರಿದಂತೆ ಹೆಚ್ಚಿನ ತರಬೇತಿ ನೀಡಲು ಸೂಚಿಸಲಾಗಿದೆ” ಎಂದರು.

ಮಾದಕವಸ್ತುಗಳ ದಂಧೆ ನಿಯಂತ್ರಣಕ್ಕೆ ಕ್ರಮ

“ಮಾದಕವಸ್ತುಗಳ ದಂಧೆ ಮೈಸೂರು, ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಬೆಳಗಾವಿ ಮುಂತಾದೆಡೆ ಹೆಚ್ಚಾ ಗುತ್ತಿದೆ. ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಈ ವ್ಯವಹಾರದಲ್ಲಿ ಭಾಗಿಯಾಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ” ಎಂದು ಹೇಳಿದರು.

ಜನಸಂದಣಿ / ನಿರ್ಜನ ಪ್ರದೇಶದಲ್ಲಿ ಪೊಲೀಸರು ಸಮವಸ್ತ್ರದಲ್ಲಿರಬೇಕು

“ಇ – ಬೀಟ್ ಎಂದರೇನು ಎಂದು ಬಹಳ ಪೊಲೀಸರಿಗೆ ತಿಳಿದಿಲ್ಲ. ಜನಸಂದಣಿ ಇರುವಲ್ಲಿ ಹಾಗೂ ನಿರ್ಜನ ಪ್ರದೇಶದಲ್ಲಿ ಇ – ಬೀಟ್ ಹೆಚ್ಚು ಮಾಡಲಾಗುವುದು. ಪೊಲೀಸರ ಹಾಜರಿ ಸಮವಸ್ತ್ರದಲ್ಲಿರಬೇಕು. ಆಗ ಜನರಲ್ಲಿ ಭಯ ಮೂಡುತ್ತದೆ. ಇದರಿಂದ ಅಪರಾಧಗಳನ್ನು ನಿಲ್ಲಿಸಲು ಸಾಧ್ಯವಾಗುತ್ತದೆ” ಎಂದರು.

“ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಜೀರೋ ಟ್ರಾಫಿಲ್ ವ್ಯವಸ್ಥೆ ಮಾಡಬಾರದು ಎಂದು ಸೂಚಿಸಲಾಗಿದೆ. ಕಾನ್ಸ್ ಟೇಬಲ್ ಗಳ ಜೊತೆಗೆ ಉನ್ನತ ಅಧಿಕಾರಿಗಳು ಕೂಡ ಸಂಚಾರ ನಿಯಂತ್ರಣ ಮಾಡಲು ಸೂಚಿಸಲಾಗಿದೆ. ಪೊಲೀಸರು ಕಾನೂನು ವ್ಯವಸ್ಥೆಯನ್ನು ಸುಧಾರಿಸಬೇಕು ಎಂಬುದು ನಮ್ಮ ಉದ್ದೇಶ , ಇದಕ್ಕೆ ಪೊಲೀಸರು ಸಹಕರಿಸುತ್ತಾರೆ ಎಂಬ ನಂಬಿಕೆ, ವಿಶ್ವಾಸ ಇದೆ” ಎಂದು ಹೇಳಿದರು.

ಬಿ.ಎನ್.ಎಸ್ : ತರಬೇತಿ ನೀಡಲಾಗಿದೆ

“ಹೊಸ ಕಾನೂನಿಗೆ ಸಂಬಂಧಿಸಿದಂತೆ 23 ಅಂಶಗಳಿಗೆ ತಿದ್ದುಪಡಿ ತಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ತರಬೇತಿ ನೀಡಲಾಗಿದೆ ಹಾಗೂ ಕೈಪಿಡಿಯನ್ನು ಪ್ರಕಟಿಸಲಾಗಿದೆ. ಹೊಸ ಕಾಯ್ದೆಯಲ್ಲಿ ಸಿ.ಆರ್.ಪಿ.ಸಿಯಲ್ಲಿ ಬದಲಾವಣೆಯಾಗಿದೆ ಎಂದರು. ಎವಿಡಿಯನ್ಸ್, ಸಿ.ಆರ್.ಪಿ.ಸಿ ಕೇಂದ್ರ ಸರ್ಕಾರದ ಕಾಯ್ದೆಯಾಗಿದ್ದು 1860 ನಲ್ಲಿ ರೂಪಿಸಲಾಗಿದೆ” ಎಂದರು.

“ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಗೂ 144 ಸೆಕ್ಷನ್ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಗಲಾಟೆ ಹಾಕಬುಹುದೆಂಬ ಉದ್ದೇಶದಿಂದ ಹಾಕಲಾಗಿದೆ” ಎಂದರು.

ಸಿಬಿಐ, ಸಿಐಡಿ ಕೂಡ ತನಿಖಾ ಸಂಸ್ಥೆಗಳೇ

“ವಿರೋಧಪಕ್ಷದವರು ಪ್ರಕರಣಗಳನ್ನು ಸಿಬಿಐ ಗೆ ವಹಿಸಲು ಒತ್ತಾಯಿಸುತ್ತಾರೆ. ಆದರೆ ಅಲ್ಲಿರುವವರೂ ನಮ್ಮ ಪೊಲೀಸರೇ. ಸಿಬಿಐ, ಸಿಐಡಿ ಕೂಡ ತನಿಖಾ ಸಂಸ್ಥೆಗಳೇ ಎಂದರು. ಅವರು ಅಧಿಕಾರದಲ್ಲಿದ್ದಾಗ ಚೋರ್ ಬಚಾವೋ ಸಂಸ್ಥೆ ಎನ್ನುತ್ತಿದ್ದರು. ಕೇಂದ್ರ ಸರ್ಕಾರ ಬೇರೆ ಬೇರೆ ರಾಜ್ಯಗಳಲ್ಲಿನ ಅಪರಾಧಗಳನ್ನು ತನಿಖೆ ಮಾಡಲು ಸ್ಥಾಪಿಸಿರುವ ಸಂಸ್ಥೆ ಸಿಬಿಐ. ರಾಜ್ಯ ಪೊಲೀಸರು ಕೂಡ ತನಿಖೆ ಮಾಡಲು ಸಮರ್ಥರಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X