ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Date:

“ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 3 ರೂ., ಡೀಸೆಲ್ ದರವನ್ನು 3.50 ರೂ. ಏರಿಸಿದೆ. ಈ ಮೂಲಕ ರಾಜ್ಯದ ಜನರ ಮೇಲೆ ಬರೆ ಹಾಕಲು ಹೊರಟಿದ್ದಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಬರಗಾಲದಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಜನರ ಮೇಲೆ ಹೊರೆ ಹಾಕಿರುವುದು ಅಕ್ಷಮ್ಯ ಅಪರಾಧ. ಮುಖ್ಯಮಂತ್ರಿಗಳು ತಮ್ಮ ಭಂಡತನವನ್ನು ಬಿಟ್ಟು ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ಸೋಮವಾರ(ಜೂನ್ 17) ಬಿಜೆಪಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, ಹೋರಾಟ ನಡೆಸಲಿದೆ” ಎಂದು ಎಚ್ಚರಿಸಿದರು.

“ಒಂದೆಡೆ ಸೋಲಿನ ಹತಾಶೆ ಇದ್ದರೆ, ಇನ್ನೊಂದೆಡೆ ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಭಂಡ ಸರಕಾರ ಮತ್ತು ಮುಖ್ಯಮಂತ್ರಿಗಳು ಇದನ್ನು ಒಪ್ಪಿಕೊಳ್ಳುವುದಿಲ್ಲ. ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ಒಂದೆಡೆ ಹೇಳುತ್ತಾರೆ. ಇನ್ನೊಂದೆಡೆ ಪೆಟ್ರೋಲ್, ಡೀಸೆಲ್ ದರ ಏರಿಸಿದ್ದು, ಇದು ಹಣಕಾಸಿನ ಪರಿಸ್ಥಿತಿ ಹದಗೆಟ್ಟದ್ದನ್ನು ತಿಳಿಸುತ್ತದೆ” ಎಂದು ವಿಜಯೇಂದ್ರ ದೂರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಜ್ಯ ಸರಕಾರವು ಅಧಿಕಾರಿಗಳು, ಸಿಬ್ಬಂದಿಗೆ ಸಂಬಳ ಕೊಡಲಾಗದ ಕೆಟ್ಟ ಸ್ಥಿತಿಯಲ್ಲಿದ್ದು ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ದರ ಏರಿಸಿದ್ದಾರೆ. ಗ್ಯಾರಂಟಿಯಿಂದ 18-20 ಸಂಸದರ ಸ್ಥಾನಗಳನ್ನು ಗೆಲ್ಲುವುದಾಗಿ ಭ್ರಮೆಯಲ್ಲಿ ಕಾಂಗ್ರೆಸ್ ಪಕ್ಷ ಇತ್ತು. ಲೋಕಸಭಾ ಚುನಾವಣೆಯಲ್ಲಿ ದೇಶ, ರಾಜ್ಯದಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆ ಆಗಿದೆ. ಈ ಸಿಟ್ಟನ್ನು ರಾಜ್ಯದ ಜನರ ಮೇಲೆ ತೋರಿಸುತ್ತಿದ್ದಾರೆ. ಹಿಂದೆ ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸಿದ್ದರು. ಇದರ ಬಗ್ಗೆ ನಾವು ವಿಧಾನಸಭೆ ಒಳಗೆ ಮತ್ತು ಹೊರಗಡೆ ಚರ್ಚೆ ಮಾಡಿದ್ದೇವೆ. ವಿದ್ಯುತ್ ದರವನ್ನೂ ಏರಿಸಿದ್ದರು” ಎಂದು ವಿಜಯೇಂದ್ರ ತಿಳಿಸಿದರು.

ಇದನ್ನು ಓದಿದ್ದೀರಾ? ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

“ಕಾಂಗ್ರೆಸ್ ಪಕ್ಷ ಹತಾಶ ಸ್ಥಿತಿಯಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ರಾಜ್ಯದಲ್ಲಿ ಆಗಿರುವ ಹಿನ್ನಡೆಯ ಪರಿಣಾಮವಾಗಿ ಬೇರೆ ಬೇರೆ ಜಿಲ್ಲೆಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ, ದಬ್ಬಾಳಿಕೆ ನಡೆಯುತ್ತಿದೆ. ವಿನಾಕಾರಣ ಎಫ್‍ಐಆರ್, ಪೊಲೀಸರಿಂದ ಕಿರುಕುಳ ದಿನೇದಿನೇ ಜಾಸ್ತಿ ಆಗುತ್ತಿದೆ. ಕಾರ್ಯಕರ್ತರಿಗೆ ಧೈರ್ಯ ತುಂಬುವುದು, ಕಾನೂನು ಪ್ರಕೋಷ್ಠವನ್ನು ಸದೃಢಗೊಳಿಸಲು ವಕೀಲ ಮಿತ್ರರ ಸಭೆ ನಡೆಸಲಾಗಿದೆ. ಯಾರೂ ಧೈರ್ಯಗೆಡುವ ಪ್ರಶ್ನೆ ಇಲ್ಲ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಬಿಜೆಪಿಯಲ್ಲಿ ಯೋಗಿ-ಮೌರ್ಯ ನಡುವೆ ಗುದ್ದಾಟ; ಮೋದಿ-ಶಾ ಚರ್ಚೆ

ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ತೀರಾ ಕಳಪೆ ಪ್ರದರ್ಶನ ನೀಡಿದೆ....

ಕನ್ನಡಿಗರಿಗೆ ಉದ್ಯೋಗ | ‘ಅಸ್ತು’ ಎಂದು ಹೆಜ್ಜೆ ಇಟ್ಟ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’: ವಿಜಯೇಂದ್ರ ವ್ಯಂಗ್ಯ

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ?...

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ; ಯೂ-ಟರ್ನ್‌ ಸರ್ಕಾರ ಎಂದ ಬಿಜೆಪಿ

ಖಾಸಗಿ ವಲಯದ ಕಂಪನಿಗಳು, ಸಂಸ್ಥೆಗಳಲ್ಲಿ ಕನ್ನಡಿಗರಿಗೆ 75% ಮೀಸಲಾತಿ ಒದಗಿಸುವ ಮಸೂದೆಯನ್ನು...

‘ಬಡವರ ವಿರುದ್ಧ ಬುಲ್ಡೋಜರ್ ಹರಿಸಿದ್ದೇ ಬಿಜೆಪಿಗೆ ಮುಳುವಾಯಿತು’; ಬಿಜೆಪಿ ಮಿತ್ರ ಪಕ್ಷದ ಟೀಕೆ

ಬಡವರ ವಿರುದ್ಧ ಬುಲ್ಡೋಜರ್ ಹರಿಸಿದ್ದೇ ಬಿಜೆಪಿಗೆ ಮುಳುವಾಯಿತು ಎಂದು ಉತ್ತರಪ್ರದೇಶದ ಯೋಗಿ...