ಸಂದೇಶ್‌ಖಾಲಿಯಲ್ಲಿ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದ ಬಿಜೆಪಿ ನಾಯಕ; ವಿಡಿಯೋ ಹಂಚಿಕೊಂಡ ಟಿಎಂಸಿ

Date:

ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮೇಲೆ ಬಿಜೆಪಿಯು ಸಂದೇಶಖಾಲಿ ಅತ್ಯಾಚಾರ ಪ್ರಕರಣದ ವಿಚಾರದಲ್ಲಿ ನಿರಂತರ ದಾಳಿಯನ್ನು ನಡೆದುತ್ತಿದ್ದು, ಲೋಕಸಭೆ ಚುನಾವಣೆಯ ಪ್ರಮುಖ ವಿಚಾರವೇ ಇದಾಗಿತ್ತು. ಆದರೆ ಶನಿವಾರ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ.

- Advertisement -

ಶನಿವಾರ ಈ ಪ್ರಕರಣಕ್ಕೆ ಸಂಬಂಧಿಸಿದ ಸ್ಟಿಂಗ್ ಆಪರೇಷನ್ ಒಂದರಲ್ಲಿ “ಸಂದೇಶ್‌ಖಾಲಿಯಲ್ಲಿ ಯಾವುದೇ ಅತ್ಯಾಚಾರ ನಡೆದಿಲ್ಲ” ಎಂದು ಬಿಜೆಪಿ ನಾಯಕರೊಬ್ಬರು ಒಪ್ಪಿಕೊಂಡಿರುವುದು ಕಂಡು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“ಇಲ್ಲಿ ಯಾವುದೇ ಅತ್ಯಾಚಾರ ಅಥವಾ ಲೈಂಗಿಕ ಕಿರುಕುಳಗಳು ನಡೆದಿಲ್ಲ. ಪಕ್ಷದ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ನಿರ್ದೇಶನದ ಮೇರೆಗೆ ಮಹಿಳೆಯರು ಅಂತಹ ದೂರುಗಳನ್ನು ನೀಡುವಂತೆ ಮನವೊಲಿಸಲಾಗಿದೆ” ಎಂದು ಬಿಜೆಪಿ ನಾಯಕ ಗಂಗಾಧರ್ ಕೋಯಲ್ ಹೇಳಿರುವ ವಿಡಿಯೋ ವೈರಲ್ ಆಗಿದೆ. ಆದರೆ ಬಿಜೆಪಿ ಮತ್ತು ಗಂಗಾಧರ್ ಕೋಯಲ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಈ ವಿಡಿಯೋ ವೈರಲ್ ಆದ ನಂತರ ಬಿಜೆಪಿ ವಿರುದ್ಧ ತೃಣಮೂಲ ಕಾಂಗ್ರೆಸ್ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಾಗ್ದಾಳಿ ನಡೆಸಿದ್ದಾರೆ. “ಇಡೀ ಘಟನೆಯು ಪಶ್ಚಿಮ ಬಂಗಾಳವನ್ನು ದೂಷಿಸಲು ಬಿಜೆಪಿ ಮಾಡಿದ ಪಿತೂರಿ ಎಂದು ಸಾಬೀತುಪಡಿಸುತ್ತದೆ” ಎಂದು ಟಿಎಂಸಿ ಹೇಳಿದೆ.

ಇದನ್ನು ಓದಿದ್ದೀರಾ?  ಸಂದೇಶಖಾಲಿ ಪ್ರಕರಣದ ಹಿಂದೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ: ಟಿಎಂಸಿ ಆರೋಪ

ವೈರಲ್ ಆಗುತ್ತಿರುವ ವಿಡಿಯೋದ ಸತ್ಯಾಸತ್ಯತೆ ಇನ್ನೂ ತಿಳಿದುಬಂದಿಲ್ಲ. ಆದರೆ ಧ್ವನಿಯನ್ನು ಎಡಿಟ್ ಮಾಡಲಾಗಿದೆ ಎಂದು ಬಿಜೆಪಿ ಮತ್ತು ವಿಡಿಯೋದಲ್ಲಿರುವ ಬಿಜೆಪಿ ಮುಖಂಡರು ಹೇಳಿದ್ದಾರೆ.

ಈ ಹಿಂದೆ ಶಹಜಹಾನ್ ಮತ್ತು ಆತನ ಇಬ್ಬರು ಸಹಾಯಕರು ತಮ್ಮ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದರು. ಈ ಪ್ರಕರಣವನ್ನು ಮುಂದಿಟ್ಟುಕೊಂಡೇ ಸದ್ಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಾರಕ್ಕೆ ಇಳಿದಿದೆ. ಸಂದೇಶಖಾಲಿ ಸಂತ್ರಸ್ತೆಗೆ ಬಿಜೆಪಿ ಟಿಕೆಟ್ ಕೂಡಾ ನೀಡಿದೆ.

ಇನ್ನು ಈ ಸ್ಟಿಂಗ್ ಆಪರೇಷನ್ ವಿಡಿಯೋ ಬಿಡುಗಡೆಯಾದ ನಂತರ ಗಂಗಾಧರ್ ಕೋಯಲ್ “ಇದು ಪಿತೂರಿ, ನನ್ನ ಧ್ವನಿಯನ್ನು ತಂತ್ರಜ್ಞಾನ ಬಳಸಿ ವಿಡಿಯೋದಲ್ಲಿ ಬಳಸಲಾಗಿದೆ” ಎಂದು ಹೇಳಿದ್ದಾರೆ. ಜೊತೆಗೆ ಸಂದೇಶಖಾಲಿ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳಕ್ಕೆ ದೂರನ್ನೂ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

ಜನಗಣತಿಯಲ್ಲೂ ಆರೆಸ್ಸೆಸ್‌ ಹಸ್ತಕ್ಷೇಪದ ಆತಂಕ: ಕೇಂದ್ರದ ಹೊಸ ನಿಯಮಕ್ಕೆ ಕಾಂಗ್ರೆಸ್ ಆಕ್ಷೇಪ!

2027ರ ಜನಗಣತಿಗೆ ಗಣತಿದಾರರಾಗಿ ಕಾರ್ಯನಿರ್ವಹಿಸುವವರ ಅರ್ಹತಾ ವ್ಯಾಪ್ತಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿರುವುದು...

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...