ಮಧ್ಯಪ್ರದೇಶದಲ್ಲಿ ಕಲ್ಲು ತೂರಾಟ | ಪೊಲೀಸರು ಸೇರಿ ಐವರಿಗೆ ಗಂಭೀರ ಗಾಯ, ಬಿಜೆಪಿ ಶಾಸಕ ವಶಕ್ಕೆ

Date:

ದೇವಸ್ಥಾನದ ಜಾಗವನ್ನು ಅತಿಕ್ರಮಿಸಿ ನಿರ್ಮಿಸಿದ ಗೋಡೆಯನ್ನು ತೆರವುಗೊಳಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಕಲ್ಲು ತೂರಾಟ ನಡೆದಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ದೇವ್ರಾ ಗ್ರಾಮದಲ್ಲಿ ನಡೆದಿದೆ.

- Advertisement -

ಪರಿಸ್ಥಿತಿ ತಿಳಿಗೊಳಿಸಲು ಬಂದಿದ್ದ ಪೊಲೀಸರಿಗೂ ಕಿಡಿಗೇಡಿಗಳು ಕಲ್ಲು ಹೊಡೆದಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
ಬಿಜೆಪಿ ಶಾಸಕ ಪ್ರದೀಪ್ ಪಟೇಲ್ ಪೊಲೀಸ್‌ ವಶಕ್ಕೆ
ದೇವಸ್ಥಾನದ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಹಾಗಾಗಿ ಕ್ರಮ ಕೈಗೊಳ್ಳುವಂತೆ ಆ ಕ್ಷೇತ್ರದ ಶಾಸಕರು ಸ್ಥಳೀಯ ಆಡಳಿತಕ್ಕೆ ಸೂಚಿಸಿದ್ದರು. ಆದರೆ, ಸ್ಥಳೀಯ ಅಧಿಕಾರಿಗಳು ಕ್ರಮಕೈಗೊಳ್ಳದಿದ್ದಾಗ ಖುದ್ದು ಬಿಜೆಪಿ ಶಾಸಕ ಪ್ರದೀಪ್ ಪಟೇಲ್ ಅವರು ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನದ ಬಳಿ ಬಂದಿದ್ದರು. ಇದೇ ಸಂದರ್ಭದಲ್ಲಿ ಶಾಸಕರು ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ಕೆಲವು ಕಿಡಿಗೇಡಿಗಳು ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ.

ಮೌಗಂಜ್‌ ಎಸ್‌ಪಿ ರಸ್ನಾ ಠಾಕೂರ್ ಈ ಬಗ್ಗೆ ಮಾತನಾಡಿದ್ದು, “ದೇವ್ರಾ ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಹಾಗೂ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...