ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ | ಕೈ ನಾಯಕರ ಬಂಧನ: ಸಿಎಂ ಬೊಮ್ಮಾಯಿ

Date:

ಬಿ ಎಸ್‌ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯಾದ್ಯಂತ ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟ ಘಟನೆ ಭಾರೀ ಸದ್ದು ಮಾಡುತ್ತಿದೆ. ಪರಿಶಿಷ್ಟ ಜಾತಿಯ ಒಳಮೀಸಲಾತಿ ಹಂಚಿಕೆ ವಿರೋಧಿಸಿ ಬಂಜಾರ ಸಮುದಾಯ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದು, ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ನಡೆಸಿತ್ತು.

ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಬಿ ಎಸ್‌ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯಲ್ಲಿ ಕಾಂಗ್ರೆಸ್ ನಾಯಕರು ಸೆರೆಯಾಗಿದ್ದಾರೆ. ಕಾಂಗ್ರೆಸ್ ನಾಯಕರನ್ನ ಬಂಧಿಸಲಾಗಿದೆ. ಬಂಧಿತರಲ್ಲಿ ಮೂವರು ಕಾಂಗ್ರೆಸ್ ಮುಖಂಡರಿದ್ದಾರೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಕಾ ‘ಪ್ಲಾನ್’ ಮಾಡಿ ಕೃತ್ಯವೆಸಗಿದ್ದಾರೆ. ಇದು ವ್ಯವಸ್ಥಿತ ಷಡ್ಯಂತ್ರ. ಕಾಂಗ್ರೆಸ್ ನಾಯಕರು ಮೀಟಿಂಗ್ ಮಾಡಿ ಕೃತ್ಯವೆಸಗಿದ್ದಾರೆ. ಬಂಜಾರ ಜನಾಂಗದ ದಾರಿ ತಪ್ಪಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನಿವೃತ್ತ ಐಎಎಸ್‌ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎಂದು 28...

ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಅವರಿಂದ ದೂರು ಚುನಾವಣಾ...

ಬೆಂಗಳೂರು | ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಟ್ಟು ಕರಕಲು

ಯಶವಂತಪುರ-ನಾಯಂಡಹಳ್ಳಿಗೆ ತೆರಳುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಕಾರ್‌ವೊಂದು...