ತುಮಕೂರು | ಮಾಜಿ ಡಿಸಿಎಂ ಜಿ ಪರಮೇಶ್ವರ್‌ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ

Date:

  • ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ನಡೆದ ಘಟನೆ
  • ನಾಮಪತ್ರ ಸಲ್ಲಿಕೆ ವೇಳೆಯೂ ಕಲ್ಲು ತೂರಾಟ ನಡೆದಿತ್ತು

ಚುನಾವಣೆ ಪ್ರಚಾರದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌ ಅವರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಅವರ ತಲೆಗೆ ಪೆಟ್ಟಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಜಿ ಪರಮೇಶ್ವರ್‌ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಬೈರೇನಹಳ್ಳಿಯಲ್ಲಿ ಪ್ರಚಾರ ನಡೆಸುವಾಗ ಘಟನೆ ನಡೆದಿದೆ. ಡಾ. ಜಿ ಪರಮೇಶ್ವರ್ ಅವರು ತೆರೆದ ವಾಹನದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ, ಹೂವು ಎರಚುವ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ಪರಮೇಶ್ವರ್ ಅವರತ್ತ ಕಲ್ಲು ಎಸೆದಿದ್ದಾನೆ.

ಘಟನೆಯಲ್ಲಿ ಪರಮೇಶ್ವರ್ ಅವರ ತಲೆಗೆ ಪೆಟ್ಟಾಗಿದ್ದು, ತಕ್ಷಣ ಅವರಿಗೆ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ, ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ಶಿಫ್ಟ್ ಮಾಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? 56 ಇಂಚಿನ ಎದೆಯ ಪ್ರಧಾನಿಗೆ ದಮ್ಮಿದ್ರೆ ಭರವಸೆಗಳ ಕುರಿತು ಚರ್ಚೆಗೆ ಬರಲಿ: ಸಿದ್ದರಾಮಯ್ಯ ಸವಾಲು

ನಾಮಪತ್ರ ಸಲ್ಲಿಕೆ ವೇಳೆಯೂ ಕಲ್ಲು ತೂರಾಟವಾಗಿತ್ತು

ಡಾ. ಜಿ ಪರಮೇಶ್ವರ್ ಅವರು ಏ. 19 ರಂದು ನಾಮಪತ್ರ ಸಲ್ಲಿಕೆ ವೇಳೆಯೂ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಮಹಿಳಾ ಕಾನ್‌ಸ್ಟೆಬಲ್‌ ತಲೆಗೆ ಪೆಟ್ಟು ಬಿದ್ದಿತ್ತು. ಈ ಸಂಬಂಧ ಕೊರಟಗೆರೆ ತಾಲೂಕಿನ ರೆಡ್ಡಿಹಳ್ಳಿ ವೆಂಕಟಾಪುರ ಗ್ರಾಮದ ರಂಗಧಾಮಯ್ಯ ಎಂಬಾತನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲ್ಯವಿವಾಹ | ಕರ್ನಾಟಕಕ್ಕೆ 2ನೇ ಸ್ಥಾನ: ನಾಚಿಕೆಗೇಡಿನ ಸಂಗತಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ಅತಿ ಹೆಚ್ಚು...

ಕೊಡಗು | ಜನರ ಸಮಸ್ಯೆಗಳನ್ನು ಕಾರ್ಯಾಂಗದ ಮೂಲಕ‌ ಪರಿಹರಿಸುವುದು ಶಾಸಕಾಂಗದ ಕರ್ತವ್ಯ: ಶಾಸಕ ಡಾ ಮಂತರ್ ಗೌಡ

"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ" ...

ಮಂಡ್ಯ | ಕೆರಗೋಡು ಬೆನ್ನಲ್ಲೇ ಕೆ.ಆರ್​ ಪೇಟೆಯಲ್ಲಿ ಭಗವಾಧ್ವಜ ವಿವಾದ

ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಹಾರಿಸಲಾಗಿದ್ದ...

ಗದಗ | ಡೆಂಘೀ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

ಡೆಂಘೀ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವ...