ರೇಷನ್ ಕಾರ್ಡ್ ರದ್ದು ಪ್ರಕ್ರಿಯೆ ಸ್ಥಗಿತಗೊಳಿಸಿ: ಆರ್ ಅಶೋಕ್ ಆಗ್ರಹ

Date:

ರೇಷನ್ ಕಾರ್ಡ್ ರದ್ದು ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಿ, ಕಾರ್ಡ್‌ ಕೊಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅವರನ್ನು ಜೈಲಿಗಟ್ಟಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.

- Advertisement -

ಚಿಕ್ಕಮಗಳೂರಿನಲ್ಲಿ ಸಂಸದ ಡಾ.ಕೆ.ಸುಧಾಕರ್‌ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆರ್‌. ಅಶೋಕ್ ಅವರು, “ಎಲ್ಲರಿಗೂ ಉಚಿತ ಉಚಿತ ಎಂದು ಹೇಳಿ ಈಗ ರೇಷನ್‌ ಕಾರ್ಡ್‌ ಅನ್ನು ರದ್ದುಪಡಿಸಲಾಗುತ್ತಿದೆ. ಈವರೆಗೆ 11-12 ಲಕ್ಷ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಗುಡಿಸಲಲ್ಲಿ ವಾಸಿಸುವ ಜನರ ಪಡಿತರ ಚೀಟಿ ಕೂಡ ರದ್ದಾಗಿದೆ. ಗ್ಯಾರಂಟಿಯಿಂದಾಗಿ ಖಜಾನೆ ಖಾಲಿಯಾಗಿ ಶಾಸಕರು ದಂಗೆ ಏಳುತ್ತಿದ್ದಾರೆ. ಅದಕ್ಕಾಗಿ ಹಣ ಉಳಿಸಲು ಸರ್ಕಾರ ರೇಷನ್‌ ಕಾರ್ಡ್‌ ರದ್ದು ಮಾಡುತ್ತಿದೆ” ಎಂದು ದೂರಿದರು.

“ರೇಷನ್ ಕಾರ್ಡ್ ರದ್ದು ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಅವರು ಹೇಳುವುದೆಲ್ಲ ಸುಳ್ಳಾಗುತ್ತಿದೆ. ಜನರು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ” ಎಂದರು.

ಇದನ್ನು ಓದಿದ್ದೀರಾ? ಬಳ್ಳಾರಿ | ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ವರ್ ಡೌನ್‌; ಇನ್ನಷ್ಟು ಕಾಲಾವಕಾಶಕ್ಕೆ ಬೇಡಿಕೆ

ಇನ್ನು “ವಕ್ಫ್‌ ಮಂಡಳಿ ಮಾಡುತ್ತಿರುವ ಲ್ಯಾಂಡ್‌ ಜಿಹಾದ್‌ ವಿರುದ್ಧ ಬಿಜೆಪಿ ಇನ್ನಷ್ಟು ಹೋರಾಟ ಮಾಡಲಿದೆ. ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

“ಕರ್ನಾಟಕದ ವಕ್ಫ್‌ ಬೋರ್ಡ್‌ ತಿಮಿಂಗಿಲದಂತಿದೆ. ಇದು ದೇವಸ್ಥಾನ, ಶಾಲೆ, ಕೃಷಿ ಜಮೀನುಗಳನ್ನು ನುಂಗಿ ಹಾಕುತ್ತಿದೆ. ಸಂವಿಧಾನದಲ್ಲಿ ಎಲ್ಲರೂ ಒಂದೇ ಎಂದು ಹೇಳಿದ್ದರೂ, ವಕ್ಫ್‌ ಮಂಡಳಿಗೆ ಮಾತ್ರ ಪ್ರತ್ಯೇಕ ಸಂವಿಧಾನವಿದೆ. ಬೌದ್ಧರು, ಕ್ರೈಸ್ತರಿಗೆ ಇಲ್ಲದ ನ್ಯಾಯಾಂಗದ ಅಧಿಕಾರ ವಕ್ಫ್‌ ಮಂಡಳಿಗಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕಾಂಗ್ರೆಸ್‌ ವರ್ತಿಸುತ್ತಿದೆ” ಎಂದು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...