ಕಾವೇರಿ ನೀರು ನಿಲ್ಲಿಸಿ – ಕಾನೂನು ಹೋರಾಟ ಮಾಡಿ: ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ

Date:

ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ, ಕಾನೂನು ಹೋರಾಟ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸುವುದರ ವಿರುದ್ಧ ಟ್ವೀಟ್‌ ಮಾಡಿರುವ ಅವರು, “ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ. ಆದರೂ, ಅದರ ವಿರುದ್ದ ಯಾವುದೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ” ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

“ಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯೂಸೆಕ್ ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಡಿಸಿಎಂ ಅವರು ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥ ಇದೆ ಎಂದು ಪ್ರಶ್ನಿಸಿದ್ದಾರೆ. ಹಿಂದಿನ ಆದೇಶದ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು. ಅದು ಕೂಡ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಶುಕ್ಲಾ ಜೊತೆ ಕರಣ್ ಥಾಪರ್ ಮಾತುಕತೆ: ಮಹಾನಾಯಕನ ಐಬು ಮತ್ತು ಅಂಧಭಕ್ತರ ಹೂಂಕಾರ

ಭಾರತ ದೇಶ ಕಳೆದ ಹತ್ತು ವರ್ಷಗಳಿಂದ ಅದೆಂಥ ಕರಾಳಕೂಪಕ್ಕೆ ಜಾರುತ್ತಿದೆ ಎಂಬುದರ...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ದಾವಣಗೆರೆ | ಕಾಂಗ್ರೆಸ್‌ಗೆ ಮಡಿವಾಳ ಸಮಾಜ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ಆಗ್ರಹ

ರಾಜ್ಯದಲ್ಲಿನ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದು, ರಾಜ್ಯದ ಎಲ್ಲ ತಾಲೂಕಿನಲ್ಲಿ...