ಮನವರಿಕೆಯಾದ ದಿನದಿಂದ ಸಿಗರೇಟ್ ಸೇದುವುದು ಬಿಟ್ಟಿರುವೆ: ಸಿಎಂ ಸಿದ್ದರಾಮಯ್ಯ

Date:

Advertisements

ಸಹವಾಸ ದೋಷದಿಂದಲೂ ಅನಾರೋಗ್ಯ ತರುವ ಚಟಗಳು ಅಂಟಿಕೊಳ್ಳುತ್ತವೆ. ಆದರೆ ಸದಾ ಎಚ್ಚರದಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು. ನಾನೂ ಮೊದಲು ಸಿಗರೇಟ್ ಸೇದುತ್ತಿದ್ದೆ. ಒಮ್ಮೆ ವಿದೇಶಕ್ಕೆ ಹೋದಾಗ ಸ್ನೇಹಿತರು ಸಿಗರೇಟ್ ಪ್ಯಾಕ್ ತಂದುಬಿಟ್ಟಿದ್ದರು. ನಾನು ಕಡಿಮೆ ಅವಧಿಯಲ್ಲಿ ಹೆಚ್ಚು ಸಿಗರೇಟ್ ಸೇದಿಬಿಟ್ಟೆ. ಅವತ್ತೇ ನನಗೆ ಮನವರಿಕೆ ಆಯ್ತು. ಆ ದಿನದಿಂದ ನಾನು ಸಿಗರೇಟ್ ಸೇದುವುದನ್ನು ಸಂಪೂರ್ಣ ನಿಲ್ಲಿಸಿದೆ ಎಂದು ಸಿಎಂ ಸಿದ್ದರಾಮಯ್ಯ ನೆನಪಿಸಿಕೊಂಡರು.

ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

“ದೈಹಿಕವಾಗಿ ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಆದ್ದರಿಂದ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ. ಜೀವನಶೈಲಿ ಮತ್ತು ಆಹಾರ ಪದ್ಧತಿ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜನ ವರ್ಗಕ್ಕೆ ಆರೋಗ್ಯ ಮತ್ತು ಅಗತ್ಯ ಚಿಕಿತ್ಸೆಗೆ ಒದಗಿಸಲು ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸಿ, ಜಾರಿ ಮಾಡುತ್ತಿದ್ದೇವೆ” ಎಂದರು.

Advertisements

“ಕ್ಯಾನ್ಸರ್ ನಂತಹ ಮಾರಕ ರೋಗವನ್ನೂ ಗುಣಪಡಿಸುವುದು ಸಾಧ್ಯವಿದೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದರೆ ದೀರ್ಘಕಾಲ ಆರೋಗ್ಯ ಕಾಪಾಡಿಕೊಳ್ಳುವುದು ಸಾಧ್ಯವಿದೆ. ಹಿಂದಿನವರ ಆರೋಗ್ಯ ಪದ್ಧತಿ ಮತ್ತು ಶ್ರಮಾಧಾರಿತ ಜೀವನ ಶೈಲಿ ಅವರನ್ನು ಗಟ್ಟಿಮುಟ್ಟಾಗಿ ಸದೃಢವಾಗಿ ಇಟ್ಟಿತ್ತು” ಎಂದು ಹೇಳಿದರು.

“ಇಂಥಾ ಆರೋಗ್ಯ ತಪಾಸಣಾ ಶಿಬಿರಗಳು ಮೇಲಿಂದ ಮೇಲೆ ಆಗಬೇಕು. ರಾಜ್ಯದ ಮೂಲೆ ಮೂಲೆಗಳಲ್ಲೂ ನಡೆಸಬೇಕು. ತುಂಬಾ ವಯಸ್ಸಾದ ಮೇಲೆ ಬರುವ ಆರೋಗ್ಯ ಸಮಸ್ಯೆಗಳು ಬರದಂತೆ ವಯಸ್ಸಿದ್ದಾಗಲೇ ಪ್ರಯತ್ನಿಸಿ” ಎಂದು ಕರೆ ನೀಡಿದರು.

ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ , ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X