ವಿಚಿತ್ರ ಸಂಗತಿ | 138 ಮತದಾರರಿಗೆ ಒಬ್ಬನೇ ತಂದೆ!

Date:

Advertisements

ಬಿಹಾರದ ತಿರ್ಹತ್ ಪದವೀಧರ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ವಿಚಿತ್ರ ಸಂಗತಿಯೊಂದು ಬೆಳಕಿಗೆ ಬಂದಿದೆ. ವಿವಿಧ ವಯೋಮಾನ 138 ಮಂದಿಗೆ ಮುನ್ನಾ ಕುಮಾರ್‌ ಎಂಬ ವ್ಯಕ್ತಿ ತಂದೆ ಎಂದು ಉಲ್ಲೇಖಿಸಲಾಗಿದೆ. ಚುನಾವಣಾ ಆಯೋಗದ ಯಡವಟ್ಟಿನಿಂದಾಗಿ ಈ ವಿದ್ಯಮಾನ ಸಂಭವಿಸಿದೆ ಎಂದು ವರದಿಯಾಗಿದೆ.

ಬಿಹಾರದ ಸೀತಾಮರ್ಹಿ, ಶಿಯೋಹರ್, ಮುಜಾಫರ್‌ಪುರ ಮತ್ತು ವೈಶಾಲಿ ಜಿಲ್ಲೆಗಳನ್ನೊಳಗೊಂಡ ತಿರ್ಹತ್ ಪದವೀಧರ ಕ್ಷೇತ್ರದಲ್ಲಿ ಗುರುವಾರ ವಿಧಾನ ಪರಿಷತ್ ಉಪಚುನಾವಣೆ ನಡೆದಿದೆ. ನಾಲ್ಕು ಜಿಲ್ಲೆಗಳಾದ್ಯಂತ 197 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ. ಈ ಪೈಕಿ, ಮುಜಾಫರ್‌ಪುರ ಜಿಲ್ಲೆಯ ಔರೈ ಮತಗಟ್ಟೆಯಲ್ಲಿ ವಿಚಿತ್ರ ಸಂಗತಿ ಬೆಳಕಿಗೆ ಬಂದಿದೆ.

ಔರೈ ಮತಗಟ್ಟೆ ವ್ಯಾಪ್ತಿಯ ಮತದಾರರ ಪೈಕಿ 138 ಮತದಾರ ಚೀಟಿಯಲ್ಲಿ ಮತದಾರರ ತಂದೆಯ ಹೆಸರಿನ ಜಾಗದಲ್ಲಿ ಮುನ್ನಾ ಕುಮಾರ್ ಎಂದು ನಮೂದಿಸಲಾಗಿದೆ. 138 ಮಂದಿಗೂ ಮುನ್ನಾ ಕುಮಾರ್ ತಂದೆ ಎಂದು ಉಲ್ಲೇಖಿಸಲಾಗಿದೆ. ಮತದಾರರು ತಮ್ಮ ತಂದೆಯ ಹೆಸರಿನ ಜಾಗದಲ್ಲಿ ಮುನ್ನಾ ಕುಮಾರ್ ಎಂಬ ಹೆಸರಿರುವುದನ್ನು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ.

Advertisements

ಮತದಾರರ ಪಟ್ಟಿ ಸಿದ್ದಪಡಿಸಿ, ಮುದ್ರಿಸುವಾಗ ಈ ಯಡವಟ್ಟು ನಡೆದಿದೆ ಎಂದು ಹೇಳಲಾಗಿದೆ. “ಇದು ಮೇಲ್ನೋಟಕ್ಕೆ ‘ಹ್ಯುಮನ್ ಎರರ್’ ಎಂದು ಕಂಡುಬಂದಿದೆ. ಆದರೆ, ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸುವ ಮೊದಲು ಪರಿಶೀಲನಾ ಪ್ರಕ್ರಿಯೆಯಲ್ಲಿ ಅದನ್ನು ಸರಿಪಡಿಸಬೇಕು. ಚುನಾವಣೆ ಮುಗಿದ ನಂತರ ಈ ಬಗ್ಗೆ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ತಿರ್ಹತ್ ವಿಭಾಗೀಯ ಆಯುಕ್ತ ಎಂ ಸರ್ವಣ ಹೇಳಿದ್ದಾರೆ.

ಈ ಯಡವಟ್ಟಿನಿಂದ ಮತದಾನ ಪ್ರಕ್ರಿಯೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಎಲ್ಲ ಮತದಾರರೂ ತಮ್ಮ ಗುರುತಿನ ಚೀಟಿ ತೋರಿಸಿ, ಮತದಾನ ಮಾಡಿದ್ದಾರೆ. ಕ್ಷೇತ್ರದಲ್ಲಿ 47.56% ಮತದಾನವಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸೀತಾಮರ್ಹಿ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾದ ದೇವೇಶ್ ಚಂದ್ರ ಠಾಕೂರ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಗುರುವಾರ ಉಪಚುನಾವಣೆ ನಡೆದಿದೆ. ಜೆಡಿಯುನಿಂದ ಅಭಿಷೇಕ್ ಝಾ, ಆರ್‌ಜೆಡಿಯಿಂದ ಗೋಪಿ ಕಿಶನ್ ಹಾಗೂ ಪ್ರಶಾಂತ್ ಕಿಶೋರ್ ಅವರ ಜನ್ ಸೂರಾಜ್ ಪಕ್ಷದ ಡಾ. ವಿನಾಯಕ್ ಗೌತಮ್ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಚುನಾವಣಾ ಫಲಿತಾಂಶ ಡಿಸೆಂಬರ್ 9ರಂದು ಪ್ರಕಟವಾಗಲಿದೆ.

ವಿಚಿತ್ರ ಸಂಗತಿಯ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಯು ಅಭ್ಯರ್ಥಿ ಅಭಿಷೇಕ್ ಝಾ, “ಇದು ನಂಬಲಸಾಧ್ಯ. ವಿವಿಧ ವಯಸ್ಸಿನ, ಲಿಂಗ ಮತ್ತು ಧಾರ್ಮಗಳ ಮತದಾರರಿಗೆ ಒಂದೇ ವ್ಯಕ್ತಿಯನ್ನು ಅವರ ತಂದೆ ಎಂದು ಹೇಗೆ ನಮೂದಿಸಲು ಸಾಧ್ಯ” ಎಂದು ಪ್ರಶ್ನಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X