ಕೋಮು ಗಲಭೆ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Date:

Advertisements
  • ಕಲ್ಲು ಹೊಡೆದ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ಆಗಲಿದೆ
  • ಪ್ರತಿಭಟನೆಗೆ ಸಕಾರಣವಿರಬೇಕು, ಶಾಂತಿಯುತವಾಗಿ ನಡೆಯಬೇಕು

ನಮ್ಮ ಸರ್ಕಾರ ಕೋಮು ಗಲಭೆ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾನಾಡಿದ ಅವರು, “ಬಿಜೆಪಿಯವರಿಗೆ ಆರೋಪ ಮಾಡುವುದೇ ಕೆಲಸವಾಗಿದೆ. ಆರೋಪ ಮಾಡುವುದೆಲ್ಲ ಸತ್ಯವಲ್ಲ. ಶಿವಮೊಗ್ಗದ ಪ್ರಕರಣದಲ್ಲಿ ಕಲ್ಲು ಹೊಡೆದ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದರು.

ಪ್ರತಿಭಟನೆಗೆ ಸಕಾರಣವಿರಬೇಕು

Advertisements

ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಉತ್ತರಿಸಿ, “ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು. ಆದರೆ, ಆ ಪ್ರತಿಭಟನೆಗೆ ಸಕಾರಣವಿರಬೇಕು ಮತ್ತು ಅದು ಶಾಂತಿಯುತವಾಗಿ ನಡೆಯಬೇಕು” ಎಂದರು.

ಸರ್ಕಾರದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ

ಬೆಳಗಾವಿಯ ಕುರುಬ ಸಮಾವೇಶದ ಸಂದರ್ಭದಲ್ಲಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂಬ ಕೂಗು ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ನಮ್ಮ ಸರ್ಕಾರದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ಎಲ್ಲರನ್ನೂ ಒಳಗೊಂಡಂತಹ ಆಡಳಿತದ ನೀತಿ ನಮ್ಮ ಸರ್ಕಾರ ಹೊಂದಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬುರ್ನಾಸು ಬಿಜೆಪಿ ಬಿಟ್ಟು ಒಂದಾಗುವರೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ? 

ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಉಪ ಮುಖ್ಯಮಂತ್ರಿಗಳು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ, “ಒಕ್ಕಲಿಗರ ಹೋರಾಟ ಸಮಿತಿ ನೀಡಿದ ಪತ್ರವನ್ನು ಆಧರಿಸಿ, ಉಪ ಮುಖ್ಯಮಂತ್ರಿಗಳು ನನಗೆ ಪತ್ರ ಬರೆದಿದ್ದಾರೆ. ಇಂದಷ್ಟೇ ಆ ಪತ್ರ ನೋಡಿದ್ದೇನೆ” ಎಂದು ತಿಳಿಸಿದರು.

ತಮ್ಮ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ವಿಭಜನೆ ಆಗಲಿದೆಯೇ ಎಂಬುದಕ್ಕೆ ಉತ್ತರಿಸಿ, “ಈ ಬಗ್ಗೆ ಶಾಸಕರ ಜೊತೆ ಚರ್ಚಿಸಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X