ಎಚ್ಎನ್-ಕೆಸಿ ವ್ಯಾಲಿ | ಸಂಸ್ಕರಿಸಿದ ನೀರು ನೇರ ಬಳಕೆ ವಿರುದ್ಧ ಕಠಿಣ ಕ್ರಮ: ಸಚಿವ ಎನ್ ಎಸ್ ಬೋಸರಾಜು

Date:

ಎಚ್ ಎನ್ ವ್ಯಾಲಿ ಹಾಗೂ ಕೆ ಸಿ ವ್ಯಾಲಿ ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ಹರಿಸಲಾಗುತ್ತಿರುವ ಎರಡನೇ ಹಂತದ ಸಂಸ್ಕರಿಸಿದ ನೀರನ್ನು ನೇರವಾಗಿ ಬಳಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ತಿಳಿಸಿದ್ದಾರೆ.

- Advertisement -

“ಈ ಎರಡೂ ವ್ಯಾಲಿಗಳ ಏತ ನೀರಾವರಿ ಯೋಜನೆಯ ಮೂಲಕ ಬಯಲು ಸೀಮೆಯ ಜಿಲ್ಲೆಗಳಾದ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರಕ್ಕೆ ಸಂಸ್ಕರಿಸಿದ ನೀರನ್ನ ಹರಿಸಲಾಗುತ್ತಿದೆ. ಸಂಸ್ಕರಿಸಿದ ನೀರಿನ ಮೂಲಕ ಕೆರೆಗಳನ್ನ ತುಂಬಿಸಲಾಗುತ್ತಿದ್ದು, ಅಂತರ್ಜಲ ಮಟ್ಟ ಹೆಚ್ಚಿಸುವುದು ಪ್ರಮುಖ ಉದ್ದೇಶವಾಗಿದೆ. ಅಂತರ್ಜಲ ಹೆಚ್ಚಳದ ಪ್ರಮುಖ ಗುರಿಯ ಯೋಜನೆಯ ಫಲ ಈಗಾಗಲೇ ಗೋಚರವಾಗುತ್ತಿದೆ. ಈ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗಿದ್ದು, ಜನರು ಕೊಳವೆ ಬಾವಿಗಳ ಮೂಲಕ ನೀರನ್ನ ತಮ್ಮ ಬೆಳೆಗಳಿಗೆ ಉಪಯೋಗಿಸಬಹುದಾಗಿದೆ. ಸಂಸ್ಕರಿಸಿದ ನೀರನ್ನ ನೇರವಾಗಿ ಕುಡಿಯಲು ಹಾಗೂ ಕೃಷಿಗೆ ಬಳಸುವುದನ್ನ ನಿಷೇಧಿಸಲಾಗಿದೆ” ಎಂದು ಸುದ್ದಿಗಾರರಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಕೆಲವರು ಈ ನೀರನ್ನ ನೇರವಾಗಿ ತಮ್ಮ ಬೆಳೆಗಳಿಗೆ ಬಳಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇಂತಹ ಚಟುವಟಿಕೆಗಳಿಂದ ಯೋಜನೆಯ ಮೂಲ ಉದ್ದೇಶಕ್ಕೆ ತೊಂದರೆಯಾಗುತ್ತಿದೆ. ಸಂಸ್ಕರಿಸಿದ ನೀರು ಉತ್ತಮ ಗುಣಮಟ್ಟದ್ದಾಗಿದೆ. ಆದರೆ, ಇದರ ನೇರ ಬಳಕೆಯಿಂದ ತೊಂದರೆ ಆಗಬಾರದು ಎನ್ನುವ ಮುನ್ನೆಚ್ಚರಿಕೆ ನಮ್ಮದಾಗಿತ್ತು. ಇದನ್ನ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಕ್ರಮ ಕೈಗೊಳ್ಳದ ಅಧಿಕಾರಿಗಳ ಮೇಲೂ ಕ್ರಮ

“ಸಂಸ್ಕರಿಸಿದ ನೀರನ್ನ ಜನರು ನೇರವಾಗಿ ತಮ್ಮ ಜಮೀನುಗಳಿಗೆ ಪಂಪ್ ಮಾಡುವುದು ಹಾಗೂ ಹರಿಸುವುದನ್ನ ತಪ್ಪಿಸುವ ನಿಟ್ಟಿನಲ್ಲಿ ಆಗಾಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ನೀರನ್ನ ಬಳಸಿಕೊಳ್ಳುತ್ತಿರುವ ಜನರ ಮೇಲೆ ಕ್ರಮ ಕೈಗೊಳ್ಳಬೇಕು, ಕ್ರಮ ಕೈಗೊಳ್ಳಲು ವಿಫಲರಾಗುವ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...