ಡ್ರಗ್ಸ್ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ; ಗೃಹ ಸಚಿವ ಡಾ. ಜಿ ಪರಮೇಶ್ವರ್

Date:

ಡ್ರಗ್ಸ್ ದಂಧೆ ಕೇವಲ ನಮ್ಮ ರಾಜ್ಯದಲ್ಲಷ್ಟೆ ಅಲ್ಲ, ಇಡೀ ದೇಶದಲ್ಲಿ ಆವರಿಸಿಕೊಂಡಿದೆ. ನಮ್ಮ ರಾಜ್ಯದಲ್ಲಿ ಡ್ರಗ್ಸ್ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

ಬುಧವಾರ ವಿಧಾನ ಸಭೆಯ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ಡ್ರಗ್ಸ್‌ ದಂಧೆ ಬಹಳ ಗಂಭೀರವಾದ ವಿಚಾರ, 4-5 ವರ್ಷಗಳ ಹಿಂದೆ ಬೆಂಗ ಳೂರನ್ನು ಪಂಜಾಬ್ ರಾಜ್ಯಕ್ಕೆ ಹೋಲಿ ಸುತ್ತಿದ್ದರು. ಅಲ್ಲಿ ಹೊರ ದೇಶ, ಹೊರ ರಾಜ್ಯಗಳಿಂದ ಬರುತ್ತಿದ್ದ ಪ್ರಮಾಣ ಎಷ್ಟು ಇತ್ತೆಂದರೆ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಬಲಿ ಯಾಗುತ್ತಿದ್ದರು. ಆದುದರಿಂದ, ಪಂಜಾಬ್ ಅನ್ನು ಉಡ್ತಾ ಪಂಜಾಬ್ ಎನ್ನುತ್ತಿದ್ದರು ಎಂದು ತಿಳಿಸಿದರು.

ಯಾವ ಕಾರಣಕ್ಕೂ ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ಬೆಳೆ ಯುವುದಕ್ಕೆ ಬಿಡಬಾರದು ಎಂದು ನಿರ್ಧರಿಸಿದ್ದೇವೆ. ಮಂಗಳೂರಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ದಂಧೆ ಬಗ್ಗೆ ಪರಿಶೀಲನಾ ಸಭೆಯಲ್ಲಿ ಮಾಹಿತಿ ಪಡೆದಿದ್ದೇನೆ. ತಿಂಗಳಲ್ಲಿ ಮಂಗಳೂರು ಡ್ರಗ್ಸ್ ಮುಕ್ತ ಆಗಬೇಕು ಎಂದು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಅದೇ ರೀತಿ ಎಲ್ಲ ಜಿಲ್ಲೆಗಳ ಎಸ್ಪಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿಓದಿದ್ದೀರಾ? ಹಿಂದೂ ಕಾರ್ಯಕರ್ತರು ಒಂಟಿಯಾಗಿ ಓಡಾಡಬೇಡಿ: ಮಾಜಿ ಸಚಿವ ಶ್ರೀರಾಮುಲು

ಕಾಂಗ್ರೆಸ್‌ ನೇತೃತ್ವದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 15-20 ದಿನಗಳಲ್ಲಿ 112 ಕೋಟಿ ರೂ.ಗಳ ಡ್ರಗ್ಸ್ ನಾಶ ಮಾಡಿದ್ದೇವೆ. ಇದು ನಿರಂತರವಾಗಿ ನಡೆಯಬೇಕು. ಮಾದಕ ವಸ್ತುಗಳಲ್ಲಿ ಗಾಂಜಾ ಅಷ್ಟೇ ಅಲ್ಲ, ಎಂಡಿಎಂಎ ಮಾತ್ರೆಗಳು, ಹೆರಾಯಿನ್ ಸೇರಿದಂತೆ ಅನೇಕ ಬಗೆಯ ವಸ್ತುಗಳು ಬಂದಿವೆ ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಸ್ವಾಮಿ ರಾಜ್ಯದ ಹೆಣ್ಣು ಮಕ್ಕಳ ಕ್ಷಮೆ ಕೇಳಲೇಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ

"ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಹಳ್ಳಿಯ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಮಾಜಿ...

ಮೋದಿ ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದ ಕೆ.ಎಸ್.ಈಶ್ವರಪ್ಪ

ರಾಜ್ಯ ಬಿಜೆಪಿಯ ವಿರುದ್ಧ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಲೋಕಸಭೆ ಚುನಾವಣೆ | ಪ್ರಣಾಳಿಕೆ: ಬಿಜೆಪಿ ‘ಸಂಕಲ್ಪ ಪತ್ರ’ V/s ಕಾಂಗ್ರೆಸ್‌ ‘ನ್ಯಾಯ ಪತ್ರ’; 10 ಪ್ರಮುಖ ಅಂಶಗಳು

ಮೂರನೇ ಬಾರಿಗೆ ಅಧಿಕಾರ ಹಿಡಿಯುತ್ತೇವೆಂದು ಅಬ್ಬರದ ಭಾಷಣ ಮಾಡುತ್ತಿರುವ ಬಿಜೆಪಿ, ಮುಂಬರು...