ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Date:

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿಲ್ಲಾ ಪಂಚಾಯತ್ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

- Advertisement -

ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

15 ದಿನಗಳಲ್ಲಿ ವರದಿ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಈ ಸುದ್ದಿ ಓದಿದ್ದೀರಾ?ಚುನಾವಣಾ ರಾಜಕೀಯಕ್ಕೆ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ ಎನ್ ಬಚ್ಚೇಗೌಡ ನಿವೃತ್ತಿ ಘೋಷಣೆ

ನಾಲ್ಕು ಇಲಾಖೆಗಳ ನಡುವೆ ಸಮನ್ವಯ
ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ – ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಹಾಸ್ಟೆಲ್‌ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ . ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು ಎಂದರು.

ಟ್ಯಾಂಕ್‌ಗಳ ಸ್ವಚ್ಛತಾ ಕಾರ್ಯ
ಪೈಪ್‌ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ನೈರ್ಮಲ್ಯ ಮತ್ತು ಸ್ವಚ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು ಎಂದು ಆರೋಗ್ಯ ಸಚಿವರು ಅಭಿಪ್ರಾಯ ಪಟ್ಟರು. ಸಾಮಾನ್ಯವಾಗಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯಡಿ ಆದ್ಯತೆಯನ್ನು ರಸ್ತೆ, ಇನ್ನಿತರ ಕಾಮಗಾರಿಗಳಿಗೆ ವಹಿಸಲಾಗುತ್ತದೆ ಎಂದರು.

39 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರು ಸಭೆಯ ಗಮನಕ್ಕೆ ತಂದರು.

ಸ್ವಚ್ಛತೆಯ ಬಗ್ಗೆ ಜಾಗೃತಿ
ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ನೀರಿನ ಸ್ವಚ್ಛತೆ ಬಗ್ಗೆ ಆದ್ಯತೆ ವಹಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಆರೋಗ್ಯ ಸಚಿವ ಗುಂಡೂ ರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ ಎನ್ ರಾಜಣ್ಣ, ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....