‘ನಂದಿನಿ’ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್‌ನ ಅಡಿಯಾಳಲ್ಲ: ಎಚ್‌ಡಿಕೆ ಕಿಡಿ

Date:

  • ನಂದಿನಿ ಮೊಸರಿನ ಸ್ಯಾಚೆಟ್‌ ಮೇಲೆ ‘ದಹಿ’ ಎಂದು ಹಿಂದಿ ಪದ ಬಳಕೆ
  • ‘ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ‘

ನಂದಿನಿ ಮೊಸರಿನ ಪೊಟ್ಟಣದ (ಸ್ಯಾಚೆಟ್) ಮೇಲೆ ‘ದಹಿ’ ಎಂದು ಹಿಂದಿ ಪದ ಬಳಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(ಎಫ್‌ಎಸ್‌ಎಸ್‌ಎಐ) ಆದೇಶ ನೀಡಿರುವುದು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಆದೇಶವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತು ‘ನಂದಿನಿ ನಮ್ಮದು’ ‘ಹಿಂದಿ ಹೇರಿಕೆ ನಿಲ್ಲಿಸಿ’ ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ಸರಣಿ ಟ್ವೀಟ್‌ ಮಾಡಿರುವ ಎಚ್‌.ಡಿ ಕುಮಾರಸ್ವಾಮಿ, “ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ‘ನಂದಿನಿ ಪ್ರೋ ಬಯೊಟಿಕ್’ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್‌ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್ ಜತೆ ನಂದಿನಿಯನ್ನು ವಿಲೀನ ಮಾಡುವುದಾಗಿ ಹೇಳಿದ್ದರು. ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಆರಂಭವೇ” ಎಂದು ಪ್ರಶ್ನಿಸಿದ್ದಾರೆ.

“ಶಾ ಅವರ ಹೇಳಿಕೆಯನ್ನು ಕನ್ನಡಿಗರು ಖಂಡಿಸಿದ್ದರು. ನಾನೂ ವಿರೋಧಿಸಿದ್ದೆ. ಆಮೇಲೆ ಸುಮ್ಮನಾಗಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಈಗ ಆಹಾರ ಸುರಕ್ಷತಾ ಪ್ರಾಧಿಕಾರದ ಮೂಲಕ ಹಿಂಬಾಗಿಲಿನಿಂದ ಮೊಸರಿನ ಪಕ್ಕ ದಹಿ ಸೇರಿಸಿ ಕನ್ನಡಿಗರ ಸ್ವಾಭಿಮಾನಕ್ಕೆ ಸಡ್ಡು ಹೊಡೆದಿದೆ. ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?” ಎಂದು ಕಿಡಿಕಾರಿದ್ದಾರೆ.

“ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು” ಎಂದು ಆರೋಪಿಸಿದ್ದಾರೆ.

“ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿದ್ದೇವೆ ಎಂದರೆ ಇಷ್ಟ ಬಂದಹಾಗೆ ಒಳ ನುಸುಳುವುದಲ್ಲ, ಸೌಮ್ಯವಾಗಿದ್ದೇವೆ ಎಂದರೆ ಸುಮ್ಮನಿದ್ದೇವೆ ಎಂದಲ್ಲ. ನಂದಿನಿ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ ಅಡಿಯಾಳಲ್ಲ. ಕರ್ನಾಟಕ ಭಾರತ ಗಣರಾಜ್ಯದ ಒಂದು ಭಾಗವೇ ಹೊರತು ಗುಜರಾತಿನ ವಸಾಹತುವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈಚೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಬ್ಬರೂ ಕರ್ನಾಟಕಕ್ಕೆ ಬಲು ಬಿಡುವಾಗಿ ಬಂದರು ಎಂದರೆ, ಕೇವಲ ಚುನಾವಣೆ ಉದ್ದೇಶಕ್ಕೇ ಎಂದುಕೊಂಡಿದ್ದೆ. ಆದರೆ, ಕರ್ನಾಟಕದಲ್ಲಿ ನಡೆದ ಅವರಿಬ್ಬರ ಶೋಗಳ ಸವಾರಿ ನಮ್ಮ ನಂದಿನಿಯ ಹೆಸರಿಗೇ ಕುತ್ತು ತರುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಂದಿನಿ ಮೊಸರಿನ ಪೊಟ್ಟಣದಲ್ಲಿ ಹಿಂದಿ ಪದ ಬಳಸಲು ಆದೇಶ ; ಕರ್ನಾಟಕ, ತಮಿಳುನಾಡಿನಲ್ಲಿ ಆಕ್ರೋಶ

“ಆರೂವರೆ ಕೋಟಿ ಕನ್ನಡಿಗರ ಮನೋಭಾವಕ್ಕೆ ವಿರುದ್ಧವಾಗಿ ದಹಿ ಎನ್ನುವ ಪದವನ್ನು ಮುದ್ರಿಸಿದ್ದೇ ಕೆಎಂಎಫ್ ಮಾಡಿರುವ ದೊಡ್ದ ತಪ್ಪು. ಇದು ರಾಜ್ಯ ಬಿಜೆಪಿ ಸರಕಾರದ ಗಮನಕ್ಕೆ ಬಾರದೆ ಆಗಿರುವ ಕೃತ್ಯವಲ್ಲ. ಕಾಣದ ಕೈಗಳ ಕಳ್ಳಾಟ ಇಲ್ಲಿ ಸ್ಪಷ್ಟ” ಎಂದು ದೂರಿದ್ದಾರೆ.

“ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ  ಹಿಂದಿ ಹೇರಿಕೆ ಆಗಿದೆ. ಅದನ್ನು ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ. ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಯಶವಂತಪುರದಲ್ಲಿ ಪಂಚರತ್ನ ರಥಯಾತ್ರೆ ನಡೆಯುವ ವೇಳೆ ಅಭಿಮಾನಿಗಳು, ಜೆಡಿಎಸ್‌ ಕಾರ್ಯಕರ್ತರು ‘ನಂದಿನಿ ಉಳಿಸಿ’ ಎಂದು ಮೊಸರು, ಹಾಲಿನ ಹಾರ ಹಾಕಿ ನನ್ನ ಗಮನ ಸೆಳೆದಿದ್ದರು. ನಂದಿನಿಗೆ ಕುಣಿಕೆ ಬಿಗಿಯುವ ಯಾವುದೇ ದುಷ್ಕೃತ್ಯ ಸಹಿಸುವ ಪ್ರಶ್ನೆಯೇ ಇಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....