ನೇತಾಜಿ ದೇಶವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನ. ದೇಶದ ಬಗ್ಗೆ ಅಪಾರ ಗೌರವಾಭಿಮಾನ ಹೊಂದಿದ್ದ ಮಹಾನ್ ದೇಶಭಕ್ತ. ಈಗಿನ ಐಎಎಸ್‌ನಂತೆ ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ತಮ್ಮ ಉಜ್ವಲ ಭವಿಷ್ಯವನ್ನು ತ್ಯಾಗ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಮೀಸಲಾಗಿಟ್ಟರು. ಎರಡು ಬಾರಿ ಕಾಂಗ್ರೆಸ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಎಂದು ಸಿಎಂ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲ್ಕತ್ತಾದ ಭೀಭತ್ಸ ರೇಪ್-ಹತ್ಯೆ ತನಿಖೆಯಲ್ಲಿ ವಿಫಲವಾಯಿತೇ ಸಿಬಿಐ?

ಮಹಾತ್ಮಾ ಗಾಂಧಿಯವರು ಪ್ರತಿಪಾದಿಸುತ್ತಿದ್ದ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ನಡೆದು ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟಸಾಧ್ಯ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು. ಆದ್ದರಿಂದ ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್‌ಎ (ಇಂಡಿಯನ್ ನ್ಯಾಷನಲ್ ಆರ್ಮಿ)ಯನ್ನು ಸ್ಥಾಪಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್‌ರ ಜನ್ಮದಿಂದು ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ. ಈ ದಿಸೆಯಲ್ಲಿ ಸರ್ಕಾರ ಈ ಮಹಾನ್ ನಾಯಕನಿಗೆ ಗೌರವ ಸಲ್ಲಿಸಿದೆ ಎಂದರು.

ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಕೊಳ್ಳಬೇಕಾಗಿರುವುದರಿಂದ 2025ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X