ಕಲ್ಲಡ್ಕ ಪ್ರಭಾಕರ ಭಟ್ ಭಾಷಣವನ್ನು ಬರಹ ರೂಪದಲ್ಲಿ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ

Date:

  • ಪ್ರಭಾಕರ್ ಭಟ್ ದ್ವೇಷ ಭಾಷಣ ವಿಡಿಯೋ ಪ್ರದರ್ಶನಕ್ಕೆ ಅವಕಾಶ ಕೊಡಿ: ಎಸ್ ಬಾಲನ್
  • ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ಇಲ್ಲ

ಎಫ್ಐಆರ್ ರದ್ದುಗೊಳಿಸಬೇಕು ಮತ್ತು ವಿಚಾರಣೆಗೆ ತಡೆ ನೀಡಬೇಕು ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಂ ಅವರು ವಾದ ಮಂಡಿಸಿದರು.

- Advertisement -

“ಎಫ್ಐಆರ್‌ನಲ್ಲಿ ಸೆಕ್ಷನ್‌ಗಳನ್ನು ಹಾಕಲೆಂದೇ ಭಾಷಣದ ಮಧ್ಯದಿಂದ ಪದಗಳನ್ನು ಹೆಕ್ಕಿ ತೆಗೆಯಲಾಗಿದೆ. ದೂರುದಾರರು ರಾಜಕೀಯ ಕಾರ್ಯಕರ್ತೆಯಾಗಿದ್ದಾರೆ. ಭಾಷಣದ ಕೆಲ ಪದಗಳನ್ನು ಹೆಕ್ಕಿ ತೆಗೆದು ಅದಕ್ಕೆ ಅಪರಾಧದ ಬಣ್ಣ ನೀಡಲಾಗಿದೆ. ಈ ಹಿಂದೆ ಸರ್ಕಾರವೇ ಹೈಕೋರ್ಟ್‌ನಲ್ಲಿ ಪ್ರಭಾಕರ ಭಟ್ ಬಂಧನ ಮಾಡಲ್ಲ ಎಂದು ಹೇಳಿದೆ. ಅದರ ಅರ್ಥ, ಪೊಲೀಸರು ರಾಜಕೀಯ ಒತ್ತಡದಿಂದ ಪ್ರಕರಣ ದಾಖಲಿಸಿದ್ದಾರೆ ಎಂಬುದು ಸರ್ಕಾರಕ್ಕೆ ಮನವರಿಕೆ ಆಗಿದೆ. ಸುಳ್ಳು ದೂರನ್ನು ಉದ್ದೇಶಪೂರ್ವಕವಾಗಿ ದಾಖಲಿಸಿದ್ದಾರೆ. ಹಾಗಾಗಿ ತಕ್ಷಣಕ್ಕೆ ತಡೆಯಾಜ್ಞೆ ನೀಡಬೇಕು” ಎಂದು ಕೋರಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಎಸ್ ಬಾಲನ್ “ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ಅಬಿಚ್ಯುವಲ್ ಅಫೆಂಡರ್(ನಿರಂತರ ತಪ್ಪು ಎಸಗುವವ) ಆಗಿದ್ದಾನೆ. ರಾಜ್ಯಾದ್ಯಂತ ದ್ವೇಷ ಭಾಷಣ ಮಾಡುತ್ತಾ, ಕೋಮುಗಲಭೆ ಸೃಷ್ಟಿಸಿ ಹಿಂಸಾಚಾರಗಳನ್ನು ಮಾಡಿದ ಇತಿಹಾಸ ಇದೆ. ಈವರೆಗೆ ಈತನ ವಿರುದ್ದ ದಾಖಲಾದ ದೂರುಗಳನ್ನು ಪೀಠ ತರಿಸಿಕೊಳ್ಳಬೇಕು” ಎಂದು ವಿನಂತಿಸಿದರು.

“ಮುಸ್ಲಿಮರಿಗೆ ದಿನಕ್ಕೊಬ್ಬ ಗಂಡ ಎಂದು ಆರೋಪಿ ಹೇಳಿರುವುದು ಇಡೀ ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ. ಹಾಗಾಗಿ, ರಾಜ್ಯಾದ್ಯಂತ ಮುಸ್ಲಿಂ ಸಮುದಾಯ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಸುಪ್ರಿಂ ಕೋರ್ಟ್ ತೀರ್ಪುಗಳು, ಕಾನೂನುಗಳು ಈ ರೀತಿಯ ದ್ವೇಷ ಭಾಷಣಕ್ಕೆ ಅವಕಾಶ ಕೊಡುವುದಿಲ್ಲ. ಆರೋಪಿ ಪರ ವಕೀಲರು ಭಾಷಣವನ್ನು ಬರಹ ರೂಪದಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ಆ ಕೆಲಸವನ್ನು ಸರ್ಕಾರ ಮಾಡಬೇಕೇ ಹೊರತು ಆರೋಪಿ ಪರ ವಕೀಲರಲ್ಲ. ಸರ್ಕಾರಕ್ಕೆ ಈ ನಿಟ್ಟಿನಲ್ಲಿ ನಿರ್ದೇಶನ ನೀಡಬೇಕು. ಅದಲ್ಲದೇ, ಆರೋಪಿಯ ಪೂರ್ತಿ ಭಾಷಣವನ್ನು ಕಲಾಪದಲ್ಲಿ ಕೇಳಲು ಕೋರ್ಟ್ ನಲ್ಲಿ ವಿಡಿಯೋ ಪ್ರದರ್ಶನಕ್ಕೆ ಅವಕಾಶ ಕೊಡಬೇಕು. ಆರೋಪಿಯ ಪ್ರಕರಣಕ್ಕೆ ತಡೆಯಾಜ್ಞೆ ನೀಡಬಾರದು” ಎಂದು ಎಸ್ ಬಾಲನ್ ಮನವಿ ಮಾಡಿದರು.

“ತಡೆಯಾಜ್ಞೆ ಕೊಡಲು ಆಗಲ್ಲ‌. ಆರೋಪಿಯನ್ನು ಬಂಧಿಸುವುದಿಲ್ಲ ಎಂದು ಸರ್ಕಾರ ಈ ಹಿಂದೆ ನೀಡಿದ ಹೇಳಿಕೆಯಂತೆ ಕೋರ್ಟ್ ನೀಡಿದ ರಿಲೀಫ್ ಮುಂದಿನ ದಿನಾಂಕದವರೆಗೆ ಮುಂದುವರೆಯಲಿದೆ. ಆರೋಪಿಯ ಭಾಷಣದ ಪೂರ್ಣಪಾಠವನ್ನು ಬರಹ ರೂಪದಲ್ಲಿ ಕೋರ್ಟ್ ಗೆ ಸಲ್ಲಿಸಿ” ಎಂದು ನ್ಯಾಯಮೂರ್ತಿಗಳು ಸರ್ಕಾರಕ್ಕೆ ನಿರ್ದೇಶನ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...