ಪರಿಷತ್‌ಗೆ ಸುಧಾಮ್ ದಾಸ್ : ಅಭಿಪ್ರಾಯ ಕೇಳಿಲ್ಲ ಎಂದು ಹೈಕಮಾಂಡ್‌ಗೆ ಪತ್ರ ಬರೆದ ನಾಲ್ವರು ಸಚಿವರು

Date:

  • ಪತ್ರಕ್ಕೆ ಕೆ ಎಚ್ ಮುನಿಯಪ್ಪ, ಆರ್ ಬಿ ತಿಮ್ಮಾಪುರ, ಮಹದೇವಪ್ಪ, ಡಾ.ಜಿ.ಪರಮೇಶ್ವರ್ ಸಹಿ
  • ‘ನಾಮನಿರ್ದೇಶನ ಮಾಡುವಾಗ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ’ ಎಂದು ಉಲ್ಲೇಖಿಸಿದ ಸಚಿವರು

ಮೂರು ವಿಧಾನ ಪರಿಷತ್‌ ಸ್ಥಾನಗಳ ಪೈಕಿ ಮಾಜಿ ಐಎಎಸ್ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ಕೂಡ ಅಂತಿಮಗೊಳಿಸಿ ರಾಜ್ಯಪಾಲರಿಗೆ ಕಳುಹಿಸಲು ಶಿಫಾರಸು ಮಾಡಲಾಗಿದೆ ಎಂಬ ಸುದ್ದಿಯ ನಡುವೆಯೇ, ಇದಕ್ಕೆ ವಿರೋಧ ವ್ಯಕ್ತಪಡಿಸಿ ನಾಲ್ವರು ಸಚಿವರು ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.

ಸುಧಾಮ್ ದಾಸ್ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಪತ್ರ ಬರೆದ ನಾಲ್ವರು ಸಚಿವರು ಕೂಡ ದಲಿತ ಸಮುದಾಯದ ಸಚಿವರು ಎಂಬುದು ವಿಶೇಷ.

ವಿಧಾನ ಪರಿಷತ್‌ಗೆ ನಾಮನಿರ್ದೇಶನಕ್ಕೆ ಹಿರಿಯ ನಟಿ ಉಮಾಶ್ರೀ, ಸುಧಾಮ್ ದಾಸ್, ಎಂಆರ್ ಸೀತಾರಾಮ್ ಮೂವರು ಹೆಸರನ್ನ ವಿಧಾನಪರಿಷತ್ ಗೆ ನಾಮನಿರ್ದೇಶನ ಮಾಡಲು ಶಿಫಾರಸು ಮಾಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸುಧಾಮ್ ದಾಸ್ ನಾಮ ನಿರ್ದೇಶನಕ್ಕೆ ವಿರೋಧ ವ್ಯಕ್ತಪಡಿಸಿರುವ ಸಚಿವರಾದ ಹೆಚ್.ಸಿ ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಕೆ.ಎಚ್ ಮುನಿಯಪ್ಪ ಮತ್ತು ಆರ್.ಬಿ ತಿಮ್ಮಾಪುರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

‘ಸುಧಾಮ್ ದಾಸ್ ಜಾರಿ ನಿರ್ದೇಶನಾಲಯದಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ಕೆಲ ವರ್ಷಗಳ ಹಿಂದೆ ಏಕಾಏಕಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಬಳಿಕ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದರು. ಕಳೆದ ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಸುಧಾಮ್ ದಾಸ್ ಅವರ ಹೆಸರನ್ನು ಪರಿಷತ್ ಗೆ ಅಂತಿಮಗೊಳಿಸಲಾಗಿದೆ. ವಿಧಾನ ಪರಿಷತ್‌ಗೆ ಸುಧಾಮ್ ದಾಸ್ ನಾಮನಿರ್ದೇಶನ ಮಾಡುವಾಗ ನಮ್ಮ ಅಭಿಪ್ರಾಯವನ್ನ ಕೇಳಿಲ್ಲ. ನಾಮನಿರ್ದೇಶನವನ್ನ ನಾವು ವಿರೋಧಿಸುತ್ತೇವೆ ಎಂದು ನಾಲ್ವರು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಸುಧಾಮ್ ದಾಸ್

‘ಹೆಚ್ ಪಿ ಸುಧಾಮ್ ದಾಸ್ ವಿಧಾನಸಭಾ ಚುನಾವಣೆಯ ವೇಳೆ ಪಕ್ಷಕ್ಕೆ ದೊಡ್ಡ ಮಟ್ಟದ ಕೆಲಸ ಏನೂ ಮಾಡಿಲ್ಲ. ಅವರಿಗಿಂತ ಹೆಚ್ಚು ಪಕ್ಷಕ್ಕೆ ದುಡಿದವರು ಹಲವರಿದ್ದಾರೆ. ಅಂತವರಿಗೆ ಮೊದಲು ಅವಕಾಶ ನೀಡಬೇಕು. ಸುಧಾಮ್ ದಾಸ್ ಆಯ್ಕೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ‘ಇದು ಪಕ್ಷದ ಆಂತರಿಕ ವಿಚಾರ. ಬೇಕು, ಬೇಡ, ಸಮುದಾಯ, ಪ್ರಾಂತ್ಯ ಅದೆಲ್ಲವೂ ಚರ್ಚೆಯಾಗುತ್ತದೆ. ನಾನು ಅದನ್ನು ಮಾಧ್ಯಮದ ಮುಂದೆ ಹೇಳೋದಿಲ್ಲ. ನನ್ನ ಅಭಿಪ್ರಾಯವನ್ನು ಹೈಕಮಾಂಡ್‌ಗೆ ಹೇಳುತ್ತೇನೆ. ಪಕ್ಷದ ಹಿರಿಯ ನಾಯಕರ ಜೊತೆ ಮಾತನಾಡುತ್ತೇನೆ’ ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ...

ಪರಿಷತ್‌ ಚುನಾವಣೆ | ನನ್ನ ಅಭಿಪ್ರಾಯ ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಪರಮೇಶ್ವರ್‌

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಬಂಧನಕ್ಕೆ ಪಕ್ಷ...

ಕನ್ಯಾಕುಮಾರಿ| ವಿವೇಕಾನಂದ ಸ್ಮಾರಕದಲ್ಲಿ ಮೂರು ದಿನ ಪ್ರಧಾನಿ ಧ್ಯಾನ; 2 ಸಾವಿರ ಪೊಲೀಸ್ ಸಿಬ್ಬಂದಿಗಳ ಕಾವಲು!

ಕನ್ಯಾಕುಮಾರಿಯ ಪ್ರಸಿದ್ಧ ವಿವೇಕಾನಂದ ಸ್ಮಾರಕದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು...