ಮಂಡ್ಯ ಬೇಕು, ಇಲ್ಲಾಂದ್ರೆ ರಾಜಕೀಯವೇ ಬೇಡ ಎಂದ ಸುಮಲತಾ

Date:

ಬಿಜೆಪಿ-ಜೆಡಿಎಸ್‌ ಮೈತ್ರಿಯದ ಬಳಿಕ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಯಾರಿಗೆ ಕೊಡಬೇಕೆಂಬ ಕಗ್ಗಂಟು ಎದುರಾಗಿದೆ. ಬಿಜೆಪಿಗೆ ಬೆಂಬಲ ನೀಡಿದ್ದ ಸಂಸದೆ ಸುಮಲತಾ ಮಂಡ್ಯದಲ್ಲಿಯೇ ಸ್ಪರ್ಧಿಸುತ್ತೇನೆಂದು ಹೇಳುತ್ತಿದ್ದಾರೆ. ಆದರೆ, ಜೆಡಿಎಸ್‌ ಮಂಡ್ಯ ನಮಗೇ ಬೇಕೆಂದು ಪಟ್ಟು ಹಿಡಿದಿದೆ. ಈ ನಡುವೆ, ಬಿಜೆಪಿ ನಾಯಕರೊಂದಿಗೆ ಸುಮಲತಾ ಸಭೆ ನಡೆಸಿದ್ದು, ಬಿಜೆಪಿಯಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಆದರೆ, ಮಂಡ್ಯ ಕ್ಷೇತ್ರವಲ್ಲದೆ, ಬೇರಾವುದೇ ಕ್ಷೇತ್ರ ನೀಡಿದರೂ ನಾನು ಸ್ಪರ್ಧಿಸುವುದಿಲ್ಲ. ಮಂಡ್ಯ ಕೊಡದಿದ್ದರೆ, ನನಗೆ ರಾಜಕೀಯವೇ ಬೇಡ ಎಂದಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಸುಮಲತಾ ಮಾತನಾಡಿದ್ದು, “ನನ್ನ ಬಗ್ಗೆ ಯಾವುದೇ ಕಳಂಕ ಇಲ್ಲ. ಮಂಡ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳುತ್ತದೆ ಎನ್ನಿಸುತ್ತಿದೆ. ನನ್ನ ಬೆಂಬಲಿಗರಲ್ಲಿ ಹಲವರು ಕಾಂಗ್ರೆಸ್‌ ಕಾರ್ಯಕರ್ತರಿದ್ದಾರೆ. ಅವರು ಕಾಂಗ್ರೆಸ್‌ಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಾನು ಪ್ರಯತ್ನಿಸಿಲ್ಲ. ಮೋದಿ ನೇತೃತ್ವವೇ ಸರಿಯೆಂದು ನಾನು ಭಾವಿಸಿದ್ದೇನೆ” ಎಂದು ಹೇಳಿದ್ದು, ಬಿಜೆಪಿಯಿಂದ ಸ್ಪರ್ಧಿಸುವ ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಭೆಯಲ್ಲಿ ಬಿಜೆಪಿ ಏನು ನಿರ್ಧಾರ ತೆಗೆದುಕೊಳ್ಳಬೇಕು. ಏನು ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಿದ್ದೇವೆ. ಅಧಿಕೃತವಾಗಿ ಮಂಡ್ಯ ಬಿಜೆಪಿಗಾ ಅಥವಾ ಜೆಡಿಎಸ್‌ಗಾ ಎಂಬ ಎಂಬ ಬಗ್ಗೆ ಮಾತು ಬಂದಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...