ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಹಾಕಲಾಗಿದೆ ಎಂಬ ಆರೋಪದ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಮಾಧ್ಯಮಗಳು ವರದಿ ಮಾಡಿರುವ ಈ ಆರೋಪವನ್ನೇ ಬಿಜೆಪಿ ವಿವಾದವನ್ನಾಗಿಸಿದೆ. ಇದರ ಬೆನ್ನಲ್ಲೇ ವಿಧಾನಸೌಧ
ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಇನ್ನು ಬಿಜೆಪಿ ಸಹ ಸಹ ದೂರು ನೀಡಿದೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ: ಅಪರಿಚಿತ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು
ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ವಿಧಾನಸೌಧ ಪೊಲೀಸರು
Suo Moto Case Registered against Unknown Person at Vidha Soudha Police Station@zoo_bear@Mutturaju7@BlrCityPolice @INCKarnataka pic.twitter.com/G4xAHBhCbn
— Irshad Venur (@muhammadirshad6) February 27, 2024
ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಸಿರ್ ಹುಸೇನ್ ಅವರ ಬೆಂಬಲಿಗರು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ನಗರದ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ನ ನಾಸೀರ್ ಹುಸೇನ್ ಅವರು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಹೇಳಿಕೆ ಕೊಡುತ್ತಿದ್ದ ಸಂದರ್ಭದಲ್ಲಿ ಅವರ ಬೆಂಬಲಿಗರು ‘ಪಾಕಿಸ್ತಾನ್ ಝಿಂದಾಬಾದ್’ ಎಂದು ಘೋಷಣೆ ಕೂಗಿದ್ದಾರೆ. ಈ ರೀತಿಯ ದೇಶದ್ರೋಹ ಘೋಷಣೆಗಳನ್ನು ಕಾಂಗ್ರೆಸ್ ಪಕ್ಷದ ಬೆಂಬಲಿಗರು ಕೂಗಿರುವುದು ಅಕ್ಷಮ್ಯ ಅಪರಾಧವಾಗಿದೆ. ಕೂಡಲೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.
ಪೊಲೀಸರು ದಾಖಲಿಸಿಕೊಂಡ ಎಫ್‌ಐಆರ್ ಹೀಗಿದೆ:
ದಿನಾಂಕ: 27-02-2024ರಂದು ನಡೆದ ರಾಜ್ಯಸಭಾ ಚುನಾವಣೆ ನಂತರ ಗೆದ್ದ ವ್ಯಕ್ತಿ ಡಾ. ನಾಸೀರ್ ಹುಸೇನ್ ರವರ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಸಂಜೆ 6-00 ಗಂಟೆಯಿಂದ 6-30 ರ ಸಮಯದಲ್ಲಿ ಯಾರೋ ಒಬ್ಬ ವ್ಯಕ್ತಿ ವಿಧಾನಸೌಧದ ಪೂರ್ವ ದ್ವಾರದ ಬಳಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಎಂಬ ಸುದ್ದಿ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಬರುತ್ತಿದೆ. ಈ ಸಂಬಂಧವಾಗಿ ಲಭ್ಯವಿರುವ ವಿಡಿಯೋಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
A video of @NasirHussainINC's supporters saying 'Nasir Saab Zindabad' is reported/shared by several Kannada News Channels with the claim that it is 'Pakistan Zindabad'.
The same is now getting shared by several BJP supporters. pic.twitter.com/vJrCOMG3ZT— Mohammed Zubair (@zoo_bear) February 27, 2024
ನಿಜಕ್ಕೂ ಆಗಿದ್ದೇನು?
“ನಾಸಿರ್ ಸಾಬ್ ಜಿಂದಾಬಾದ್” ಎಂದು ಕೂಗಿರುವುದನ್ನು ತಿರುಚಿ “ಪಾಕಿಸ್ತಾನ್ ಜಿಂದಾಬಾದ್” ಎಂದು ಕೂಗಿರುವುದಾಗಿ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸಿದೆ. ಇದನ್ನೇ ಅಸ್ತ್ರವನ್ನಾಗಿಸಿಕೊಂಡ ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಿದೆ. ಮಾಧ್ಯಮಗಳ ಈ ಸುಳ್ಳು ಸುದ್ದಿಯ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ ಪೊಲೀಸರು ಅಪರಿಚಿತನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
